ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ ಚುನಾವಣೆ; ಡಿ. 29ಕ್ಕೆ ಕಾಂಗ್ರೆಸ್‌ ಮಹತ್ವದ ಸಭೆ

|
Google Oneindia Kannada News

ಡೆಹ್ರಾಡೂನ್, ಡಿಸೆಂಬರ್ 28; ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿವೆ. 2022ರ ಫೆಬ್ರವರಿ ಅಥವ ಮಾರ್ಚ್‌ನಲ್ಲಿ 70 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಬುಧವಾರ ಉತ್ತರಾಖಂಡದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಮಹತ್ವದ ಸಭೆ ನಡೆಯಲಿದೆ. ಸಭೆಯ ಬಳಿಕ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ.

ಉತ್ತರಾಖಂಡ ಚುನಾವಣೆ; ಪ್ರಬಲ ಪೈಪೋಟಿ ನಡುವೆಯೂ ಬಿಜೆಪಿಗೆ ಜಯ! ಉತ್ತರಾಖಂಡ ಚುನಾವಣೆ; ಪ್ರಬಲ ಪೈಪೋಟಿ ನಡುವೆಯೂ ಬಿಜೆಪಿಗೆ ಜಯ!

ಉತ್ತರಾಖಂಡ ರಾಜ್ಯದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಗೆ ಅವಿನಾಶ್ ಪಾಂಡೆ ಅಧ್ಯಕ್ಷರು. ಡಾ. ಅಜೋಯ್ ಕುಮಾರ್, ವಿರೇಂದರ್ ಸಿಂಗ್ ರಾಥೋರ್, ದೇವೇಂದ್ರ ಯಾದವ್, ಗಣೇಶ್ ಗೋಡಿಯಾಲ್, ಪ್ರೀತಂ ಸಿಂಗ್, ಹರೀಶ್ ರಾವತ್ ಸಮಿತಿಯಲ್ಲಿದ್ದಾರೆ.

ಉತ್ತರಾಖಂಡ ಚುನಾವಣೆ; 7 ಸಮಾವೇಶ ನಡೆಸಲಿದ್ದಾರೆ ಪ್ರಧಾನಿ ಮೋದಿಉತ್ತರಾಖಂಡ ಚುನಾವಣೆ; 7 ಸಮಾವೇಶ ನಡೆಸಲಿದ್ದಾರೆ ಪ್ರಧಾನಿ ಮೋದಿ

Uttarakhand Election Congress Screening Committee Meeting On December 29

ಈಗಾಗಲೇ ಎರಡು ಸಭೆಗಳನ್ನು ಸ್ಕ್ರೀನಿಂಗ್ ಕಮಿಟಿ ಮಾಡಿದೆ. ಆದರೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಬಿಜೆಪಿ ರಾಜ್ಯದಲ್ಲಿ ಪ್ರಚಾರ ಬಿರುಸುಗೊಳಿಸಿದೆ. ಈ ಹಿನ್ನಲೆಯಲ್ಲಿ ಬುಧವಾರ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ.

 2022 ರ ಚುನಾವಣೆ: ಉತ್ತರಾಖಂಡ, ಗೋವಾ, ಮಣಿಪುರದ ಆಡಳಿತ ಉಳಿಸಿಕೊಳ್ಳುವತ್ತ ಬಿಜೆಪಿ ಚಿತ್ತ 2022 ರ ಚುನಾವಣೆ: ಉತ್ತರಾಖಂಡ, ಗೋವಾ, ಮಣಿಪುರದ ಆಡಳಿತ ಉಳಿಸಿಕೊಳ್ಳುವತ್ತ ಬಿಜೆಪಿ ಚಿತ್ತ

ನವದೆಹಲಿಯಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಗೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ರಾಜ್ಯ ಘಟಕದಿಂದ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಲ್ಲಿಕೆಯಾಗಿದ್ದು, ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 36. ರಾಜ್ಯದಲ್ಲಿ ಈಗ ಬಿಜೆಪಿ ಅಧಿಕಾರದಲ್ಲಿದೆ. 2017ರ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 57 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿತ್ತು.

