ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ ಚುನಾವಣೆ; 7 ಸಮಾವೇಶ ನಡೆಸಲಿದ್ದಾರೆ ಪ್ರಧಾನಿ ಮೋದಿ

|
Google Oneindia Kannada News

ಡೆಹರಾಡೂನ್, ಡಿಸೆಂಬರ್ 01; 2022ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಉತ್ತರಾಖಂಡ ಸಹ ಒಂದು. 70 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಬಿಜೆಪಿ ತಂತ್ರಗಳನ್ನು ರೂಪಿಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಚುನಾವಣಾ ಪ್ರಚಾರವನ್ನು ಈಗಾಗಲೇ ಆರಂಭಿಸಿದ್ದಾರೆ.

2022ರ ಫೆಬ್ರವರಿಯಲ್ಲಿ ಉತ್ತರಾಖಂಡ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಡಿಸೆಂಬರ್ 4ರಿಂದ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಮೋದಿ ಒಟ್ಟು 7 ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

 2022 ರ ಚುನಾವಣೆ: ಉತ್ತರಾಖಂಡ, ಗೋವಾ, ಮಣಿಪುರದ ಆಡಳಿತ ಉಳಿಸಿಕೊಳ್ಳುವತ್ತ ಬಿಜೆಪಿ ಚಿತ್ತ 2022 ರ ಚುನಾವಣೆ: ಉತ್ತರಾಖಂಡ, ಗೋವಾ, ಮಣಿಪುರದ ಆಡಳಿತ ಉಳಿಸಿಕೊಳ್ಳುವತ್ತ ಬಿಜೆಪಿ ಚಿತ್ತ

ಚುನಾವಣೆ ದಿನಾಂಕ ಘೋಷಣೆಗೊಂಡು ನೀತಿ ಸಂಹಿತೆ ಜಾರಿಯಾಗುವ ಮೊದಲೇ ಕುಮಾವೂನ್ ಮತ್ತು ಗರ್ವಾಲ್ ಆಡಳಿತ ವಿಭಾಗದಲ್ಲಿ ಎರಡು ಸಮಾವೇಶಗಳನ್ನು ಬಿಜೆಪಿ ಆಯೋಜನೆ ಮಾಡಲಿದೆ. ಈ ಸಮಾವೇಶಗಳನ್ನು ಉದ್ದೇಶಿಸಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.

Narendra Modi

ರಾಜ್ಯದಲ್ಲಿ 5 ಲೋಕಸಭಾ ಕ್ಷೇತ್ರಗಳಿವೆ. ಎಲ್ಲಾ ಕ್ಷೇತ್ರಗಳಲ್ಲಿ ಸಮಾವೇಶಗಳನ್ನು ಆಯೋಜನೆ ಮಾಡಲಾಗುತ್ತಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಹಿರಿಯ ನಾಯಕರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ ನಾಯಕರೊಂದಿಗೆ ಸಭೆ ನಡೆಸಿ, ಸೂಚನೆಗಳನ್ನು ನೀಡಿದ್ದಾರೆ.

ಉತ್ತರಾಖಂಡ ಬಿಜೆಪಿಗೆ ಹಿನ್ನಡೆ, ಕಾಂಗ್ರೆಸ್‌ ಸೇರ್ಪಡೆಗೊಂಡ ಹಾಲಿ ಸಚಿವ, ಶಾಸಕಉತ್ತರಾಖಂಡ ಬಿಜೆಪಿಗೆ ಹಿನ್ನಡೆ, ಕಾಂಗ್ರೆಸ್‌ ಸೇರ್ಪಡೆಗೊಂಡ ಹಾಲಿ ಸಚಿವ, ಶಾಸಕ

ಎಲ್ಲೆಲ್ಲಿ ನಡೆಯಲಿದೆ ಸಮಾವೇಶ?; ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 4ರಂದು ಗರ್ವಾಲ್‌ ಆಡಳಿತ ವಿಭಾಗದ ಡೆಹರಾಡೂನ್‌ನಲ್ಲಿ ಮೊದಲ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 24ರಂದು ಕುಮಾವೂನ್ ವಿಭಾಗದಲ್ಲಿ ಸಮಾವೇಶ ನಡೆಯಲಿದೆ. ಆದರೆ ಡಿಸೆಂಬರ್ 24ರ ಸಮಾವೇಶದ ಸ್ಥಳ ಇನ್ನೂ ಅಂತಿಮಗೊಂಡಿಲ್ಲ.

