ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪೋಲೋ ಆಸ್ಪತ್ರೆಯಲ್ಲಿ ಪಡೆಯುವ ಸ್ಪುಟ್ನಿಕ್-ವಿ ಲಸಿಕೆಗೆ ಎಷ್ಟು ಬೆಲೆ?

|
Google Oneindia Kannada News

ಬೆಂಗಳೂರು, ಮೇ 27: ಭಾರತದಲ್ಲಿ ಅನುಮೋದನೆ ಪಡೆದಿರುವ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆಯನ್ನು ಜೂನ್ ಎರಡನೇ ವಾರದಿಂದ ಅಪೋಲೋ ಗ್ರೂಪ್ ಆಫ್ ಹಾಸ್ಪಿಟಲ್ ಕೇಂದ್ರಗಳಲ್ಲಿ ವಿತರಿಸುವುದಾಗಿ ಸಂಸ್ಥೆಯು ಘೋಷಿಸಿದೆ.

ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆಗೆ ಬೆಲೆಯನ್ನು ನಿಗದಿಗೊಳಿಸಲಾಗಿದೆ. ಒಂದು ಡೋಸ್ ಲಸಿಕೆಗೆ 1,195 ರೂಪಾಯಿ ತೆಗೆದುಕೊಳ್ಳಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಕರ್ನಾಟಕಕ್ಕೆ ಸ್ಪುಟ್ನಿಕ್ ಲಸಿಕೆ ಪೂರೈಕೆಗೆ 2 ಕಂಪನಿಗಳ ಟೆಂಡರ್ಕರ್ನಾಟಕಕ್ಕೆ ಸ್ಪುಟ್ನಿಕ್ ಲಸಿಕೆ ಪೂರೈಕೆಗೆ 2 ಕಂಪನಿಗಳ ಟೆಂಡರ್

ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ನೀಡುತ್ತಿರುವ ಸ್ಪುಟ್ನಿಕ್-ವಿ ಲಸಿಕೆಗೆ 995 ರೂಪಾಯಿ ಹಾಗೂ ಲಸಿಕೆ ವಿತರಣೆಗೆ 200 ರೂಪಾಯಿ ಸೇವಾ ಶುಲ್ಕ ವಿಧಿಸಲಾಗುತ್ತದೆ. ಒಂದು ಡೋಸ್ ಲಸಿಕೆಗೆ ಒಟ್ಟು 1,195 ರೂಪಾಯಿ ತೆಗೆದುಕೊಳ್ಳಲಾಗುತ್ತದೆ ಎಂದು ಅಪೋಲೋ ಗ್ರೂಪ್ ಆಫ್ ಹಾಸ್ಪಿಟಲ್ ಸ್ಪಷ್ಟಪಡಿಸಿದೆ.

ಕೊರೊನಾದಿಂದ ರಕ್ಷಿಸಿಕೊಳ್ಳಲು ಲಸಿಕೆ ಅತ್ಯಗತ್ಯ

ಕೊರೊನಾದಿಂದ ರಕ್ಷಿಸಿಕೊಳ್ಳಲು ಲಸಿಕೆ ಅತ್ಯಗತ್ಯ

"ದೇಶದಲ್ಲಿ ಅನುಮೋದನೆ ಪಡೆದಿರುವ ಕೊರೊನಾವೈರಸ್ ಸೋಂಕಿನ ಮೂರನೇ ಲಸಿಕೆಯ ವಿತರಣೆ ಪ್ರಕ್ರಿಯೆ ಜೂನ್ ಎರಡನೇ ವಾರದಿಂದ ಆರಂಭವಾಗಲಿದೆ. ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವ ಮೊದಲು ಯಾರೊಬ್ಬರೂ ಸುರಕ್ಷಿತರು ಎಂದು ನಂಬುವುದಕ್ಕೆ ಸಾಧ್ಯವಿಲ್ಲ" ಎಂದು ಅಪೋಲೋ ಗ್ರೂಪ್ ಆಫ್ ಹಾಸ್ಪಿಟಲ್ ನ ಎಕ್ಸಿಕ್ಯೂಟಿವ್ ವೈಸ್-ಚೇರ್ ಮನ್ ಶೋಭನಾ ಕಾಮಿನೇನಿ ತಿಳಿಸಿದ್ದಾರೆ.

