ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸರಿತಾ ಆರ್ಯ ಬಿಜೆಪಿಗೆ ಸೇರ್ಪಡೆ

|
Google Oneindia Kannada News

ಡೆಹ್ರಾಡೂನ್, ಜನವರಿ 17: ಉತ್ತರಾಖಂಡ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸರಿತಾ ಆರ್ಯ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಉತ್ತರಾಖಂಡ ವಿಧಾನಸಭಾ ಚುನಾವಣೆ ಒಂದೇ ತಿಂಗಳು ಬಾಕಿ ಇರುವಾಗ ಇಂಥದ್ದೊಂದು ಬದಲಾವಣೆ ನಡೆದಿದೆ.

ಸರಿತಾ ಆರ್ಯ ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್‌ನಿಂದ ಹೊರಹಾಕಲಾಗಿದೆ. ಆರ್ಯ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಧಾಮಿ, ಅವರು ಯಾವಾಗಲೂ ಬಡವರು, ವಂಚಿತ ವರ್ಗಗಳು ಮತ್ತು ಮಹಿಳೆಯರಿಗಾಗಿ ಹೋರಾಡಿದ್ದಾರೆ ಎಂದು ಹೇಳಿದರು. ಅವರ ಪಕ್ಷ ಸೇರ್ಪಡೆ ಖಂಡಿತವಾಗಿಯೂ ನಮ್ಮ ಪಕ್ಷವನ್ನು ಬಲಪಡಿಸುತ್ತದೆ ಎಂದರು.

Breaking: ಉತ್ತರಾಖಂಡ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟBreaking: ಉತ್ತರಾಖಂಡ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

ಆರ್ಯ ಅವರು ನೈನಿತಾಲ್‌ನಿಂದ ಸ್ಪರ್ಧಿಸಲು ಉತ್ಸುಕರಾಗಿದ್ದರು. ಆದರೆ ಕಾಂಗ್ರೆಸ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಅನುಮಾನವಿತ್ತು. ಹೀಗಾಗಿ ಬಿಜೆಪಿ ಸೇರಿದ್ದಾರೆ.

Uttarakhand Mahila Congress President Sarita Arya Joins BJP

ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮತ್ತು ನೈನಿತಾಲ್ ಮಾಜಿ ಶಾಸಕಿ ಸರಿತಾ ಆರ್ಯ ಅವರು ಸೋಮವಾರ ಆಡಳಿತ ಪಕ್ಷ ಬಿಜೆಪಿ ಸೇರ್ಪಡೆಯಾಗಿದ್ದಾರೆ ಮತ್ತು ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿದ್ದಾರೆ.

ಇಂದು ಬಲ್ಬೀರ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಛೇರಿಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಮದನ್ ಕೌಶಿಕ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಮಾಜಿ ಶಾಸಕಿ ಬಿಜೆಪಿಗೆ ಸೇರ್ಪಡೆಯಾದರು.

ಇನ್ನೊಂದೆಡೆ, ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ, ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದ ಆಂತರಿಕ ಕಚ್ಚಾಟದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದ ಹರಕ್ ಸಿಂಗ್ ರಾವತ್ ಅವರನ್ನು ಪಕ್ಷದಿಂದ ಭಾನುವಾರ ಉಚ್ಚಾಟಿಸಲಾಗಿದೆ.

ರಾವತ್ ಅವರನ್ನು ಸಂಪುಟದಿಂದ ಕೈಬಿಡುವ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
5 ತಿಂಗಳ ಮಗುವಿನ ತುರ್ತು ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿ

ಅವರ ಪ್ರಕಾರ, ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಬಿಜೆಪಿ ಆರು ವರ್ಷಗಳ ಕಾಲ ರಾವತ್ ಅವರನ್ನು ತನ್ನ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿದೆ.

ಅವರು ತಮ್ಮ ಕುಟುಂಬದ ಹಲವಾರು ಸದಸ್ಯರಿಗೆ ಟಿಕೆಟ್‌ಗಾಗಿ ಒತ್ತಾಯಿಸುತ್ತಿದ್ದರು ಮತ್ತು ಪಕ್ಷಕ್ಕೆ ಮರಳಲು ಅವರು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿಯ ಮೂಲಗಳನ್ನು ಉಲ್ಲೇಖಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಾವತ್ ಅವರು ಬಿಜೆಪಿ ನಾಯಕತ್ವದ ಬಗ್ಗೆ ಅತೃಪ್ತರಾಗಿದ್ದಾರೆ ಎಂಬ ವರದಿಗಳು ವಾರಗಳಿಂದ ಕೇಳಿ ಬರುತ್ತಿದೆ.

ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯನ್ನು 7 ಹಂತಗಳಲ್ಲಿ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಅಂತಿಮವಾಗಿ ಫಲಿತಾಂಶವನ್ನು ಮಾರ್ಚ್ 10, 2022ರಂದು ಪ್ರಕಟಿಸಲು ನಿರ್ಧರಿಸಿದೆ. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಇಂದಿನಿಂದಲೇ ಜಾರಿ ಆಗಲಿದೆ ಎಂದು ತಿಳಿಸಿದರು.

ಐದು ರಾಜ್ಯಗಳ ಚುನಾವಣೆಯಲ್ಲಿ ಒಟ್ಟು 18.34 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 24.9 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ.

ಉತ್ತರಾಖಂಡದಲ್ಲಿ ಜನವರಿ 21ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದ್ದು, ಫೆ.14ರಂದು ಮತದಾನ ನಡೆಯಲಿದೆ.

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

Recommended Video

IPL 2022 Exclusive: ಎಲ್ಲಾ ಒತ್ತಡದಿಂದ ಮುಕ್ತರಾದ Virat Kohli ಈಗ RCB ಗೆ ಮತ್ತೆ ಕ್ಯಾಪ್ಟನ್!! | Oneindia

ಅಭ್ಯರ್ಥಿಗಳಿಗೆ ಆನ್‌ಲೈನ್‌ ಮೂಲಕ ನಾಮಪತ್ರ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಮತ್ತು 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಹಾಗೂ ಕೊರೊನಾ ಸೋಂಕಿತ ಮತದಾರರು ಬ್ಯಾಲೆಟ್‌ ಪೇಪರ್‌ ಮೂಲಕ ಮತದಾನ ಮಾಡಬಹುದು .

English summary
The Bharatiya Janata Party on Monday, January 17, received a shot in the arm ahead of the upcoming Assembly polls in Uttarakhand when Pradesh Mahila Congress President Sarita Arya joined the saffron party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X