ಉತ್ತರಾಖಂಡ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ 12 ಮಂದಿ ಸಾವು
ಉತ್ತರಾಖಂಡದ ಜೋಶಿಮಠದ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಜೋಶಿಮಠ ಬ್ಲಾಕ್‌ನ ಉರ್ಗಾಂ-ಪಲ್ಲಾ ಜಖೋಲಾ ಮೋಟಾರುಮಾರ್ಗದಲ್ಲಿ (Urgam-Palla Jakhola motorway) ವಾಹನವೊಂದು ಅಪಘಾತಕ್ಕೀಡಾಗಿದೆ.
ಒಟ್ಟು ಸತ್ತವರಲ್ಲಿ 10 ಪುರುಷರು ಎಂದು ಹೇಳಲಾಗುತ್ತಿದ್ದು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ, ಪೊಲೀಸ್ ವರಿಷ್ಠಾಧಿಕಾರಿ ಪ್ರಮಂದ್ರ ದೋವಲ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಸ್ಥಳೀಯ ಆಡಳಿತವು ಅಪಘಾತ ಸ್ಥಳಕ್ಕೆ ತಲುಪಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.












Click it and Unblock the Notifications