50 ವರ್ಷ ಮೇಲ್ಪಟ್ಟವರ ಲಸಿಕೆ ಸರದಿ; ಸರ್ಕಾರದಿಂದ ಸಕಲ ಸಿದ್ಧತೆ

ನವದೆಹಲಿ, ಮಾರ್ಚ್ 11: ಇನ್ನು ಕೆಲವೇ ದಿನಗಳಲ್ಲಿ, 50 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆಗಳನ್ನು ನೀಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ತಿಳಿದುಬಂದಿದೆ.

ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ ಆರಂಭಗೊಂಡಿದ್ದು, ಆದ್ಯತೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ತಿಳಿಸಿದೆ. ಕೊರೊನಾ ಲಸಿಕೆ ಸಂಬಂಧಿ ರಾಷ್ಟ್ರೀಯ ತಜ್ಞರ ತಂಡ (NEGVAC)ದ ಸಲಹೆಯಂತೆ ಲಸಿಕೆ ನೀಡುವುದಾಗಿ ತಿಳಿದುಬಂದಿದೆ.

ಜನವರಿ 16ರಿಂದ ಭಾರತದಾದ್ಯಂತ ಕೊರೊನಾ ಲಸಿಕಾ ಅಭಿಯಾನ ಆರಂಭವಾಗಿದ್ದು, ಮೊದಲ ಹಂತದಲ್ಲಿ 30 ಮಿಲಿಯನ್ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರಿಗೆ ಲಸಿಕೆ ನೀಡಲಾಗಿತ್ತು.

 Vaccination For Those Above 50 Years To Start In Next Phase In India

ಎರಡನೇ ಹಂತದಲ್ಲಿ ಆದ್ಯತಾ ಗುಂಪುಗಳಾಗಿ ವಿಭಾಗಿಸಲಾಗಿತ್ತು. ಮೊದಲು 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 45-59 ವಯಸ್ಸಿನವರಿಗೆ ಲಸಿಕೆಯನ್ನು ಆದ್ಯತೆಯಲ್ಲಿ ನೀಡಲಾಗುತ್ತಿತ್ತು. ಇದೀಗ ಮುಂದಿನ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆರಂಭಿಸುವುದಾಗಿ ತಿಳಿದುಬಂದಿದೆ.

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದ್ದು, 10 ದಿನದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ 9,29,359 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಇದರ ಜೊತೆಗೆ 45 ವರ್ಷಕ್ಕಿಂತ ಮೇಲ್ಪಟ್ಟ 55,99,143 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

1.3 ಬಿಲಿಯನ್ ಜನಸಂಖ್ಯೆಗೆ ಏಕಕಾಲದಲ್ಲಿ ಲಸಿಕೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ಆದ್ಯತಾ ಗುಂಪುಗಳೆಂದು ವಿಭಾಗಿಸಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರ್ಕಾರ ಪ್ರಸ್ತುತ ದಿನಕ್ಕೆ ಐದು ಮಿಲಿಯನ್ ಮಂದಿಗೆ ಲಸಿಕೆ ನೀಡುವ ಯೋಜನೆ ಹಾಕಿಕೊಂಡಿರುವುದಾಗಿ ಕೊರೊನಾ ಸಂಬಂಧಿತ ರಾಷ್ಟ್ರೀಯ ಕಾರ್ಯಪಡೆ ಸದಸ್ಯ ಡಾ. ಎನ್‌.ಕೆ. ಅರೋರಾ ತಿಳಿಸಿದ್ದಾರೆ. ಲಸಿಕಾ ಕೇಂದ್ರಗಳ ಸಂಖ್ಯೆಯನ್ನೂ ದೇಶಾದ್ಯಂತ 50,000 ರಿಂದ 1,00,000ಕ್ಕೆ ಏರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಲಸಿಕಾ ಕಾರ್ಯಕ್ರಮಕ್ಕೆ ಖಾಸಗಿ ಆರೋಗ್ಯ ಕೇಂದ್ರಗಳನ್ನು ಬಳಸಿಕೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಮಂಗಳವಾರ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+