• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉತ್ತರಾಖಂಡ್ ಹಿಮಪಾತ: ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ

|

ಡೆಹ್ರಾಡೂನ್, ಫೆಬ್ರವರಿ.07: ಉತ್ತರಾಖಂಡ್ ಹಿಮಪರ್ವತ ಸ್ಫೋಟ ಮತ್ತು ಜಲಪ್ರಳಯದಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೌಲಿ ಗಂಗಾ ನದಿಯ ಸುತ್ತಮುತ್ತಲ ಪ್ರದೇಶದಲ್ಲಿ 10 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, 100ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Uttarakhand glacier burst live updates: 100ಕ್ಕೂ ಅಧಿಕ ಮಂದಿ ಸಾವಿನ ಶಂಕೆ?

ಚಮೇಲಿ ಜಿಲ್ಲೆಯ ತಪೋವನ ಪ್ರದೇಶದಲ್ಲಿರುವ ಸುರಂಗದಲ್ಲಿ ಸಿಲುಕಿದ್ದ 17 ಕಾರ್ಮಿಕರನ್ನು ಇಂಡೋ-ಟಿಬೆಟಿಯನ್ ಪೊಲೀಸರು ರಕ್ಷಿಸಿದ್ದಾರೆ. ಸುರಂಗದಲ್ಲಿ ಸಿಲುಕಿದ್ದ ಒಬ್ಬ ಕಾರ್ಮಿಕನನ್ನು ಹಗ್ಗದ ಸಹಾಯದಿಂದ ರಕ್ಷಣಾ ಪಡೆದು ಹೊರಗೆಳೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

150ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ:

ಉತ್ತರಾಖಂಡ್ ದೌಲಿಗಂಗಾ ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಾಗಿದ್ದು, ರಿಷಿಗಂಗಾ ಪವರ್ ಪ್ರಾಜೆಕ್ಟ್ ಗೆ ಅಪಾಯ ಎದುರಾಗಿದೆ. ಚಮೋಲಿ ಜಿಲ್ಲೆ ತಪೋವನ ಪ್ರದೇಶದ ರೈನಿ ನದಿಯ ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ. ಹಿಮಪಾತ ಮತ್ತು ಉಕ್ಕಿ ಹರಿಯುತ್ತಿರುವ ನದಿ ನೀರಿದಿಂದಾಗಿ 100 ರಿಂದ 150 ಮಂದಿ ಕಾರ್ಮಿಕರಿಗೆ ಪ್ರಾಣಭೀತಿ ಎದುರಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಉತ್ತರ ಪ್ರದೇಶದ ಭದ್ರತಾ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಅಪಾಯದಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಉತ್ತರಾಖಂಡ್ ಹಿಮಪರ್ತವ ಸ್ಫೋಟದ ಸ್ಥಳಕ್ಕೆ 250ಕ್ಕೂ ಹೆಚ್ಚು ಇಂಡೋ-ಟಿಬೆಟಿಯನ್ ಪಡೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆಯನ್ನು ಚುರುಕಿನಿಂದ ನಡೆಸಲಾಗುತ್ತಿದೆ ಎಂದು ಐಟಿಬಿಪಿ ಪಡೆಯ ಡಿಜಿ ಎಸ್.ಎಸ್.ದೇಸ್ವಾಲ್ ತಿಳಿಸಿದ್ದಾರೆ.

English summary
Uttarakhand Govt Announces Financial Assistance Of Rs 4 Lakhs Each Deceased Family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X