ಉತ್ತರಾಖಂಡ್ ಸಿಎಂ ತೀರಥ್ ಸಿಂಗ್ ರಾವತ್‌ರಿಗೆ ಕೊರೊನಾವೈರಸ್

ನವದೆಹಲಿ, ಮಾರ್ಚ್ 22: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ಮಧ್ಯೆ ಉತ್ತರಾಖಂಡ್ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ತಮಗೆ ಕೊರೊನಾವೈರಸ್ ಸೋಂಕು ತಗುಲಿರುವ ಬಗ್ಗೆ ಸ್ವತಃ ತೀರಥ್ ಸಿಂಗ್ ರಾವತ್ ಅವರು ಟ್ವೀಟ್ ಮಾಡಿದ್ದಾರೆ. ನನ್ನ ಕೊರೊನಾ ಪರೀಕ್ಷಾ ವರದಿ ಧನಾತ್ಮಕವಾಗಿ ಬಂದಿದೆ. ನಾನು ಚೆನ್ನಾಗಿದ್ದೇನೆ ಮತ್ತು ನನಗೆ ಯಾವುದೇ ಸಮಸ್ಯೆ ಇಲ್ಲ" ಎಂದು ಬರೆದುಕೊಂಡಿದ್ದಾರೆ.

"ವೈದ್ಯರ ಮೇಲ್ವಿಚಾರಣೆಯಲ್ಲಿ ನಾನು ಸ್ವಯಂಪ್ರೇರಿತ ದಿಗ್ಬಂಧನದಲ್ಲಿ ಇದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ನಿಕಟ ಸಂಪರ್ಕದಲ್ಲಿ ಇದ್ದವರು ದಯವಿಟ್ಟು ಜಾಗರೂಕರಾಗಿರಿ ಮತ್ತು ಕೊರೊನಾವೈರಸ್ ಸೋಂಕಿತ ತಪಾಸಣೆಗೆ ಒಳಗಾಗಬೇಕು" ಎಂದು ತೀರಥ್ ಸಿಂಗ್ ರಾವತ್ ಮನವಿ ಮಾಡಿಕೊಂಡಿದ್ದಾರೆ.

 Uttarakhand CM Tirath Singh Rawat Has Tested Positive For Coronavirus

ಭಾರತದಲ್ಲಿ ಕೊರೊನಾವೈರಸ್ ದಾಖಲೆ:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 46951 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 21,180 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಂದೇ ದಿನ 212 ಜನರು ಪ್ರಾಣ ಬಿಟ್ಟಿದ್ದಾರೆ. ಒಟ್ಟು 1,16,46,081 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಈವರೆಗೂ 1,11,51,468 ಸೋಂಕಿತರು ಗುಣಮುಖರಾಗಿದ್ದು, ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆ 1,59,967ಕ್ಕೆ ಏರಿಕೆಯಾಗಿದೆ. ಉಳಿದಂತೆ 3,34,646 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+