Uttarakhand Election Result 2022: ಕಾಂಗ್ರೆಸ್ಗೆ 48 ಕ್ಷೇತ್ರದಲ್ಲಿ ಗೆಲುವು ಎಂದ ಹರೀಶ್ ರಾವತ್
ಡೆಹ್ರಾಡೂನ್, ಮಾರ್ಚ್ 10: ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಪಂಜಾಬ್ ಮತ್ತು ಗೋವಾ ಎಲ್ಲಾ ಐದು ರಾಜ್ಯಗಳಿಗೆ 2022 ರ ವಿಧಾನಸಭಾ ಚುನಾವಣೆಯ ಎಣಿಕೆ ಪ್ರಾರಂಭವಾಗಿದೆ. ಈ ನಡುವೆ ಹಲವಾರು ನಾಯಕರುಗಳು ತಮ್ಮ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಲ್ಲಾ ರಾಜ್ಯಗಳಾದ್ಯಂತ ಅಂಚೆ ಮತಪತ್ರಗಳನ್ನು ಇನ್ನೂ ಎಣಿಕೆ ಮಾಡುತ್ತಿದ್ದ ಸಂದರ್ಭದಲ್ಲೇ ಉತ್ತರಾಖಂಡ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಹರೀಶ್ ಸಿಂಗ್ ರಾವತ್ ಉತ್ತರಾಖಂಡದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರವನ್ನು ಪಡೆಯಲಿದೆ. ಕಾಂಗ್ರೆಸ್‌ಗೆ 48 ಕ್ಷೇತ್ರದಲ್ಲಿ ಗೆಲುವು ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಎಸ್‌ಎಸ್‌ಪಿ ಜನಮೇಜಯ್ ಖಂಡೂರಿ ಪ್ರಕಾರ, ಡೆಹ್ರಾಡೂನ್‌ನಲ್ಲಿ ಮತ ಎಣಿಕೆಗಾಗಿ ಸುಮಾರು 550 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲಾಗಿದೆ.

ಎಎನ್‌ಐ ಜೊತೆ ಮಾತನಾಡಿದ ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್, "ಉತ್ತರಾಖಂಡದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ನನಗೆ ವಿಶ್ವಾಸವಿದೆ, ಮುಂದಿನ 2-3 ಗಂಟೆಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ, ನನಗೆ ರಾಜ್ಯದ ಜನರ ಮೇಲೆ ನಂಬಿಕೆ ಇದೆ, ನಾನು ಕಾಂಗ್ರೆಸ್ ಅನ್ನು ನಂಬುತ್ತೇನೆ. 48 ಸ್ಥಾನಗಳನ್ನು ಪಡೆಯಲಿದೆ," ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಚುನಾವಣೆಯು ಫೆಬ್ರವರಿ 14 ರಂದು ಮತದಾನ ನಡೆದಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆದಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. (ಒನ್‌ಇಂಡಿಯಾ ಸುದ್ದಿ)












Click it and Unblock the Notifications