ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಚುನಾವಣೆ ಮುಂದೂಡುವುದು ತನ್ನ ಕೆಲಸವಲ್ಲ ಎಂದ ಉತ್ತರಾಖಂಡ ಹೈಕೋರ್ಟ್

|
Google Oneindia Kannada News

ಉತ್ತರಾಖಂಡ, ಜನವರಿ 13: ಚುನಾವಣೆಯನ್ನು ಮುಂದೂಡುವುದು ನ್ಯಾಯಾಲಯದ ಕೆಲಸವಲ್ಲ ಎಂದು ಅಭಿಪ್ರಾಯಪಟ್ಟಿರುವ ಉತ್ತರಾಖಂಡ ಹೈಕೋರ್ಟ್, ಫೆಬ್ರವರಿ 14ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಮುಂದೂಡಲು ಗುರುವಾರ ನಿರಾಕರಿಸಿದೆ.

ಉತ್ತರಾಖಂಡ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜಯ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎನ್‌.ಎಸ್. ಧನಿಕ್ ಅವರಿದ್ದ ವಿಭಾಗೀಯ ಪೀಠವು, ಸಾರ್ವಜನಿಕ ಸಮಾವೇಶಗಳನ್ನು ನಿಷೇಧಿಸುವ ಕುರಿತು ಯಾವುದೇ ನಿರ್ದೇಶನಗಳನ್ನು ನೀಡಲು ನಿರಾಕರಿಸಿತು.

ಚುನಾವಣೆ ನಡೆಯುತ್ತಿರುವ ಪಂಚ ರಾಜ್ಯಗಳಲ್ಲಿ ಈಗಾಗಲೇ ಜನವರಿ 15ರವರೆಗೆ ಸಾರ್ವಜನಿಕ ಸಮಾವೇಶಗಳನ್ನು ಕೇಂದ್ರ ಚುನಾವಣಾ ಆಯೋಗ ನಿಷೇಧಿಸಿದೆ. ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಕೇಂದ್ರ ಚುನಾವಣಾ ಆಯೋಗ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ ಎಂದು ಆಯೋಗದ ಪರವಾಗಿ ಹಾಜರಿದ್ದ ವಕೀಲರಾದ ಶೋಭಿತ್ ಸಹಾರಿಯಾ ನ್ಯಾಯಾಲಯಕ್ಕೆ ತಿಳಿಸಿದ ನಂತರ ಪೀಠ ಈ ನಿರ್ಧಾರ ಕೈಗೊಂಡಿತು.

Uttarakhand Election 2022: Uttarakhand High Court Refuses Defer State Assembly Elections

ಇದೇ ವೇಳೆ ಉತ್ತರಾಖಂಡ ಹೈಕೋರ್ಟ್ ಹಿರಿಯ ನಾಗರಿಕರಿಗೆ ಅವರ ಮನೆಗಳಿಗೇ ತೆರಳಿ ಬೂಸ್ಟರ್ ಲಸಿಕೆ ನೀಡುವುದನ್ನು ಪರಿಗಣಿಸುವಂತೆ ಸೂಚಿಸಿತು. ಪ್ರಕರಣದ ಮುಂದಿನ ವಿಚಾರಣೆ. ಫೆ.15ಕ್ಕೆ ನಿಗದಿಯಾಗಿದೆ.

ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

English summary
The Uttarakhand High Court on Thursday refused to postpone the state assembly elections on February 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X