ಚುನಾವಣೆಗೂ ಮುನ್ನ ಬಿಜೆಪಿ ಆಂತರಿಕ ಕಚ್ಚಾಟ: ಉತ್ತರಾಖಂಡ್ ಸಚಿವ ವಜಾ

ಡೆಹ್ರಾಡೊನ್ ಜನವರಿ 17: ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ, ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದ ಆಂತರಿಕ ಕಚ್ಚಾಟದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದ ಹರಕ್ ಸಿಂಗ್ ರಾವತ್ ಅವರನ್ನು ಪಕ್ಷದಿಂದ ಭಾನುವಾರ ಉಚ್ಚಾಟಿಸಲಾಗಿದೆ. ರಾವತ್ ಅವರನ್ನು ಸಂಪುಟದಿಂದ ಕೈಬಿಡುವ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಅವರ ಪ್ರಕಾರ, ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಬಿಜೆಪಿ ಆರು ವರ್ಷಗಳ ಕಾಲ ರಾವತ್ ಅವರನ್ನು ತನ್ನ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿದೆ. ಅವರು ತಮ್ಮ ಕುಟುಂಬದ ಹಲವಾರು ಸದಸ್ಯರಿಗೆ ಟಿಕೆಟ್‌ಗಾಗಿ ಒತ್ತಾಯಿಸುತ್ತಿದ್ದರು ಮತ್ತು ಪಕ್ಷಕ್ಕೆ ಮರಳಲು ಅವರು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿಯ ಮೂಲಗಳನ್ನು ಉಲ್ಲೇಖಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಾವತ್ ಅವರು ಬಿಜೆಪಿ ನಾಯಕತ್ವದ ಬಗ್ಗೆ ಅತೃಪ್ತರಾಗಿದ್ದಾರೆ ಎಂಬ ವರದಿಗಳು ವಾರಗಳಿಂದ ಕೇಳಿ ಬರುತ್ತಿದೆ.

ಕಳೆದ ತಿಂಗಳ ಕೊನೆಯಲ್ಲಿ ಧಾಮಿ ಅವರು ತಮ್ಮ ಮನೆಯಲ್ಲಿ ರಾತ್ರಿಯ ಊಟದಲ್ಲಿ ರಾವತ್ ಅವರೊಂದಿಗಿನ ಚಿತ್ರವನ್ನು ಟ್ವೀಟ್ ಮಾಡಿದ್ದರು. ಇದಕ್ಕೂ ದ್ವೇಷದ ಕುರಿತಾದ ಊಹಾಪೋಹವನ್ನು ಬಳಿಯುವ ಪ್ರಯತ್ನವಾಗಿದೆ.ರಾಜ್ಯ ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಆರೋಗ್ಯ ಸಚಿವ ಧನ್ ಸಿಂಗ್ ರಾವತ್ ಮತ್ತು ಶಾಸಕ ಉಮೇಶ್ ಶರ್ಮಾ ಕೌ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

Uttarakhand Minister Sacked Amid BJP Infighting Ahead Of Polls

ಬಿಜೆಪಿ ಆಡಳಿತವನ್ನು ತನ್ನ ಕೈಗೆ ಪಡೆದ ಬಳಿಕ ಇಲ್ಲಿ ಎರಡು ಬಾರಿ ಮುಖ್ಯಮಂತ್ರಿ ಬದಲಾವಣೆ ಆಗಿದೆ. ಬಿಜೆಪಿಯ ಆಂತರಿಕ ರಾಜಕೀಯದ ಕಾರಣದಿಂದಾಗಿ ಎರಡೂ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದ್ದಾರೆ. 2021 ರ ಮಾರ್ಚ್‌ನಲ್ಲಿ ತ್ರಿವೇಂದ್ರ ಸಿಂಗ್‌ ರಾವತ್‌ ವಿರುದ್ಧದ ಧ್ವನಿಗಳು ಕೇಳಿ ಬಂದ ಕಾರಣದಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್‌ ರಾವತ್‌ ರಾಜೀನಾಮೆ ನೀಡಿದರು. ಆ ಬಳಿಕ ತೀರತ್‌ ಸಿಂಗ್‌ ರಾವತ್‌ ಉತ್ತರಾಖಂಡದ ಮುಖ್ಯಮಂತ್ರಿ ಕುರ್ಚಿಗೆ ಏರಿದರು. ಆದರೆ ಬಳಿಕ ತೀರತ್‌ ಸಿಂಗ್‌ ರಾವತ್‌ ಕೂಡಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದಾಗಿ ಬಳಿಕ ಈ ಪುಷ್ಕರ್‌ ಸಿಂಗ್‌ ಧಾಮಿ ಉತ್ತರಾಖಂಡ ಮುಖ್ಯಮಂತ್ರಿ ಆಗಿದ್ದಾರೆ. ಹಾಗೆಯೇ 45 ವರ್ಷ ಪ್ರಾಯದ ಪುಷ್ಕರ್‌ ಸಿಂಗ್‌ ಧಾಮಿ ಯುವ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ.

