ಪ್ರೀತಿ ನಿರಾಕರಣೆ: ಯುವತಿಗೆ ಬೆಂಕಿ ಹಚ್ಚಿ ಕೊಂದ ಪಾಪಿ

ಉತ್ತರಾಖಂಡ, ಡಿಸೆಂಬರ್ 24: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಯುವತಿಗೆಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಆಗ್ರಾದಲ್ಲಿ ನಡೆದಿದ್ದು ಆರು ದಿನಗಳ ಬಳಿಕ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

18 ವರ್ಷದ ಭಗ್ನ ಪ್ರೇಮಿಯೊಬ್ಬ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎನ್ನುವ ಕಾರಣಕ್ಕೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಯುವತಿಗೆ ಬೆಂಕಿ ಹಚ್ಚಿದ್ದ ಮನೋಜ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ. ಆತ ವಿವಾಹಿತ ಎನ್ನುವುದು ಬಹಿರಂಗವಾಗಿದೆ.

80ರಷ್ಟು ಸುಟ್ಟು ಹೋಗಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆರು ದಿನಗಳ ಬಳಿಕ ಮೃತಪಟ್ಟಿದ್ದಾಳೆ.

Uttarakhand: College student ‘set on fire by stalker’ dies

ಮನೋಜ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ, ಯುವತಿಯನ್ನು ಆತ ಪ್ರೀತಿಸುತ್ತಿದ್ದ ಪ್ರೀತಿ ನಿರಾಕರಿಸಿದ್ದಕ್ಕೆ ಜೀವಂತವಾಗಿ ದಹಿಸಿ ಕೊಲೆ ಮಾಡಿದ್ದಾನೆ.

ಪೌರಿ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದು, ಡಿಸೆಂಬರ್ 16ರಂದು ಪ್ರಾಯೋಗಿಕ ಪರೀಕ್ಷೆ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದಳು. ಮಾರ್ಗ ಮಧ್ಯದಲ್ಲಿನ ಅರಣ್ಯ ಪ್ರದೇಶದಲ್ಲಿ ಆಕೆಯನ್ನು ತಡೆದ ಸಿಂಗ್, ಪೆಟ್ರೋಲ್ ಸುರಿದು ಬಂಕಿ ಹಚ್ಚಿದ್ದಾನೆ.

ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಯನ್ನು ಸಾಯಿಸಬೇಕೆಂದು ನಿರ್ಧರಿಸಿದ್ದೆ ಎಂದು ಆರೋಪಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+