ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ ಚುನಾವಣೆ: ಜ.18ರಂದು ಕಾಂಗ್ರೆಸ್‌ನ ಮೊದಲ ಪಟ್ಟಿ ಬಿಡುಗಡೆ; ಹಾಲಿ ಶಾಸಕರಿಗೆ ಟಿಕೆಟ್!?

|
Google Oneindia Kannada News

ಉತ್ತರಾಖಂಡ, ಜನವರಿ 13: ಉತ್ತರಾಖಂಡ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಚುನಾವಣೆ ಎದುರಿಸಲು ಸನ್ನದ್ಧವಾಗುತ್ತಿವೆ. ಅದರಲ್ಲೂ ವಿಪಕ್ಷ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಗಂಭೀರವಾಗಿ ತೆಗೆದುಕೊಂಡಿದೆ.

ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 45 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನವರಿ 18 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಕ್ಷದ ಚುನಾವಣಾ ಸ್ಕ್ರೀನಿಂಗ್ ಸಮಿತಿಯು ದೆಹಲಿಯಲ್ಲಿ ಸಭೆ ನಡೆಸಲಿದ್ದು, ಎಲ್ಲಾ 70 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ರೂಪ ನೀಡಲಿದೆ. ಅಂತಿಮ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.

"70 ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ರೂಪ ನೀಡಲು ಚುನಾವಣಾ ಸ್ಕ್ರೀನಿಂಗ್ ಸಮಿತಿಯು ನವದೆಹಲಿಯಲ್ಲಿ ಸಭೆ ಸೇರಲಿದೆ. ಜನವರಿ 21ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗುವ ಮೊದಲು ನಾವು ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತೇವೆ,'' ಎಂದು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಮಥುರಾ ದತ್ ಜೋಶಿ ತಿಳಿಸಿದ್ದಾರೆ.

Uttarakhand Election 2022: Congress Releases First list on Jan 18, Tickets For All Sitting MLAs

ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರ ಹೆಸರು ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ 10 ಸಾವಿರಕ್ಕಿಂತ ಕಡಿಮೆ ಮತಗಳ ಅಂತರದಿಂದ ಸೋತವರ ಹೆಸರು ಇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

"ಜನರು ಗೆಲ್ಲಿಸುವ ಅಭ್ಯರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಟಿಕೆಟ್ ನೀಡಲು ಪಕ್ಷದ ಬಣಗಳು ಬಹುತೇಕ ಒಪ್ಪಿಕೊಂಡಿವೆ," ಎಂದು ಮಥುರಾ ದತ್ ಜೋಶಿ ಹೇಳಿದ್ದು, ವಿವಿಧ ಬಣಗಳಲ್ಲಿ ಸ್ವಲ್ಪ ಒಳ ಜಗಳವಿದೆ ಎಂದು ಹೆಸರು ಹೇಳಲು ಇಚ್ಛಿಸದ ಕಾಂಗ್ರೆಸ್ ಕಾರ್ಯಕಾರಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ಕಾಂಗ್ರೆಸ್ ಪಕ್ಷವು 10ಕ್ಕಿಂತ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹೆಣಗಾಡುತ್ತಿದೆ. ಹಲವಾರು ಟಿಕೆಟ್ ಆಕಾಂಕ್ಷಿಗಳಿರುವ ಸ್ಥಾನಗಳಲ್ಲಿ ಹರಿದ್ವಾರ (ಗ್ರಾಮೀಣ), ಖಾನ್‌ಪುರ, ಲಕ್ಸರ್, ಪೌರಿ, ಕಲಾಧುಂಗಿ, ಹಲ್ದ್ವಾನಿ, ಕಾಶಿಪುರ್, ಗದರ್‌ಪುರ, ಕಿಚ್ಚ ಮತ್ತು ರುದ್ರಪುರ ಕ್ಷೇತ್ರಗಳು ಇವೆ.

ಉತ್ತರಾಖಂಡದಲ್ಲಿ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ. ಜನವರಿ 21 ರಿಂದ 28 ರವರೆಗೆ ನಾಮಪತ್ರ ಸಲ್ಲಿಸಬಹುದು. ಉಮೇದುವಾರಿಕೆ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

Recommended Video

ಮೊಬೈಲ್ ಕದ್ದು ಓಡಿಹೋಗ್ತಿದ್ದ ಕಳ್ಳನನ್ನ ಅಟ್ಟಾಡಿಸಿಕೊಂಡು ಹಿಡಿದ ಪೊಲೀಸ್ | Oneindia Kannada

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

English summary
The Congress is likely to release its first list of 45 candidates for the Uttarakhand assembly elections on January 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X