• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉತ್ತರಾಖಂಡ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಜನರಲ್ ಬಿಪಿನ್ ರಾವತ್ ಸಹೋದರ

|
Google Oneindia Kannada News

ಡೆಹ್ರಾಡೂನ್, ಜನವರಿ 19: ಉತ್ತರಾಖಂಡ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಚುನಾವಣೆ ಎದುರಿಸಲು ಸನ್ನದ್ಧವಾಗುತ್ತಿವೆ. ಅದರಲ್ಲೂ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಗಂಭೀರವಾಗಿ ತೆಗೆದುಕೊಂಡಿದೆ.

ಕೊರೊನಾ ಸಾಂಕ್ರಾಮಿಕದ ನಡುವೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಪೈಕಿ ಉತ್ತರಾಖಂಡ ರಾಜ್ಯದ 70 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತಗಳಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧವಾಗಿದೆ.

ಉತ್ತರಾಖಂಡ ಚುನಾವಣೆಗೆ ಮುನ್ನ ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಸಹೋದರ ಕರ್ನಲ್ ವಿಜಯ್ ರಾವತ್ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ರಾವತ್, ಅವರ ಪತ್ನಿ ಮತ್ತು ಇತರ 12 ಮಂದಿ ಕಳೆದ ತಿಂಗಳು ತಮಿಳುನಾಡಿನ ಕೂನೂರ್‌ನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದರು.

ಬಿಜೆಪಿಗೆ ಸೇರ್ಪಡೆ ನಂತರ ಮಾತನಾಡಿದ ಕರ್ನಲ್ ವಿಜಯ್ ರಾವತ್, "ನನ್ನ ತಂದೆ ಸೇನೆಯಿಂದ ನಿವೃತ್ತಿಯಾದ ನಂತರ ಬಿಜೆಪಿಯಲ್ಲಿದ್ದರು, ಈಗ ನನಗೆ ಅವಕಾಶ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ವಿಶೇಷವಾಗಿದೆ, ಅವರ ಎಲ್ಲಾ ಕೆಲಸಗಳು ಈ ರಾಷ್ಟ್ರದ ಪ್ರಗತಿಗಾಗಿ ಇವೆ. ಅದೇ ನನಗೆ ಬಿಜೆಪಿ ಸೇರಲು ಪ್ರೋತ್ಸಾಹ ನೀಡಿತು," ಎಂದರು.

"ಉತ್ತರಾಖಂಡಕ್ಕಾಗಿ ಮೋದಿಯವರ ಯೋಜನೆಯು ಉತ್ತಮ ದೃಷ್ಟಿಕೋನದ ಉತ್ಪನ್ನವಾಗಿದೆ. ಬಿಜೆಪಿಯ ಕಾರ್ಯವೈಖರಿಯನ್ನು ಎಲ್ಲರೂ ಮೆಚ್ಚುತ್ತಾರೆ. ಅದು ನಿಜವಾದ ಕಲ್ಯಾಣ ಮತ್ತು ಪ್ರಗತಿಯನ್ನು ಬಯಸುತ್ತದೆ,'' ಎಂದು ಕರ್ನಲ್ ವಿಜಯ್ ರಾವತ್ ಬುಧವಾರ ಸಂಜೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದಲ್ಲಿ ಸೇರ್ಪಡೆಗೊಂಡ ಬಳಿಕ ಮಾತನಾಡಿದರು.

Uttarakhand election 2022: General Bipin Rawats Brother Joins BJP

ಕರ್ನಲ್ ರಾವತ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಮಾಜಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್‌ರನ್ನು ನೆನಪಿಸಿಕೊಂಡರು. "ಜನರಲ್ ರಾವತ್ ಉತ್ತರಾಖಂಡದಲ್ಲಿ ಹೆಚ್ಚು ಕೆಲಸ ಮಾಡಲು ಬಯಸಿದ್ದರು. ಅವರ ಸಹೋದರ ನಮ್ಮೊಂದಿಗೆ ಸೇರಿಕೊಂಡಿರುವುದು ನಮಗೆ ಸಂತೋಷವಾಗಿದೆ. ನಾನು ಸಹ ಸೈನಿಕನ ಮಗನಾಗಿರುವುದರಿಂದ ನಾನು ಹೆಚ್ಚು ಸಂತೋಷವಾಗಿದ್ದೇನೆ. ನಾವು ಜನರಲ್ ರಾವತ್ ಅವರನ್ನು ಕಳೆದುಕೊಂಡಾಗಿನಿಂದ ನಾವು ಖಾಲಿತನವನ್ನು ಅನುಭವಿಸುತ್ತೇವೆ. ಅವರ ಸಹೋದರ ಈಗ ನಮ್ಮೊಂದಿಗಿದ್ದಾರೆ," ಎಂದರು.

ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 2017ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 70 ಸ್ಥಾನಗಳ ಪೈಕಿ ಬಿಜೆಪಿ 57 ಸ್ಥಾನಗಳನ್ನು ಗೆದ್ದಿತ್ತು.

English summary
General Bipin Rawat's brother, Colonel Vijay Rawat, joined the BJP today ahead of the Uttarakhand polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X