ಉತ್ತರಾಖಂಡ; ಎಎಪಿ ಘೋಷಿಸಿದ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಉತ್ತರಾಖಂಡ; ಎಎಪಿ ಘೋಷಿಸಿದ ಮುಖ್ಯಮಂತ್ರಿ ಅಭ್ಯರ್ಥಿ ಯಾರು?

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನ್ವೀರ್ ಸಿಂಗ್ ಚೌವ್ಹಾಣ್ ಮೋದಿ ಸಮಾವೇಶದ ಬಗ್ಗೆ ಮಾತನಾಡಿದ್ದಾರೆ, "ನರೇಂದ್ರ ಮೋದಿ ಸಮಾವೇಶ ರಾಜ್ಯದ ಚುನಾವಣೆ ದಿಕ್ಕನ್ನು ಬದಲಾವಣೆ ಮಾಡಲಿದೆ. ಡಿಸೆಂಬರ್ 24ರ ಸಮಾವೇಶವನ್ನು ಐತಿಹಾಸಿಕಗೊಳಿಸಲು ಪಕ್ಷ ತೀರ್ಮಾನ ಮಾಡಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಭಂಡಾರಿ, ಸುರೇಶ್ ಭಟ್ ಮತ್ತು ಕುಲದೀಪ್ ಕುಮಾರ್‌ಗೆ ಸಮಾವೇಶದ ಜವಾಬ್ದಾರಿ ನೀಡಲಾಗಿದೆ" ಎಂದು ಹೇಳಿದ್ದಾರೆ.

ಹರಿದ್ವಾರ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಂದು ಸಮಾವೇಶ ನಡೆಯಲಿದೆ. ರುದ್ರಪುರದಲ್ಲಿ ಈ ಸಮಾವೇಶ ಆಯೋಜನೆ ಮಾಡಲು ಚರ್ಚೆ ನಡೆಯುತ್ತಿದ್ದು, ಬೇರೆ ಸ್ಥಳಗಳ ಬಗ್ಗೆಯೂ ರಾಜ್ಯ ಬಿಜೆಪಿ ಘಟಕ ಚಿಂತನೆ ನಡೆಸುತ್ತಿದೆ. ಚುನಾವಣೆ ಘೋಷಣೆಯಾದ ಬಳಿಕ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ.

ಮುಖ್ಯಮಂತ್ರಿಗಳ ಬದಲಾವಣೆ; ನಾಲ್ಕು ತಿಂಗಳಿನಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿರುವ ಬಿಜೆಪಿ ಆಡಳಿತದ ಬಗ್ಗೆ ರಾಜ್ಯದಲ್ಲಿ ಜನ ವಿರೋಧಿ ಅಲೆ ಇದೆ ಎಂಬುದು ಪ್ರತಿಪಕ್ಷಗಳ ಲೆಕ್ಕಾಚಾರವಾಗಿದೆ. ಇದೇ ವಿಚಾರ ಚುನಾವಣೆಯ ಪ್ರಚಾರದಲ್ಲಿ ಪ್ರಮುಖವಾಗಿ ಚರ್ಚೆಯಾಗಲಿದೆ.

ರಾಜ್ಯದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ. ಸೆಪ್ಟೆಂಬರ್‌ನಲ್ಲಿ ಜನ್ ಕೀ ಬಾತ್ ನಡೆಸಿದ ಸಮೀಕ್ಷೆಯಲ್ಲಿ ಶೇ 45ರಷ್ಟು ಜನರು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

ಆಮ್ ಆದ್ಮಿ ಪಕ್ಷ ಉತ್ತರಾಖಂಡ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಸಮೀಕ್ಷೆಯಲ್ಲಿ ಶೇ 32ರಷ್ಟು ಜನರು ರಾಜ್ಯದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್‌ಗೆ ಆಮ್ ಆದ್ಮಿ ಪಕ್ಷದ ಸ್ಪರ್ಧೆ ಹಿನ್ನಡೆ ಉಂಟು ಮಾಡಲಿದೆ ಎಂಬುದು ಲೆಕ್ಕಾಚಾರವಾಗಿದೆ. ಆದರೆ ಕಾಂಗ್ರೆಸ್ ಬಿಜೆಪಿಯ ಆಡಳಿತ ವಿರೋಧಿ ಅಲೆಯಲ್ಲಿ ತಮಗೆ ಅಧಿಕಾರ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.

English summary
Prime minister of India Narendra Modi will hold 7 rally in Uttarakhand for the assembly election 2022. Election may held in 2022 February.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X