ಉತ್ತರಾಖಂಡ: ಕಾಂಗ್ರೆಸ್ 48ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ; ಹರೀಶ್ ರಾವತ್ ಭವಿಷ್ಯ
ಡೆಹ್ರಾಡೂನ್, ಫೆಬ್ರವರಿ 23: ಉತ್ತರಾಖಂಡದ 13 ಜಿಲ್ಲೆಗಳ 70 ವಿಧಾನಸಭಾ ಸ್ಥಾನಗಳಿಗೆ ಫೆ.14ರಂದು ನಡೆದ ಒಂದೇ ಹಂತದ ಮತದಾನದಲ್ಲಿ ಶೇಕಡಾ 62.5ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಇವಿಎಂನಲ್ಲಿ ಎಲ್ಲ ಪಕ್ಷಗಳ ಅಭ್ಯರ್ಥಿಗಳ ಭದ್ರವಾಗಿದ್ದು, ಇನ್ನು ಚುನಾವಣೆ ಫಲಿತಾಂಶಕ್ಕಾಗಿ ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ಕಾಯುತ್ತಿವೆ. ಇದೇ ವೇಳೆ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಹರೀಶ್ ರಾವತ್ ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರಬಲವಾದ ಆಡಳಿತದ ವಿರೋಧಿಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ 48ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಸೋಮವಾರ ಹೇಳಿದ್ದಾರೆ.
ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ನಾವು 48ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂದು ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಸರ್ಕಾರವು ಸೇಡಿನ ಮನೋಭಾವದಿಂದ ಎಲ್ಲಿಯೂ ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕನಾಗಿ ಹೇಳುತ್ತಿದ್ದೇನೆ ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಭೇಟಿಯಾದ ಬಗ್ಗೆ ಕೇಳಿದ ಪ್ರಶ್ನೆಗೆ, ಕಿರಿಯ ಸಹೋದರ ಅಣ್ಣನ ಬಳಿಗೆ ಹೋಗಬೇಕು ಎಂದು ಕಾಂಗ್ರೆಸ್ ನಾಯಕ ಹರೀಶ್ ರಾವತ್ ಹೇಳಿದರು.
ಕಿರಿಯ ಸಹೋದರ ಯಾವಾಗಲೂ ವಿನಮ್ರವಾಗಿರಬೇಕು, ನಮ್ಮ ಪುಷ್ಕರ್ ಸಿಂಗ್ ಧಾಮಿ ವಿನಮ್ರನಾಗಿದ್ದಾನೆ, ಇದು ಅವನಲ್ಲಿರುವ ಉತ್ತರಾಖಂಡದ ಒಂದು ಗುಣವೆಂದರು.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್‌ನಲ್ಲಿರುವ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ್ದರು. 70 ಸದಸ್ಯರ ರಾಜ್ಯ ವಿಧಾನಸಭೆಗೆ ಫೆಬ್ರವರಿ 14ರಂದು ಮತದಾನ ನಡೆಯಿತು. ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.
ಕಳೆದ ಬಾರಿಗಿಂತ ಕಡಿಮೆ ಮತದಾನ
ಉತ್ತರಾಖಂಡ ರಾಜ್ಯದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಶೇ.65.56ರಷ್ಟು ಮತದಾನವಾಗಿತ್ತು. ರಾಜ್ಯಾದ್ಯಂತ 11,697 ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಮತದಾನ ಮುಗಿಯುವವರೆಗೂ ಶೇ 62.5ರಷ್ಟು ಮತದಾರರು ಮತ ಚಲಾಯಿಸಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಸೌಜನ್ಯ ತಿಳಿಸಿದ್ದಾರೆ.












Click it and Unblock the Notifications