ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ ಕೋವಿಡ್ ಸಾವುಗಳ ಪ್ರಮಾಣದಲ್ಲಿ ಏರಿಕೆ, ಲಸಿಕೆಗಳು ಇಳಿಕೆ: ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ, ಮೇ 19: ದೇಶದಲ್ಲಿ ಕೊರೊನಾ ಸೋಂಕಿತರ ಸಾವು ಅಧಿಕವಾಗುತ್ತಿದ್ದು, ಲಸಿಕೆಗಳ ಲಭ್ಯತೆ ಕಡಿಮೆಯಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಲಸಿಕೆಗಳ ಕೊರತೆ ಮತ್ತು ಕೊರೊನಾ ವೈರಸ್‌ನಿಂದಾಗಿ ದೈನಂದಿನ ಸಾವಿನ ಸಂಖ್ಯೆಯಲ್ಲಿನ ಹೆಚ್ಚಳವನ್ನು ತೋರಿಸುವ ಗ್ರಾಫ್‌ಗಳನ್ನು ಸಹ ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಭೀತಿ: ಒಂದೇ ದಿನ 4529 ಕೊರೊನಾ ರೋಗಿಗಳು ಸಾವು! ಭಾರತದಲ್ಲಿ ಭೀತಿ: ಒಂದೇ ದಿನ 4529 ಕೊರೊನಾ ರೋಗಿಗಳು ಸಾವು!

ದೇಶದಲ್ಲಿ ಕೋವಿಡ್-19 ನಿಂದ ಸಾವುಗಳು ಹೆಚ್ಚಾಗುತ್ತಿದ್ದರೆ, ಲಸಿಕೆಗಳು ಕಡಿಮೆಯಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಮಾತ್ರ ಜನರ ಗಮನ ಬೇರೆಡೆಗೆ ತಿರುಗಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

Vaccines Decreasing And Deaths Due To Covid Increasing: Rahul Gandhi

ಒಂದೇ ದಿನದಲ್ಲಿ ಕೊರೊನಾ ವೈರಸ್‌ನಿಂದಾಗಿ ದೇಶದಲ್ಲಿ 4,529 ಸಾವುಗಳು ವರದಿಯಾಗಿವೆ, ಇದರೊಂದಿಗೆ ಕೊರೊನಾ ಸಾವಿನ ಸಂಖ್ಯೆ 2,83,248 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 2.67 ಲಕ್ಷ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಮಂಗಳವಾರ 2,67,334 ಹೊಸ ಪಾಸಿಟಿವ್ ಪ್ರಕರಣಗಳೊಂದಿಗೆ, ಭಾರತದ ಒಟ್ಟು ಪ್ರಕರಣಗಳ ಸಂಖ್ಯೆ 2,54,96,330 ಕ್ಕೆ ಏರಿದೆ.

ಲಸಿಕೆಗಳು ಕಡಿಮೆಯಾಗುತ್ತಿವೆ ಮತ್ತು ಕೋವಿಡ್ ಸಾವುಗಳು ಹೆಚ್ಚುತ್ತಿವೆ. ಕೇಂದ್ರ ಸರ್ಕಾರದ ನೀತಿ - ಗಮನವನ್ನು ಬೇರೆಡೆಗೆ ತಿರುಗಿಸಿ, ಸುಳ್ಳು ಹರಡಿ, ಸತ್ಯವನ್ನು ಮರೆಮಾಚುತ್ತಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ಒಂದೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,67,334 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,89,851 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಭಾರತದಲ್ಲಿ ಒಟ್ಟು 2,54,96,330 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,19,86,363 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,83,248 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 32,26,719 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

English summary
Congress leader Rahul Gandhi on Wednesday accused the Centre of diverting attention and said while deaths due to COVID-19 are increasing the vaccines are reducing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X