ಕೋವಿಡ್ 19 ಭೀತಿ ನಡುವೆ ಚಾರ್ ಧಾಮ್ ಯಾತ್ರೆ, ಹೈಕೋರ್ಟ್ ಕಳವಳ
ಹರಿದ್ವಾರ, ಜೂನ್ 27: ಚಮೋಲಿ, ರುದ್ರಪ್ರಯಾಗ ಹಾಗೂ ಉತ್ತರಕಾಶಿಯಲ್ಲಿ ಯಾತ್ರೆಗೆ ಸ್ಥಳೀಯರಿಗೆ ಅವಕಾಶ ಮಾಡಿಕೊಟ್ಟಿರುವ ಉತ್ತರಾಖಂಡ್ ಸರ್ಕಾರದ ನಿರ್ಧಾರದ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
''ಉತ್ತರಾಖಂಡ ಸರ್ಕಾರವು ಜುಲೈ 1ರಿಂದ ನಡೆಸಲು ಉದ್ದೇಶಿಸಿರುವ ಚಾರ್‌ಧಾಮ್ ಯಾತ್ರೆಯನ್ನು ಮರುಪರಿಶೀಲಿಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚಿಸಿದೆ. ಕೋವಿಡ್ ಮೂರನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ತನ್ನ ನಿರ್ಧಾರ ಮರುಪರಿಶೀಲಿಸಬೇಕು,'' ಎಂದು ಹೈಕೋರ್ಟ್ ತಿಳಿಸಿದೆ.
ಇದೇ ವರ್ಷ ಏಪ್ರಿಲ್‌ನಲ್ಲಿ ನಡೆದ ಕುಂಭಮೇಳದಿಂದಾಗಿ ಕೋವಿಡ್ ಸಾಂಕ್ರಾಮಿಕತೆ ವ್ಯಾಪಿಸಿ, ಅದರಿಂದ ಮೇ ತಿಂಗಳಿನಲ್ಲಿ ಸಾವು ನೋವು ಸಂಭವಿಸಿದ್ದನ್ನು ಪೀಠವು ವಿಚಾರಣೆಯ ಉಲ್ಲೇಖಿಸಲಾಗಿದ್ದನ್ನು ಪರಿಗಣಿಸಿದೆ.

''ಏಪ್ರಿಲ್‌ನಲ್ಲಿ ನಡೆದ ಕುಂಭಮೇಳ ಹಾಗೂ ಮೇನಲ್ಲಿ ಸಂಭವಿಸಿದ ಸಾವುನೋವುಗಳ ನಡುವೆ ಸ್ಪಷ್ಟ ಸಂಬಂಧವಿದೆ,'' ಎಂದು ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್ ಹಾಗೂ ನ್ಯಾ. ಅಲೋಕ್ ವರ್ಮಾ ಅವರಿದ್ದ ವಿಭಾಗೀಯ ಪೀಠವು ಹೇಳಿದೆ. ಜೊತೆಗೆ ಕೋವಿಡ್ ಕಾರಣದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ರದ್ದಾಗಿರುವುದನ್ನು ಕೋರ್ಟ್ ಉಲ್ಲೇಖಿಸಿದೆ.
ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಕುಂಭ ಮೇಳವು ಉತ್ತರಾಖಂಡ ಮಾತ್ರವಲ್ಲದೇ ದೇಶಾದ್ಯಂತ ಸೂಪರ್ ಸ್ಪ್ರೆಡರ್ ಆಗಿ ಮಾರ್ಪಟ್ಟಿತ್ತು ಎಂದು ವರದಿಗಳು ಬಂದಿತ್ತು. ಈ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಮೇ.14ರಿಂದ ಆರಂಭವಾಗಬೇಕಿದ್ದ ಚಾರ್ ಧಾಮ್ ಯಾತ್ರೆಯನ್ನು ಈ ಮುಂಚೆ ಕೋವಿಡ್ ಕಾರಣಕ್ಕಾಗಿ ರದ್ದುಗೊಳಿಸಲಾಗಿತ್ತು. ಆದರೆ, ರುದ್ರಪ್ರಯಾಗ ಜಿಲ್ಲೆಯಲ್ಲಿ ಕೇದಾರನಾಥ ದೇಗುಲ, ಚಮೋಲಿಯಲ್ಲಿ ಬದ್ರಿನಾಥ್ ಹಾಗೂ ಉತ್ತರಕಾಶಿಯಲ್ಲಿನ ಯಮುನೋತ್ರಿ, ಗಂಗೋತ್ರಿ ದೇಗುಲಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿದೆ. ಜುಲೈ 1 ಹಾಗೂ ಜುಲೈ 11ರಂದು ಎರಡು ಹಂತದಲ್ಲಿ ದೇವಸ್ಥಾನಕ್ಕೆ ಯಾತ್ರೆ ಕೈಗೊಳ್ಳಬಹುದಾಗಿದೆ. ಸ್ಥಳೀಯರು ತಮ್ಮ ಕೊರೊನಾ ನೆಗೆಟಿವ್ ವರದಿ ತರುವುದು ಕಡ್ಡಾಯ ಎಂದು ಇತ್ತೀಚೆಗೆ ಆದೇಶ ಹೊರಡಿಸಿದೆ.
Recommended Video
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications