ರಾಜೀನಾಮೆ ಘೋಷಣೆ ಮಾಡಿದ ಉತ್ತರಾಖಂಡ ಮುಖ್ಯಮಂತ್ರಿ!

ಡೆಹರಾಡೂನ್, ಜುಲೈ 02; ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಉತ್ತರಾಖಂಡ ಮುಖ್ಯಮಂತ್ರಿ ತೀರ್ಥಸಿಂಗ್ ರಾವತ್ ಘೋಷಣೆ ಮಾಡಿದ್ದಾರೆ. ಹೊಸ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಶನಿವಾರ ಮಹತ್ವದ ಸಭೆ ಕರೆಯಲಾಗಿದೆ.

ಉತ್ತರಾಖಂಡ ಬಿಜೆಪಿಯಲ್ಲಿ ಶುಕ್ರವಾರ ಹಲವು ಚಟುವಟಿಕೆಗಳು ನಡೆದವು. ಮುಖ್ಯಮಂತ್ರಿ ಬದಲಾವಣೆ ಸುದ್ದಿಯೂ ಹಬ್ಬಿದ್ದು, ಅದು ಈಗ ಖಚಿತವಾಗಿದೆ. ಸಂಸದರೂ ಆಗಿರುವ ಮುಖ್ಯಮಂತ್ರಿ ತೀರ್ಥಸಿಂಗ್ ರಾವತ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿ ಮಾತುಕತೆ ನಡೆಸಿದರು.

ತೀರ್ಥಸಿಂಗ್ ರಾವತ್ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. "ಶನಿವಾರ ಬೆಳಗ್ಗೆ 11 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಲಿದ್ದೇನೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ" ಎಂದು ಹೇಳಿದರು.

ಆದರೆ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ತೀರ್ಥಸಿಂಗ್ ರಾವತ್ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು.

ನಾಲ್ಕು ತಿಂಗಳ ಹಿಂದೆ ತೀರ್ಥಸಿಂಗ್ ರಾವತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಆರು ತಿಂಗಳಿನಲ್ಲಿ ಅವರು ಶಾಸಕರಾಗಿ ಆಯ್ಕೆಯಾಗಬೇಕಿದೆ. ಆದರೆ ಕೋವಿಡ್ ಕಾರಣಕ್ಕೆ ಉಪ ಚುನಾವಣೆ ಸದ್ಯಕ್ಕೆ ನಡೆಯುತ್ತಿಲ್ಲ. ಇದರಿಂದಾಗಿ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ.

ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ

ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ

ತೀರ್ಥಸಿಂಗ್ ರಾವತ್ ರಾವತ್ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಸೆಪ್ಟೆಂಬರ್ 10ರೊಳಗೆ ಶಾಸಕರಾಗಿ ಆಯ್ಕೆಯಾಗಬೇಕು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದರೆ ಅವರು ಆಯ್ಕೆಯಾಗಲಿದ್ದಾರೆ. ಆದರೆ ಕೋವಿಡ್ ಕಾರಣದಿಂದಾಗಿ ಚುನಾವಣೆ ವಿಳಂಬವಾಗಿದೆ. ಇದರಿಂದಾಗಿ ನಾಯಕತ್ವ ಬದಲಾವಣೆ ಅನಿವಾರ್ಯವಾಗಿದೆ.

ಶಾಸಕರಾಗಿ ಆಯ್ಕೆಯಾಗಿಲ್ಲ

ಶಾಸಕರಾಗಿ ಆಯ್ಕೆಯಾಗಿಲ್ಲ

ತೀರ್ಥಸಿಂಗ್ ರಾವತ್ ರಾವತ್ ಸಂಸದರು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಅವರು 6 ತಿಂಗಳಿನಲ್ಲಿ ಶಾಸಕರಾಗಿ ಆಯ್ಕೆಯಾಗಬೇಕಿತ್ತು. ಆದರೆ ಈಗ ಉಪ ಚುನಾವಣೆ ನಡೆಯದ ಕಾರಣ ಅವರು ಶಾಸಕರಾಗಿ ಆಯ್ಕೆಗೊಳ್ಳುವುದು ಸಾಧ್ಯವಿಲ್ಲ. ಇದರಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.

ಯಾರ ಹೆಸರು ಮುಂಚೂಣಿಯಲ್ಲಿದೆ?

ಯಾರ ಹೆಸರು ಮುಂಚೂಣಿಯಲ್ಲಿದೆ?

ತೀರ್ಥಸಿಂಗ್ ರಾವತ್ ರಾವತ್ ರಾಜೀನಾಮೆ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆ ಎದ್ದಿದೆ. ಸತ್ಪಾಲ್ ರಾವತ್ ಮತ್ತು ಧನ್‌ಸಿಂಗ್ ರಾವತ್ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಯಾರು ಮುಖ್ಯಮಂತ್ರಿ ಎಂಬುದು ಶನಿವಾರ ತೀರ್ಮಾನವಾಗಲಿದೆ.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ

ಶನಿವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಹೊಸ ಶಾಸಕಾಂಗ ಪಕ್ಷದ ನಾಯಕನನ್ನು ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ರಾಜ್ಯ ಬಿಜೆಪಿ ವೀಕ್ಷಕರಾಗಿ ಕೇಂದ್ರ ಸಚಿವ ನರೇದ್ರಸಿಂಗ್ ತೋಮರ್ ನೇಮಕಗೊಂಡಿದ್ದು, ಅವರು ಸಭೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜೀನಾಮೆ ಸಲ್ಲಿಕೆ

ತಡರಾತ್ರಿಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ತೀರ್ಥಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+