ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ ಚುನಾವಣೆ: ರಾಜಕೀಯ ನಾಯಕರ ರಣಕಣವಾದ ಸಾಮಾಜಿಕ ಮಾಧ್ಯಮ

|
Google Oneindia Kannada News

ಉತ್ತರಾಖಂಡ, ಜನವರಿ 14: ಉತ್ತರಾಖಂಡ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಚುನಾವಣೆ ಎದುರಿಸಲು ಸನ್ನದ್ಧವಾಗುತ್ತಿವೆ. ಅದರಲ್ಲೂ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಗಂಭೀರವಾಗಿ ತೆಗೆದುಕೊಂಡಿದೆ.

ಉತ್ತರಾಖಂಡದಲ್ಲಿ 2022ರ ವಿಧಾನಸಭಾ ಚುನಾವಣೆಯು ಹಿಂದಿನದಕ್ಕಿಂತ ಭಿನ್ನವಾಗಿ ನಡೆಯುತ್ತಿದ್ದು, ಪ್ರಾಥಮಿಕವಾಗಿ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಸಾಮಾಜಿಕ ಮಾಧ್ಯಮದ ಮೂಲಕ ಪ್ರಚಾರ ಮತ್ತು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ.

2020ರಲ್ಲಿಯೇ ಮೊದಲ ಲಾಕ್‌ಡೌನ್‌ನಿಂದ ಬಿಜೆಪಿ ಪಕ್ಷವು ಡಿಜಿಟಲ್ ಮಾದ್ಯಮ ಪ್ರಚಾರದ ಆರಂಭಿಕ ವಿಧಾನಗಳನ್ನು ತೆಗೆದುಕೊಂಡಿದ್ದರಿಂದ ಇದು ಪಕ್ಷಕ್ಕೆ ಪ್ರಯೋಜನಕರವಾಗಿ ತೋರುತ್ತಿದೆ.

Uttarakhand Election 2022: Political Leaders Battle Shifts To Social Media War Rooms

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಜನವರಿ 15ರವರೆಗೆ ರಾಜಕೀಯ ಮೆರವಣಿಗೆಗಳು, ಧರಣಿಗಳು ಮತ್ತು ಚುನಾವಣಾ ಸಮಾವೇಶಗಳ ಮೇಲೆ ಚುನಾವಣಾ ಆಯೋಗವು ಹೇರಿದ ನಿಷೇಧದಿಂದಾಗಿ ರಾಜಕೀಯ ಪಕ್ಷಗಳು ವಿಭಿನ್ನವಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬಹಳ ಕೆಟ್ಟದಾಗಿ ಬಳಸಿಕೊಳ್ಳುತ್ತಿವೆ. ಮೂರು ಪಕ್ಷಗಳು ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ತಮ್ಮದೇ ಆದ ಸಾಮಾಜಿಕ ಮಾಧ್ಯಮ ವಿಭಾಗಗಳನ್ನು ಹೊಂದಿವೆ.

"ಮಾರ್ಚ್ 2020ರಲ್ಲಿ ಲಾಕ್‌ಡೌನ್ ಘೋಷಣೆಯಾದ ನಂತರ ನಾವು ರಾಜ್ಯದಲ್ಲಿ ನಮ್ಮ ಸಾಮಾಜಿಕ ಮಾಧ್ಯಮ ವಿಭಾಗವನ್ನು ಬಲಪಡಿಸಲು ಪ್ರಾರಂಭಿಸಿದ್ದೇವೆ,'' ಎಂದು ಬಿಜೆಪಿ ಪಕ್ಷದ ನಾಯಕರು ಹೇಳಿದ್ದಾರೆ. ಅವರ ಪ್ರಕಾರ, ಪಕ್ಷವು ಉತ್ತರಾಖಂಡದ 11,500 ಬೂತ್‌ಗಳಲ್ಲಿ ಸಾಮಾಜಿಕ ಮಾಧ್ಯಮ ತಂಡಗಳನ್ನು ಹೊಂದಿದೆ.

ವಿಪಕ್ಷ ಕಾಂಗ್ರೆಸ್ ಕೂಡ ರಾಜ್ಯಾದ್ಯಂತ ತನ್ನ ಸಾಮಾಜಿಕ ಮಾಧ್ಯಮ ತಂಡಗಳನ್ನು ರಚಿಸಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನಮ್ಮ ಸಾಮಾಜಿಕ ಜಾಲತಾಣಗಳ ಸುಮಾರು 15 ಸದಸ್ಯರು ಸಕ್ರಿಯರಾಗಿದ್ದಾರೆ. ಜೊತೆಗೆ ನಾವು ಜಿಲ್ಲಾ ಮಟ್ಟದಲ್ಲಿಯೂ ಕೆಲಸ ಮಾಡುತ್ತೇವೆ. ನಾವು ರಾಜ್ಯವನ್ನು 26 ಜಿಲ್ಲೆಗಳಾಗಿ ವಿಂಗಡಿಸಿದ್ದೇವೆ ಎಂದು ಪಕ್ಷದ ಸಾಮಾಜಿಕ ಮಾಧ್ಯಮ ಸಂಯೋಜಕ ಅಮರಜೀತ್ ಸಿಂಗ್ ಹೇಳಿದರು. ಅವರ ಪ್ರಕಾರ, ಪ್ರಸ್ತುತ ಸುಮಾರು 25 ಸದಸ್ಯರನ್ನು ಹೊಂದಿರುವ ವಾರ್ ರೂಮ್ ರಾಜಧಾನಿ ಡೆಹ್ರಾಡೂನ್‌ನಲ್ಲಿಯೂ ಕಾರ್ಯನಿರ್ವಹಿಸುತ್ತಿದೆ.

Uttarakhand Election 2022: Political Leaders Battle Shifts To Social Media War Rooms

ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಜ.18ರಂದು ಕಾಂಗ್ರೆಸ್‌ನ ಮೊದಲ ಪಟ್ಟಿ ಬಿಡುಗಡೆ
ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 45 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನವರಿ 18 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಕ್ಷದ ಚುನಾವಣಾ ಸ್ಕ್ರೀನಿಂಗ್ ಸಮಿತಿಯು ದೆಹಲಿಯಲ್ಲಿ ಸಭೆ ನಡೆಸಲಿದ್ದು, ಎಲ್ಲಾ 70 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ರೂಪ ನೀಡಲಿದೆ. ಅಂತಿಮ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.

"70 ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ರೂಪ ನೀಡಲು ಚುನಾವಣಾ ಸ್ಕ್ರೀನಿಂಗ್ ಸಮಿತಿಯು ನವದೆಹಲಿಯಲ್ಲಿ ಸಭೆ ಸೇರಲಿದೆ. ಜನವರಿ 21ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗುವ ಮೊದಲು ನಾವು ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತೇವೆ,'' ಎಂದು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಮಥುರಾ ದತ್ ಜೋಶಿ ತಿಳಿಸಿದ್ದಾರೆ.

ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರ ಹೆಸರು ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ 10 ಸಾವಿರಕ್ಕಿಂತ ಕಡಿಮೆ ಮತಗಳ ಅಂತರದಿಂದ ಸೋತವರ ಹೆಸರು ಇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

English summary
The leaders of the three major political parties - the ruling BJP, the opposition Congress and the Aam Aadmi Party are campaigning through social media in the Uttarakhand election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X