ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಇಂದೇ ರಾಜೀನಾಮೆ?

|
Google Oneindia Kannada News

ಡೆಹ್ರಾಡೂನ್, ಮಾರ್ಚ್ 09: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡುವ ಸಾಧ್ಯತೆ ನಿಚ್ಚಳವಾಗಿದೆ.

ಮುಂದಿನ ಫೆಬ್ರವರಿಯಲ್ಲಿ ಉತ್ತರಾಖಂಡ್ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ರಾವತ್ ಅವರು ಬಿಜೆಪಿ ಸ್ಥಳೀಯ ಶಾಸಕರು ಹಾಗೂ ಜನರ ಮೆಚ್ಚುಗೆ ಗಳಿಸಲು ವಿಫಲರಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಉತ್ತರಾಖಂಡ್: ದಿಢೀರ್ ಕೋರ್ ಕಮಿಟಿ ಸಭೆ ನಡೆಸಿದ ಬಿಜೆಪಿಉತ್ತರಾಖಂಡ್: ದಿಢೀರ್ ಕೋರ್ ಕಮಿಟಿ ಸಭೆ ನಡೆಸಿದ ಬಿಜೆಪಿ

ಹೀಗಾಗಿ ತನ್ನಿಂದ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಬಾರದು ಎನ್ನುವ ಕಾರಣ ನೀಡಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Uttarakhand CM Trivendra Singh Rawat Likely To Resign Today, Amid Political Crisis

ರಾವತ್ ಅವರ ಕಾರ್ಯ ವೈಖರಿ ವಿರೋಧಿಸಿ ಹೈಕಮಾಂಡ್‌ಗೂ ಕೆಲವರು ದೂರು ಸಲ್ಲಿಸಿದ್ದಾರೆ. ಹೀಗಾಗಿ ರಮಣ್ ಸಿಂಗ್ ಹಾಗೂ ದುಷ್ಯಂತ್ ಸಿಂಗ್ ಸಮಿತಿಯು ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವರದಿ ಸಲ್ಲಿಸಿತ್ತು.

ಈ ವರದಿ ಆಧರಿಸಿ ರಾವತ್ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ, ಇಂದು ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಭೇಟಿ ಬಳಿಕ ರಾಜೀನಾಮೆ ವಿಚಾರವನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ. ಸಧ್ಯದ ಮಟ್ಟಿಗೆ ಮುಖ್ಯಮಂತ್ರಿ ಹುದ್ದೆಗೆ ಧನ್‌ಸಿಂಗ್ ರಾವತ್ ಹೆಸರು ಮುಂಚೂಣಿಯಲ್ಲಿದೆ.

ಇದಲ್ಲದೆ ಸತ್ಪಾಲ್ ಮಹಾರಾಜ್, ಅನಿಲ್ ಬಲೂನಿ, ಅಜಯ್ ಭಟ್, ಸುರೇಶ್ ಭಟ್, ಭಗತ್ ಸಿಂಗ್ ಕೋಶಿಯಾರೋ, ರಮೇಶ್ ಪೋಖ್ರಿಯಾಲ್ ಹೆಸರೂ ಕೂಡ ಕೇಳಿಬರುತ್ತಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು ಈ ಕುರಿತು ಅಂತಿಮ ತೀರ್ಮಾನವಾಗಲಿದೆ.

English summary
Amid speculation over the change of leadership in Uttarakhand, Chief Minister Triverdra Singh Rawat is expected to resign on Tuesday, as per sources.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X