80 ಅಪೋಲೋ ಆಸ್ಪತ್ರೆ ಶಾಖೆಗಳಲ್ಲಿ ಕೊರೊನಾ ಲಸಿಕೆ

80 ಅಪೋಲೋ ಆಸ್ಪತ್ರೆ ಶಾಖೆಗಳಲ್ಲಿ ಕೊರೊನಾ ಲಸಿಕೆ

ಭಾರತದಾದ್ಯಂತ ಅಪೋಲೋ ಆಸ್ಪತ್ರೆಯ 80 ಕೇಂದ್ರಗಳಲ್ಲಿ 10 ಲಕ್ಷ ಜನರಿಗೆ ಸ್ಪುಟ್ನಿಕ್-ವಿ ಲಸಿಕೆಯನ್ನು ವಿತರಿಸುವ ಗುರಿ ಹೊಂದಲಾಗಿದೆ. ಮೊದಲ ಶ್ರೇಣಿ ಕಾರ್ಮಿಕರು, ಕಾರ್ಪೋರೇಟ್ ಉದ್ಯೋಗಿಗಳು ಮತ್ತು ಆದ್ಯತೆ ವಲಯವನ್ನು ಗುರುತಿಸಿ ಲಸಿಕೆ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

2 ಕೋಟಿ ಮಂದಿಗೆ ಸ್ಪುಟ್ನಿಕ್-ವಿ ಲಸಿಕೆ ವಿತರಣೆಯ ಗುರಿ

2 ಕೋಟಿ ಮಂದಿಗೆ ಸ್ಪುಟ್ನಿಕ್-ವಿ ಲಸಿಕೆ ವಿತರಣೆಯ ಗುರಿ

ಖಾಸಗಿ ವಲಯದ ಬೃಹತ್ ಲಸಿಕೆ ವಿತರಣಾ ಸಂಸ್ಥೆಯು ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೊತೆಗೆ ಕೈ ಜೋಡಿಸುವುದಾಗಿ ತಿಳಿಸಿದೆ. ಮೊದಲ 10 ಲಕ್ಷ ಜನರಿಗೆ ಲಸಿಕೆ ನೀಡುವುದಕ್ಕೆ 3 ವಾರಗಳನ್ನು ತೆಗೆದುಕೊಳ್ಳಲಾಗುವುದು. ಜೂನ್ ತಿಂಗಳಿನಲ್ಲಿ ಪ್ರತಿವಾರ 10 ಲಕ್ಷ ಜನರಿಗೆ ಲಸಿಕೆ ನೀಡಲಾಗುವುದು. ಜುಲೈ ವೇಳೆಗೆ ಈ ಸಂಖ್ಯೆಯನ್ನು ಇಮ್ಮಡಿಕೊಳಿಸಲಾಗುವುದು. ಸಪ್ಟೆಂಬರ್ ತಿಂಗಳ ವೇಳೆಗೆ 2 ಕೋಟಿ ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಅಪೋಲೋ ಗ್ರೂಪ್ ಆಫ್ ಹಾಸ್ಪಿಟಲ್ ನ ಎಕ್ಸಿಕ್ಯೂಟಿವ್ ವೈಸ್-ಚೇರ್ ಮನ್ ಶೋಭನಾ ಕಾಮಿನೇನಿ ತಿಳಿಸಿದ್ದಾರೆ.

Recommended Video

ಬೆಡ್ ರೂಮಿನ ಅಸಲಿ ಕಹಾನಿ ಬಿಚ್ಚಿಟ್ಟ Ramesh jarakiholi! | Oneindia Kannada
ಭಾರತದಲ್ಲಿ ಅನುಮೋದನೆ ಪಡೆದಿರುವ ಲಸಿಕೆಗಳು

ಭಾರತದಲ್ಲಿ ಅನುಮೋದನೆ ಪಡೆದಿರುವ ಲಸಿಕೆಗಳು

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಹೈದ್ರಾಬಾದಿನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

English summary
Vaccine Rate: How Much Money We Have To Pay For Sputnik V Vaccine In Apollo Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X