ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ ಚುನಾವಣೆ: ಎಲ್ಲಾ 70 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ

|
Google Oneindia Kannada News

ಡೆಹ್ರಾಡೂನ್, ಜನವರಿ 15: ಮುಂಬರುವ ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮಾಜಿ ಸಿಎಂ ಹರೀಶ್ ರಾವತ್ ಶುಕ್ರವಾರ ತಿಳಿಸಿದ್ದಾರೆ.

"ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಶುಕ್ರವಾರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ 70 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಚರ್ಚೆ ನಡೆಸಿದ್ದು, ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಮುಂದೆ ಹೆಸರುಗಳನ್ನು ಮಂಡಿಸಲಾಗುವುದು," ಎಂದು ಹರೀಶ್ ರಾವತ್ ಹೇಳಿದ್ದಾರೆ.

ಉತ್ತರಾಖಂಡ ಚುನಾವಣೆ: ರಾಜಕೀಯ ನಾಯಕರ ರಣಕಣವಾದ ಸಾಮಾಜಿಕ ಮಾಧ್ಯಮಉತ್ತರಾಖಂಡ ಚುನಾವಣೆ: ರಾಜಕೀಯ ನಾಯಕರ ರಣಕಣವಾದ ಸಾಮಾಜಿಕ ಮಾಧ್ಯಮ

"ಎಲ್ಲಾ 70 ಕ್ಷೇತ್ರಗಳ ಕುರಿತು ಚರ್ಚೆ ನಡೆಸಲಾಗಿದ್ದು, ಅಭ್ಯರ್ಥಿಗಳ ಅರ್ಹತೆಯ ಆಧಾರದ ಮೇಲೆ ಬಹುತೇಕ ಎಲ್ಲಾ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಶನಿವಾರ ನಾವು ಕೇಂದ್ರ ಚುನಾವಣಾ ಸಮಿತಿ (CEC) ಮುಂದೆ ಹೆಸರುಗಳನ್ನು ಮಂಡಿಸುತ್ತೇವೆ,'' ಎಂದು ಮಾಹಿತಿ ನೀಡಿದರು.

uttarakhand election 2022: candidates for all 70 constituencies final says harish rawat

ಇದಕ್ಕೂ ಮುನ್ನ ಹರೀಶ್ ರಾವತ್ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕವಾಗಿಲ್ಲ ಎಂದು ಸೂಚಿಸಿದ್ದರು. "ಅಂತಿಮ ನಿರ್ಧಾರವು ಕೇಂದ್ರ ಚುನಾವಣಾ ಸಮಿತಿ ಕೈಯಲ್ಲಿದೆ. ಆದರೆ ನಾನು ಸ್ಪರ್ಧಿಸಲು ಉತ್ಸುಕನಲ್ಲ, ಬದಲಿಗೆ ಇತರ ನಾಯಕರು ಸ್ಪರ್ಧಿಸುವುದನ್ನು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ ಮತ್ತು ನಾನು ಚುನಾವಣಾ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತೇನೆ,'' ಎಂದು ಉತ್ತರಾಖಂಡ ಮಾಜಿ ಸಿಎಂ ಹೇಳಿದ್ದಾರೆ.

ಉತ್ತರಾಖಂಡದ ವಿಧಾನಸಭಾ ಚುನಾವಣೆಗೆ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಭಾರತೀಯ ಚುನಾವಣಾ ಆಯೋಗದ (ಇಸಿಐ) ವೇಳಾಪಟ್ಟಿಯಂತೆ ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. 2017ರಲ್ಲಿ ಚುನಾಯಿತ ಪ್ರಸ್ತುತ ವಿಧಾನಸಭೆಯ ಅವಧಿಯು ಮಾರ್ಚ್ 23, 2022ರಂದು ಮುಕ್ತಾಯಗೊಳ್ಳಲಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಪಕ್ಷವು ಹಿಮಾಲಯ ರಾಜ್ಯದ ವಿಧಾನಸಭೆ ಚುನಾವಣೆಯ ಪ್ರಮುಖ ಸ್ಪರ್ಧಿಗಳಾಗಿದ್ದು, ಏತನ್ಮಧ್ಯೆ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ಚುನಾವಣಾ ಕಣಕ್ಕೆ ಪ್ರವೇಶಿಸಿದೆ. ಉತ್ತರಾಖಂಡದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

2017ರ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 57 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಮೈತ್ರಿಕೂಟ ಕೇವಲ 11 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೇ ವೇಳೇ ಸ್ವತಂತ್ರ ಅಭ್ಯರ್ಥಿಗಳು ಎರಡು ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

Recommended Video

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಪಡೆದು ನೀವೂ ಪುನೀತರಾಗಿ | Oneindia Kannada

ಜ.18ರಂದು ಕಾಂಗ್ರೆಸ್‌ನ ಮೊದಲ ಪಟ್ಟಿ ಬಿಡುಗಡೆ
ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 45 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನವರಿ 18 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಕ್ಷದ ಚುನಾವಣಾ ಸ್ಕ್ರೀನಿಂಗ್ ಸಮಿತಿಯು ಶನಿವಾರ ದೆಹಲಿಯಲ್ಲಿ ಸಭೆ ನಡೆಸಲಿದ್ದು, ಎಲ್ಲಾ 70 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ರೂಪ ನೀಡಲಿದೆ. ಅಂತಿಮ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಅನುಮೋದನೆಗಾಗಿ ಕಳುಹಿಸಲಾಗಿದೆ.

English summary
Congress candidates have been finalized for all 70 constituencies in the Uttarakhand assembly elections, Former CM Harish Rawat said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X