ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಸಿಜೆಐ ಹುದ್ದೆಗೆ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್‌ ಹೆಸರು ಶಿಫಾರಸು

|
Google Oneindia Kannada News

ನವದೆಹಲಿ, ಅಕ್ಟೋಬರ್ 11; ಭಾರತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ತಮ್ಮ ಉತ್ತರಾಧಿಕಾರಿ ಹೆಸರನ್ನು ಶಿಫಾರಸು ಮಾಡಿದ್ದಾರೆ. 49ನೇ ಮುಖ್ಯ ನ್ಯಾಯಮೂರ್ತಿಯಾಗಿರುವ ಯುಯು ಲಲಿತ್‌ ನವೆಂಬರ್‌ನಲ್ಲಿ ನಿವೃತ್ತರಾಗಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ 50ನೇ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್‌ ಹೆಸರು ಶಿಫಾರಸು ಮಾಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

Justice UU Lalit Profile : ತಲಾಖ್ ತೀರ್ಪು ಕೊಟ್ಟವರು... ನೂತನ ಸಿಜೆಐ ಲಲಿತ್ ಪರಿಚಯ Justice UU Lalit Profile : ತಲಾಖ್ ತೀರ್ಪು ಕೊಟ್ಟವರು... ನೂತನ ಸಿಜೆಐ ಲಲಿತ್ ಪರಿಚಯ

UU Lalit Recommends Justice DY Chandrachud As His Successor

ಕಳೆದ ವಾರ ಕೇಂದ್ರ ಕಾನೂನು ಸಚಿವಾಲಯ ತಮ್ಮ ಉತ್ತರಾಧಿಕಾರಿ ಹೆಸರನ್ನು ಸೂಚಿಸುವಂತೆ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್‌ಗೆ ಸೂಚನೆ ನೀಡಿತ್ತು. ನವೆಂಬರ್ 8ರಂದು ಯುಯು ಲಲಿತ್ ನಿವೃತ್ತರಾಗಲಿದ್ದಾರೆ.

ಹೈಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು ಹೈಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯಮೂರ್ತಿಯಾಗಿರುವ ಧನಂಜಯ ವೈ. ಚಂದ್ರಚೂಡ್‌ ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.

ಅಚ್ಚರಿ, ಆಕ್ಷೇಪಕ್ಕೆ ಕಾರಣವಾದ ಸುಪ್ರೀಂಕೋರ್ಟ್ ಕೊಲಿಜಿಯಂ ನಿರ್ಧಾರ ಅಚ್ಚರಿ, ಆಕ್ಷೇಪಕ್ಕೆ ಕಾರಣವಾದ ಸುಪ್ರೀಂಕೋರ್ಟ್ ಕೊಲಿಜಿಯಂ ನಿರ್ಧಾರ

ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್‌ ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಬಿಎ ಆನರ್ಸ್ ಪದವಿ ಪಡೆದಿದ್ದಾರೆ. ದೆಹಲಿ ವಿವಿಯ ಕ್ಯಾಂಪಸ್ ಲಾ ಸೆಂಟರ್‌ನಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ.

ಅಮೆರಿಕದ ಹಾರ್ವರ್ಡ್‌ ಲಾ ಸ್ಕೂಲ್‌ನಿಂದ ಎಲ್‌ಎಲ್‌ಎಂ ಮತ್ತು ಎಸ್‌ಜೆಡಿ ಪದವಿ ಪಡೆದಿದ್ದಾರೆ. 1998ರಲ್ಲಿ ಭಾರತದ ಹೆಚ್ಚುವರಿ ಸಾಲಿಟರ್ ಜನರಲ್ ಆಗಿಯೂ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.

ನ್ಯಾ. ಡಿ. ವೈ. ಚಂದ್ರಚೂಡ್ ಮಹಾರಾಷ್ಟ್ರ ಬಾರ್‌ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಕೊಂಡರು. ಬಳಿಕ ಬಾಂಬೆ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ನಲ್ಲಿ ವಕೀಲರಾಗಿ ಕಾರ್ಯ ನಿರ್ವಹಣೆ ಮಾಡಿದರು.

ಡಿ. ವೈ. ಚಂದ್ರಚೂಡ್ ಮಹಾರಾಷ್ಟ್ರ ನ್ಯಾಯಾಂಗ ಅಕಾಡೆಮಿ ನಿರ್ದೇಶಕಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಅಕ್ಟೋಬರ್ 31, 2013ರಂದು ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೇ 13, 2016 ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

English summary
CJI UU Lalit recommend Justice DY Chandrachud as his successor. UU Lalit is retiring on November 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X