ಮುಖ್ಯಮಂತ್ರಿಗಳ ಬದಲಾವಣೆ; ಉತ್ತರಾಖಂಡದಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ಪದೇ ಪದೇ ಬದಲಾವಣೆ ಮಾಡಿದೆ. 2017ರ ಚುನಾವಣೆ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತಾದ ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿಯಾದರು.

4 ವರ್ಷಗಳ ಬಳಿಕ ಪಕ್ಷದ ಹೈಕಮಾಂಡ್ ನಿರೀಕ್ಷೆಯಂತೆ ಕೆಲಸ ಮಾಡಲಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲಾಯಿತು. ಆಗ ಸಂಸದರಾದ ತೀರ್ಥ ಸಿಂಗ್ ರಾವತ್‌ ಮುಖ್ಯಮಂತ್ರಿಯಾದರು.

ಆದರೆ ಪ್ರಮಾಣ ವಚನ ಸ್ವೀಕಾರ ಮಾಡಿದ 3 ತಿಂಗಳಿನಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮಾಡಲಾಯಿತು. ಪ್ರಸ್ತುತ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ. 2022ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸವಾಲು ಅವರ ಮುಂದಿದೆ.

ಹರೀಶ್‌ ರಾವತ್ ವಾಪಸ್; ಕಳೆದ ವಾರ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, "ತಮ್ಮ ಕೈಗಳನ್ನು ಕಟ್ಟಲಾಗಿದೆ. ನಾನು ವಿಶ್ರಾಂತಿ ಪಡೆಯಲು ಬಯಸುತ್ತಿದ್ದೇನೆ" ಎಂದು ಟ್ವೀಟ್ ಮಾಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

ಬಳಿಕ ಅವರು ದೆಹಲಿಗೆ ತೆರಳಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರೀಶ್ ರಾವತ್ ಭೇಟಿಯಾಗಿದ್ದರು. ದೆಹಲಿ ಭೇಟಿ ಬಳಿಕ ಹರೀಶ್ ರಾವತ್‌ ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಉತ್ತರಾಖಂಡ ಚುನಾವಣೆಗೆ ಹರೀಶ್ ರಾವತ್ ಕಾಂಗ್ರೆಸ್‌ನ ಜನಪ್ರಿಯ ನಾಯಕರಾಗಿದ್ದಾರೆ.

ರಾಜ್ಯದಲ್ಲಿನ ಚುನಾವಣೆ ಪ್ರಚಾರದ ಹೊಣೆಯನ್ನು ಕಾಂಗ್ರೆಸ್ ಪಕ್ಷ ಹರೀಶ್ ರಾವತ್‌ಗೆ ನೀಡಲಿದೆ. ಚುನಾವಣೆಯ ನಂತರ ಮುಖ್ಯಂಮತ್ರಿ ಅಭ್ಯರ್ಥಿ ಬಗ್ಗೆ ಶಾಸಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

73ರ ಹರೆಯದ ಹರೀಶ ರಾವತ್ ಕಳೆದ ಬುಧವಾರ ಮಾಡಿದ್ದ ಟ್ವೀಟ್‌ನಲ್ಲಿ ಯಾರ ಹೆಸರನ್ನು ಸಹ ಉಲ್ಲೇಖ ಮಾಡಿರಲಿಲ್ಲ. ಆದರೆ ಪಕ್ಷದ ರಾಜ್ಯ ಘಟಕದಲ್ಲಿ ಎಲ್ಲವೂ ಸರಿ ಇಲ್ಲ ಎಂದು ಟ್ವೀಟ್ ಮೂಲಕ ಸೂಚನೆ ನೀಡಿದ್ದರು.

2022ರಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರ ವಿಧಾನಸಭೆ ಚುನಾವಣೆ ನಡೆಯಲಿದೆ. ಉತ್ತರಾಖಂಡದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಿದ್ದಾರೆ.

Recommended Video

Team Indiaದಲ್ಲಿ ಗುರು-ಶಿಷ್ಯರ ಮೋಡಿ ನೋಡಿ | Oneindia Kannada

English summary
Congress screening committee for Uttarakhand to hold a meeting on December 29th 1 pm. Uttarakhand assembly elections will be held on 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X