ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ್: ಜೋಶಿ ಮಠ ಭಾಗದಲ್ಲಿ ಭಾರಿ ಹಿಮಪಾತ, ಪ್ರವಾಹ ಭೀತಿ

|
Google Oneindia Kannada News

ಚಮೋಲಿ, ಫೆಬ್ರವರಿ 7: ಚಮೋಲಿ ಜಿಲ್ಲೆಯ ಹಿಮಪರ್ವತಗಳಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, ಈ ಪ್ರದೇಶದಲ್ಲಿ ಹರಿಯುವ ನದಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದೌಲಿಗಂಗಾ ನದಿ ನೀರಿನ ಮಟ್ಟದ ಅಪಾಯದ ಮೀರಿ ಹರಿಯುತ್ತಿದೆ.

ಭಾರಿ ಹಿಮಪಾತದಿಂದಾಗಿ ಋಷಿಗಂಗಾ ವಿದ್ಯುತ್ ಯೋಜನೆಗೂ ಹಾನಿಯಾಗಿದೆ ಎಂದು ಎಎನ್ಐ ವರದಿ ಮಾಡಿದೆ. ರೇಣಿ ಗ್ರಾಮದ ತಪೋವನ ಪ್ರದೇಶವು ಹಿಮದಿಂದ ತುಂಬಿದೆ. ಸಾವು-ನೋವಿನ ಬಗ್ಗೆ ಸದ್ಯಕ್ಕೆ ಮಾಹಿತಿ ಸಿಕ್ಕಿಲ್ಲ.

Uttarakhand:Heavy flooding Chamolis Joshimath area Rescue workers reach Reni village

ಐಟಿಬಿಪಿ ನೂರಾರು ಮಂದಿ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಘತನೆ ಸಂಭವಿಸಿದ ಸಮಯದಲ್ಲಿ ಸುಮಾರು 50 ಮಂದಿ ಕಾರ್ಮಿಕರು ಈ ಪ್ರದೇಶದಲ್ಲಿದ್ದರು ಎಂದು ತಿಳಿದು ಬಂದಿದೆ.

ಅಲಕಾನಂದ, ದೌಲಿಗಂಗಾ ನದಿ ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಡಳಿತ ಸೂಚಿಸಿದೆ. ಈ ನಡುವೆ ಯಾವುದೇ ಗಾಳಿಸುದ್ದಿಗೆ ಕಿವಿಗೊಡದಂತೆ ಮುಖ್ಯಮಂತ್ರಿ ಟಿಎಸ್ ರಾವತ್ ಅವರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

English summary
Uttarakhand: Breach of a glacier, Rescue workers reach Reni village in Joshimath area of Chamoli district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X