ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ್ ಅಪ್ರಾಪ್ತೆಯ ಹತ್ಯೆ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್ ಧ್ವಂಸಕ್ಕೆ ಸಿಎಂ ಆದೇಶ

|
Google Oneindia Kannada News

ಹರಿದ್ವಾರ ಸೆಪ್ಟೆಂಬರ್ 24: 19 ವರ್ಷದ ರಿಸೆಪ್ಷನಿಸ್ಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ಉತ್ತರಾಖಂಡದ ಋಷಿಕೇಶದಲ್ಲಿರುವ ವನತಾರಾ ರೆಸಾರ್ಟ್ ಅನ್ನು ಧ್ವಂಸಗೊಳಿಸಲಾಗಿದೆ. ರೆಸಾರ್ಟ್‌ನಲ್ಲಿ ರಿಸೆಪ್ಷನಿಸ್ಟ್ ಆಗಿದ್ದ 19 ವರ್ಷದ ಯುವತಿ ಹತ್ಯೆ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ವಿನೋದ್ ಆರ್ಯ ಪುತ್ರ ಪುಲ್ಕಿತ್ ಆರ್ಯ ಅನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆ ಹತ್ಯೆ ವಿರುದ್ಧ ಪ್ರತಿಭಟನೆಯನ್ನು ಹೆಚ್ಚಿಸಿದ ನಂತರ ಉತ್ತರಾಖಂಡ್ ಸಿಎಂ ಪುಷ್ಕರ್ ಧಾಮಿ ರೆಸಾರ್ಟ್ ಧ್ವಂಸಕ್ಕೆ ಆದೇಶ ನೀಡಿದ್ದಾರೆ.

"ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ನೀಡಿದ್ದ ಆದೇಶದ ಮೇರೆ ರೆಸಾರ್ಟ್ ಅನ್ನು ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ" ಎಂದು ಮುಖ್ಯಮಂತ್ರಿಯ ವಿಶೇಷ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.

Uttarakhand receptionist murder

ಇಲ್ಲಿನ ಯಮಕೇಶ್ವರ ಬ್ಲಾಕ್‌ನಲ್ಲಿರುವ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಎಂಬ ಮೂವರು ಆರೋಪಿಗಳನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಲ್ಲದೆ, ಹದಿಹರೆಯದವರ ಹತ್ಯೆಯ ಆರೋಪದ ನಂತರ ರಾಜ್ಯದ ಎಲ್ಲಾ ರೆಸಾರ್ಟ್‌ಗಳಲ್ಲಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಆದೇಶ ನೀಡಿದ್ದಾರೆ. ಅಕ್ರಮವಾಗಿ ನಡೆಸುತ್ತಿರುವ ರೆಸಾರ್ಟ್‌ಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ.

Uttarakhand receptionist murder

ಅಂತಹ ಅಪರಾಧಗಳಿಗೆ ಕಠಿಣ ಶಿಕ್ಷೆ
ಅಕ್ರಮವಾಗಿ ನಡೆಸುತ್ತಿರುವ ರೆಸಾರ್ಟ್‌ಗಳ ವಿರುದ್ಧ ಹಾಗೂ ಅತ್ಯಾಚಾರಿ ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಧಾಮಿ ಭರವಸೆ ನಿಡಿದ್ದಾರೆ. "ಇದು ದುರದೃಷ್ಟಕರ. ಪೊಲೀಸರು ಕೆಲಸ ಮಾಡುತ್ತಿದ್ದಾರೆ, ಆರೋಪಿಗಳನ್ನು ಬಂಧಿಸಿದ್ದಾರೆ. ಅಂತಹ ಘೋರ ಅಪರಾಧ ಸಾಬೀತಾದರೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ. ಅಪರಾಧಿ ಯಾರೇ ಆಗಿರಲಿ ಅವರಿಗೆ ಶಿಕ್ಷೆ ಖಂಡಿತ "ಎಂದು ಅವರು ಭರವಸೆ ನೀಡಿದ್ದಾರೆ.

Uttarakhand receptionist murder

''ಬಾಲಕಿಯ ಹತ್ಯೆಯ ನಂತರ, ಅಪರಾಧಿಗಳಲ್ಲಿ ಭಯ ಹುಟ್ಟಿಸಲು ಕಟ್ಟಡವನ್ನು ನೆಲಸಮಗೊಳಿಸಬೇಕು ಎಂದು ನಾನು ತಕ್ಷಣವೇ ಹೇಳಿದ್ದೇನೆ'' ಎಂದು ಯಮಕೇಶ್ವರ ಶಾಸಕ ರೇಣು ಬಿಷ್ತ್ ಹೇಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ಆದೇಶಿಸಿದ ಸಿಎಂಗೆ ಹಾಗೂ ಸಂತ್ರಸ್ತೆಯ ಪೋಷಕರೊಂದಿಗೆ ಅನುಚಿತವಾಗಿ ವರ್ತಿಸಿದ ಕಂದಾಯ ಪೊಲೀಸ್ ಉಪನಿರೀಕ್ಷಕರನ್ನು ಅಮಾನತುಗೊಳಿಸಿದ್ದಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.

Uttarakhand receptionist murder

ಪುಲ್ಕಿತ್ ಆರ್ಯ ಹರಿದ್ವಾರದ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ. ವಿನೋದ್ ಆರ್ಯ ಅವರು ಈ ಹಿಂದೆ ಉತ್ತರಾಖಂಡದ ಮತಿ ಕಲಾ ಮಂಡಳಿಯ ಅಧ್ಯಕ್ಷರಾಗಿ ರಾಜ್ಯ ಸಚಿವ ಶ್ರೇಣಿಯನ್ನು ಹೊಂದಿದ್ದರು. ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯನ್ನು ಹತ್ಯೆಗೈದ ಆರೋಪದ ಮೇಲೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಸೇರಿದಂತೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ. ಸೆಪ್ಟೆಂಬರ್ 18 ರಂದು ಬಾಲಕಿ ಕಾಣೆಯಾಗಿದ್ದಳು. ಆರೋಪಿಗಳು ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಂದೆ ಆರೋಪಿಸಿದ್ದು, ಘಟನೆಯ ಆಡಿಯೋವನ್ನು ರೆಕಾರ್ಡ್ ಮಾಡಲಾಗಿದೆ.

English summary
The demolition of Vanatara resort in Uttarakhand's Rishikesh, which is owned by BJP leader's son Pulkit Arya, arrested for his alleged involvement in the murder of a 19-year-old receptionist, was carried out on the orders of the state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X