ಮೊದಲು ಜಾಗ ಖಾಲಿ ಮಾಡಿ: ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟ ಭಾರತ

ಅಮೆರಿಕದ ಪಾಡ್‌ಕ್ಯಾಸ್ಟರ್ ಲೆಕ್ಸ್ ಫ್ರೀಡ್‌ಮನ್ ಅವರೊಂದಿಗೆ ಪಾಡ್‌ಕ್ಯಾಸ್ಟ್‌ನಲ್ಲಿ ಪಾಕಿಸ್ತಾನದ ಜೊತೆ ಶಾಂತಿ ಸೌಹಾರ್ದತೆ ಕಾಪಾಡಲು ಮಾಡಿದ ಪ್ರಯತ್ನಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪಾಕಿಸ್ತಾನ ಟೀಕೆ ಮಾಡಿದ್ದು, ಭಾರತ ಇದಕ್ಕೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದೆ. ಶಾಂತಿಯನ್ನು ಮೂಡಿಸುವ ಪ್ರತಿಯೊಂದು ಪ್ರಯತ್ನ ಹಗೆತನ ಮತ್ತು ದ್ರೋಹದಿಂದ ಕೂಡಿತ್ತು ಎನ್ನುವ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪಾಕಿಸ್ತಾನ ಇದನ್ನು ದಾರಿತಪ್ಪಿಸುವ ಮತ್ತು ಏಕಪಕ್ಷೀಯ ಹೇಳಿಕೆ ಎಂದು ಕರೆದಿದೆ.

ಪಾಕಿಸ್ತಾನದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಾಂತಿ ಮತ್ತು ಭದ್ರತೆಗೆ ಪಾಕಿಸ್ತಾನವೇ ಅತಿದೊಡ್ಡ ತಡೆಯಾಗಿದೆ. ಪಾಕಿಸ್ತಾನ ಅಕ್ರಮವಾಗಿ ಆಕ್ರಮಣ ಮಾಡಿರುವ ಭಾರತದ ಪ್ರದೇಶವನ್ನು ಖಾಲಿ ಮಾಡುವಂತೆ ಎಚ್ಚರಿಕೆ ಕೊಟ್ಟಿದೆ.

vacate indian territory government blasts pak remarks jk pm podcast

ಪಾಕಿಸ್ತಾನ ಮತ್ತು ಪ್ರಧಾನಿ ಮೋದಿ ಅವರ ಪಾಡ್‌ಕ್ಯಾಸ್ಟ್‌ನ ಟೀಕೆಗಳನ್ನು ಉಲ್ಲೇಖಿಸದೆ ಮಾತನಾಡಿದ ಜೈಸ್ವಾಲ್, ಭಾರತದ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪಾಕಿಸ್ತಾನ ಮತ್ತೊಮ್ಮೆ ಕೆಲವು ಹೇಳಿಕೆಗಳನ್ನು ನೀಡಿದೆ ಎನ್ನುವುದು ಗಮನಕ್ಕೆ ಬಂದಿದೆ. ಪಾಕಿಸ್ತಾನ ಗಡಿಯಾಚೆ ಭಯೋತ್ಪಾದನೆಗೆ ಸತತವಾಗಿ ಉತ್ತೇಜನ ಕೊಡುತ್ತಿದೆ ಎನ್ನುವುದು ಜಗತ್ತಿಗೆ ತಿಳಿದ ವಿಚಾರವಾಗಿದೆ. ಇದರಿಂದಲೇ ಈ ಭಾಗದಲ್ಲಿ ಶಾಂತಿ ಮತ್ತು ಭದ್ರತೆಗೆ ಸಮಸ್ಯೆಯಾಗಿದೆ. ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿರುವ ಭಾರತದ ಭೂಭಾಗವನ್ನು ಮೊದಲು ಖಾಲಿ ಮಾಡಲಿ ಎಂದು ಹೇಳಿದರು.

ಭಾರತಕ್ಕೆ ಭೇಟಿ ನೀಡಿದ ಅಮೆರಿಕದ ರಾಷ್ಟ್ರಿಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಎಎನ್‌ಐಗೆ ನೀಡಿದ ಸಂದರ್ಶನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಪ್ರಾಯೋಜಿತ ದಾಳಿ ಬಗ್ಗೆ ಮಾತನಾಡಿ ಇಸ್ಲಾಮಿಕ್ ಭಯೋತ್ಪಾದನೆ ಎಂದು ಉಲ್ಲೇಖಿಸಿದ್ದು, ಜೈಸ್ವಾಲ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಇಸ್ಲಾಮಿ ಭಯೋತ್ಪಾದನೆ ಭಾರತ ಮತ್ತು ಅಮೆರಿಕ ಹಾಗೂ ಮಧ್ಯಪ್ರಾಚ್ಯದ ಹಲವಾರು ದೇಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ತುಳಸಿ ಗಬ್ಬಾರ್ಡ್ ಹೇಳಿದ್ದರು.

ಪ್ರಧಾನಿ ಮೋದಿ ಹೇಳಿದ್ದೇನು?

ಸೋಮವಾರ ಪ್ರಧಾನಿ ನರೇಂದ್ರ ಮೋದಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿ ಮಾಡಿದ್ದರು. ಭಾರತ ಮತ್ತು ಅಮೆರಿಕ ಭಯೋತ್ಪಾದನೆಯನ್ನು ಎದುರಿಸಲು ಮತ್ತು ಕಡಲ ಮತ್ತು ಸೈಬರ್ ಭದ್ರತಾ ಸಹಕಾರವನ್ನು ಹೆಚ್ಚಿಸಲು ಬದ್ದವಾಗಿವೆ ಎಂದು ಹೇಳಿದರು.

ಮೋದಿ ಹೇಳಿಕೆಗೆ ಪಾಕಿಸ್ತಾನದ ವಿದೇಶಾಂಗ ಕಚೇರಿ ಸೋಮವಾರ ಪ್ರತಿಕ್ರಿಯೆ ನೀಡಿದ್ದು, ಭಾರತದ ಶಾಂತಿ ಪ್ರಯತ್ನಗಳನ್ನು ಪಾಕಿಸ್ತಾನ ವಿಫಲಗೊಳಿಸುತ್ತಿದೆ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಗಳು ದಾರಿತಪ್ಪಿಸುವ ಮತ್ತು ಏಕಪಕ್ಷೀಯವಾಗಿದೆ ಎಂದಿದೆ. ಭಾರತವು ವಿದೇಶಿ ಪ್ರದೇಶಗಳಲ್ಲಿ ಗುರಿಯಾಗಿಟ್ಟುಕೊಂಡ ಹತ್ಯೆಗಳು, ವಿಧ್ವಂಸಕ ಕೃತ್ಯಗಳು ಮತ್ತು ಭಯೋತ್ಪಾದನೆಯನ್ನು ಆಯೋಜಿಸುತ್ತಿದೆ ಎಂದು ಅದು ಆರೋಪಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+