ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು 3 ತಿಂಗಳ ಬಳಿಕ ಲಸಿಕೆ: ಕೇಂದ್ರ

ನವದೆಹಲಿ, ಮೇ 19: ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಬಳಿಕ ಯಾರಿಗೆ ಕೊರೊನಾ ಸೋಂಕು ತಗುಲಿದೆಯೋ ಅವರು ಲಸಿಕೆಯ ಎರಡನೇ ಡೋಸ್‌ಗಾಗಿ 3 ತಿಂಗಳು ಕಾಯಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದಕ್ಕೆ ಆರೋಗ್ಯ ಸಚಿವಾಲಯವು ಒಪ್ಪಿಗೆ ನೀಡಿದೆ, ಹೊಸ ನಿಯಮವು ಕೊರೊನಾ ಸೋಂಕಿನಿಂದ ಗುಣಮುಖರಾದ ಮೂರು ತಿಂಗಳ ಬಳಿಕ ಕೊರೊನಾ ಲಸಿಕೆಯನ್ನು ಪಡೆಯಬಹುದು ಎಂದು ಹೇಳಿದೆ.

ಸಾಮಾನ್ಯವಾಗಿ ಮೊದಲ ಕೊರೊನಾ ಲಸಿಕೆ ಪಡೆದು 45 ದಿನಗಳ ಬಳಿಕ ಎರಡನೇ ಲಸಿಕೆಯನ್ನು ಪಡೆಯಬೇಕು ಆದರೆ ಹೊಸ ನಿಯಮದ ಅನುಸಾರ ಒಂದೊಮ್ಮೆ ಮೊದಲ ಲಸಿಕೆ ಪಡೆದ ಬಳಿಕ ಸೋಂಕು ತಗುಲಿದರೆ ಕನಿಷ್ಠ 3 ತಿಂಗಳ ಬಳಿಕ ಲಸಿಕೆಯನ್ನು ಪಡೆಯಬೇಕು.

Vaccination 3 Months After Covid Recovery, Says Government

ದೇಶದಲ್ಲಿ ಒಂದೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,67,334 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,89,851 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಭಾರತದಲ್ಲಿ ಒಟ್ಟು 2,54,96,330 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,19,86,363 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 2,83,248 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 32,26,719 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 64,60,624 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 96,73,302 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,58,820 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ.

1,45,65,255 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,29,693 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,80,37,874 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 93,49,575 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,48,13,626 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,79,77,749 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+