ಈ ರೀತಿಯಾಗಿ ಎರಡು ಬಾರಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿಕೊಂಡಿರುವ ಬಿಜೆಪಿಯು ಈಗ ಉತ್ತರಾಖಂಡದಲ್ಲಿ ತನ್ನ ಸರ್ಕಾರವನ್ನು ಉಳಿಸಿಕೊಳ್ಳುತ್ತಾ ಎಂಬ ಪ್ರಶ್ನೆ ಮೂಡಿದೆ. ಕಾಂಗ್ರೆಸ್‌ ಮಾತ್ರ ಬಿಜೆಪಿಯು ಈ ರೀತಿಯಾಗಿ ರಾಜಕೀಯ ಅಸ್ಥಿರತೆಯನ್ನು ಸೃಷ್ಟಿ ಮಾಡಿ ಜನರಿಗೆ ತೊಂದರೆ ಉಂಟು ಮಾಡುತ್ತಿದೆ ಎಂದು ಆರೋಪ ಮಾಡಿದೆ. ಈ ನಡುವೆ ಉತ್ತರಾಖಂಡದಲ್ಲಿ ಅಧಿಕವಾಗಿ ಅಧಿಕಾರ ವಿರೋಧಿ ಅಲೆಯು ಹಬ್ಬಿದೆ. ಇನ್ನು ಇತ್ತೀಚೆಗೆ ಉತ್ತರಾಖಂಡ ರಾಜ್ಯ ಸಚಿವ ಯಶ್‌ಪಾಲ್‌ ಆರ್ಯ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷವನ್ನು ತೊರೆದು ಕಾಂಗ್ರೆಸ್‌ ಸೇರ್ಪಡೆ ಆಗಿದ್ದಾರೆ. ಅವರ ಪುತ್ರ, ಶಾಸಕ ಸಂಜೀವ ಆರ್ಯ ಕೂಡಾ ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್‌ನ ಕೈ ಹಿಡಿದಿದ್ದಾರೆ.

ಬಿಜೆಪಿಯು ಕಳೆದ 2017 ವಿಧಾನಸಭೆ ಚುನಾವಣೆಯಲ್ಲಿ ಉತ್ತರಾಖಂಡದ ಒಟ್ಟು 70 ವಿಧಾನಸಭೆ ಕ್ಷೇತ್ರದಲ್ಲಿ 57 ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ತನ್ನ ವಿಜಯ ಪತಾಕೆಯನ್ನು ಉತ್ತರಾಖಂಡದಲ್ಲಿ ಹಾರಿಸಿದೆ. ಶೇಕಡ 47 ಮತವನ್ನು ಬಿಜೆಪಿಯು ಪಡೆದಿದೆ. ಮುಂಬರುವ ಚುನಾವಣೆಯಲ್ಲಿ ಉತ್ತರಾಖಂಡದಲ್ಲಿ ಬಿಜೆಪಿಯು ಕಾಂಗ್ರೆಸ್‌ಗೆ ಎದುರಾಗಿ ನಿಲ್ಲಲು ತಯಾರಿ ನಡೆಸುತ್ತಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ಶೇಕಡ 34 ರಷ್ಟು ಮತವನ್ನು ಗಳಿಸಿದೆ.

Recommended Video

      A Big Salute To Our Front Line Workers | Covid Warriors | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+