ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕಂಡುಬಂದಿರುವ ಕೊರೊನಾ ತಳಿ ಮೇಲೆ ಲಸಿಕೆ ಪ್ರಭಾವ ಬೀರಲಿದೆ: ಫೈಜರ್

|
Google Oneindia Kannada News

ನವದೆಹಲಿ, ಮೇ 27: ಭಾರತದಲ್ಲಿ ಕಂಡುಬಂದಿರುವ ಕೊರೊನಾ ತಳಿ ಮೇಲೆ ಲಸಿಕೆ ಪರಿಣಾಮ ಬೀರಲಿದೆ ಎಂದು ಫೈಜರ್ ಸಂಸ್ಥೆ ಹೇಳಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿದೆ ಹಾಗೆಯೇ ಅತಿ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಫೈಜರ್‌ನ ಕೊರೊನಾ ಲಸಿಕೆ ಭಾರತದಲ್ಲಿ ಕಂಡುಬಂದಿರುವ ಕೊರೊನಾ ತಳಿ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದೆ.

ತಾವು ತಯಾರಿಸಿರುವ ಕೋವಿಡ್ ಲಸಿಕೆಯು ಭಾರತದಲ್ಲಿ ರೂಪಾಂತರಗೊಂಡಿರುವ ಸೋಂಕಿಗೆ ಪರಿಣಾಮಕಾರಿಯಾಗಬಲ್ಲದು, ಅಲ್ಲದೇ 12 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಪ್ರಾಯದವರಿಗೆ ಈ ಲಸಿಕೆಯನ್ನು ನೀಡಬಹುದಾಗಿದೆ. ಈ ಲಸಿಕೆಯನ್ನು ನೀಡಬಹುದಾಗಿದೆ. ಎರಡರಿಂದ ಎಂಟು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಇದನ್ನು ತಿಂಗಳುಗಳ ಕಾಲ ಸಂಗ್ರಹಿಸಿಡಬಹುದಾಗಿದೆ ಎಂದು ಫೈಜರ್ ಹೇಳಿದೆ.

Vaccine Works On Strain Found In India, Says Pfizer, Insists On Indemnity

ಭಾರತವು ಪ್ರಸ್ತುತ ಮುಖ್ಯವಾಗಿ ಎರಡು ದೇಶೀಯ ನಿರ್ಮಿತ ಲಸಿಕೆಗಳನ್ನು ಬಳಸುತ್ತಿದೆ, ಸೀರಂ ಇನ್‌ಸ್ಟಿಟ್ಯೂಟ್ ತಯಾರಿಸಿದ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ತಯಾರಿಸಿರುವ ಕೋವ್ಯಾಕ್ಸಿನ್ ದೇಶದಲ್ಲಿ ನೀಡಲಾಗುತ್ತಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ದೇಶದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ.

ಸರ್ಕಾರ ಮತ್ತು ಫೈಜರ್ ಸಂಸ್ಥೆಯ ಅಧಿಕಾರಿಗಳ ನಡುವೆ ಸರಣಿ ಮಾತುಕತೆ ನಡೆಯುತ್ತಿದೆ, ಜುಲೈ ಮತ್ತು ಅಕ್ಟೋಬರ್ ಒಳಗೆ ಐದು ಕೋಟಿ ಡೋಸ್ ಲಸಿಕೆ ನೀಡಲು ಫೈಜರ್ ಮುಂದಾಗಿದೆ ಎನ್ನಲಾಗಿದೆ.

ಭಾರತದಲ್ಲಿ ಕೊರೊನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,11,298 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,847 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 3,15,235ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,19,907ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,83,135 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,46,33,951ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 21,57,857 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 33,69,69,352 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
Pfizer has told the government its Covid vaccine shows "high effectiveness" against the India-dominant variant of the virus experts believe is behind the devastating second wave of infections and deaths in the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X