ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ಚುನಾವಣೆ ಮುಖ್ಯಮಂತ್ರಿ ಅಭ್ಯರ್ಥಿ: ಯೂ-ಟರ್ನ್ ಹೊಡೆದ ಬಿಜೆಪಿ

|
Google Oneindia Kannada News

ನವದೆಹಲಿ, ಮಾರ್ಚ್ 4: ಕೇರಳ ವಿಧಾನಸಭೆ ಚುನಾವಣೆಯಲ್ಲಿ 'ಮೆಟ್ರೋ ಮ್ಯಾನ್' ಇ. ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಮೂಡಿದೆ. ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವಂತೆ ಪಕ್ಷದ ನಾಯಕತ್ವಕ್ಕೆ ಶಿಫಾರಸು ಮಾಡಿರುವುದಾಗಿ ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ತಿಳಿಸಿದ್ದರು.

ಇದನ್ನು ಕೇಂದ್ರ ಸಚಿವ ವಿ. ಮುರಳೀಧರನ್ ಕೂಡ ಅನುಮೋದಿಸಿದ್ದರು. ಆದರೆ ಕೆಲವೇ ಸಮಯದಲ್ಲಿ ತಮ್ಮ ಹೇಳಿಕೆಯಿಂದ ಹಿಂದೆ ಸರಿದಿರುವುದು ಗೊಂದಲ ಮೂಡಿಸಿದೆ. ತಾವು ತಪ್ಪಾಗಿ ಈ ಪ್ರಕಟಣೆ ನೀಡಿದ್ದಾಗಿ ಅವರು ಹೇಳಿದ್ದಾರೆ.

'ಮೆಟ್ರೋ ಮ್ಯಾನ್' ಶ್ರೀಧರನ್ ಕೇರಳ ಬಿಜೆಪಿ ಸಿಎಂ ಅಭ್ಯರ್ಥಿ'ಮೆಟ್ರೋ ಮ್ಯಾನ್' ಶ್ರೀಧರನ್ ಕೇರಳ ಬಿಜೆಪಿ ಸಿಎಂ ಅಭ್ಯರ್ಥಿ

'ಕೇರಳ ಬಿಜೆಪಿಯು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇ. ಶ್ರೀಧರನ್ ಅವರೊಂದಿಗೆ ಕೇರಳ ಚುನಾವಣೆಯಲ್ಲಿ ಹೋರಾಟ ನಡೆಸಲಿದೆ. ನಾವು ಕೇರಳದ ಜನತೆಗೆ ಭ್ರಷ್ಟಾಚಾರಮುಕ್ತ, ಅಭಿವೃದ್ಧಿಪರ ಆಡಳಿತ ನೀಡುವ ಸಲುವಾಗಿ ಸಿಪಿಐಎಂ ಮತ್ತು ಕಾಂಗ್ರೆಸ್ ಎರಡನ್ನೂ ಸೋಲಿಸಲಿದ್ದೇವೆ' ಎಂದು ಮುರಳೀಧರನ್ ಟ್ವೀಟ್ ಮಾಡಿದ್ದರು.

Union Minister V Muraleedharan Backtracks After Confirming E Sreedharan BJPs CM Candidate For Kerala Election

ಆದರೆ ತಮ್ಮ ಹೇಳಿಕೆಯನ್ನು ವಾಪಸ್ ಪಡೆದ ಮುರಳೀಧರನ್, ಟ್ವೀಟ್‌ಅನ್ನು ಕೂಡ ಅಳಿಸಿ ಹಾಕಿದ್ದಾರೆ. 'ಪಕ್ಷ ಈ ಪ್ರಕಟಣೆ ಮಾಡಿದೆ ಎಂದು ಮಾಧ್ಯಮ ವರದಿಗಳಿಂದ ನಾನು ತಿಳಿದುಕೊಂಡಿದ್ದೆ. ಬಳಿಕ ಪಕ್ಷದ ಮುಖ್ಯಸ್ಥರೊಂದಿಗೆ ಸ್ಪಷ್ಟಪಡಿಸಿಕೊಂಡೆ. ಅವರು ಅಂತಹ ಘೋಷಣೆ ಮಾಡಿಲ್ಲ ಎಂದು ತಿಳಿಸಿದರು' ಎಂದು ಅವರ ಸ್ಪಷ್ಟಪಡಿಸಿದ್ದಾರೆ.

ಅಳಿಯನಿಗೆ ಜೈಲು: ಚುನಾವಣೆ ಸಮೀಪದಲ್ಲಿಯೇ ಕೇರಳ ಸಿಎಂ ಪಿಣರಾಯಿಗೆ ಆಘಾತಅಳಿಯನಿಗೆ ಜೈಲು: ಚುನಾವಣೆ ಸಮೀಪದಲ್ಲಿಯೇ ಕೇರಳ ಸಿಎಂ ಪಿಣರಾಯಿಗೆ ಆಘಾತ

ಕೇರಳ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ಅವರು, ಇ. ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದರು.

English summary
Union Minister V Muraleedharan Backtracks After Confirming Metro Man E Sreedharan To Be BJP's CM Candidate For Kerala Assembly Election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X