Heavy Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಮಳೆ, ಭೂಕುಸಿತ: 31 ಜನ ಸಾವು - ವೈರಲ್ ವಿಡಿಯೋ!
Vaishno Devi Yatra: ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಭಾರೀ ಅನಾಹುತವೇ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗದಲ್ಲಿ ಭೂಕುಸಿತ ಸಂಭವಿಸಿದೆ. ಬುಧವಾರ ಜಮ್ಮು ಮತ್ತು ಕಾಶ್ಮೀರ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದರಿಂದ ಕನಿಷ್ಠ 31 ಜನರು ಸಾವನ್ನಪ್ಪಿದ್ದು, 23 ಜನರು ಗಾಯಗೊಂಡಿದ್ದಾರೆ. ಹೆಚ್ಚಿನ ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಹೀಗಾಗಿ, ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತ ಪ್ರಕರಣ ಇದಾಗಿದೆ.
ಜಮ್ಮು ಮತ್ತು ಕಾಶ್ಮೀರದಾದ್ಯಂತ ನಿರಂತರ ಮಳೆ ಆಗುತ್ತಿದ್ದು ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ. ಸಾವಿರಾರು ಜನ ಸೂರು ಕಳೆದುಕೊಂಡಿದ್ದು ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಇಲ್ಲಿನ ಜನ ಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಜಮ್ಮುವಿನಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಸೇತುವೆಗಳು ಕುಸಿದು ಬಿದ್ದಿದ್ದು, ವಿದ್ಯುತ್ ತಂತಿಗಳು ಮತ್ತು ಮೊಬೈಲ್ ಟವರ್‌ಗಳು ತೀವ್ರವಾಗಿ ಹಾನಿಗೊಳಗಾಗಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವೇ ಗಂಟೆಗಳಲ್ಲಿ 22 ಸೆಂ.ಮೀ ಮಳೆಯಾಗಿದೆ. ಮಧ್ಯ ರಾತ್ರಿಯವರೆಗೆ ಮಳೆ ಆರ್ಭಟ ಮುಂದುವರಿದಿದೆ. ಮಂಗಳವಾರ ಮಧ್ಯಾಹ್ನ ದೇವಾಲಯ ಮಾರ್ಗದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದೆ. ಇದರಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದರು. ಪರ್ವತದ ಇಳಿಜಾರಿನ ಪ್ರಬಲ ಕುಸಿತದಿಂದ ಈ ಮಾರ್ಗದಲ್ಲಿ ಭಾರೀ ಹಾನಿಯುಂಟಾಗಿದೆ. ಭಾರೀ ದುರಂತ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ತ್ರಿಕೂಟ ಬೆಟ್ಟದಲ್ಲಿರುವ ದೇವಾಲಯಕ್ಕೆ ಹೋಗುವ ಮಾರ್ಗವು ಸಂಪೂರ್ಣ ಹಾಳಾಗಿದೆ.
ಸಾವಿರಾರು ಮನೆಗಳಿಗೆ ಹಾನಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. ನಿರಂತರ ಭಾರೀ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಪ್ರವಾಹ ಎದುರಾಗಿದ್ದು ನೀರಿನ ಮಟ್ಟ ಇಳಿಕೆಯಾಗುತ್ತಿಲ್ಲ. ಅಲ್ಲದೇ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ 3,500 ಕ್ಕೂ ಹೆಚ್ಚು ಜನರನ್ನು ಇಲ್ಲಿಯ ವರೆಗೆ ಸ್ಥಳಾಂತರಿಸಲಾಗಿದೆ. ನೂರಾರು ಜನ ಮನೆಗಳನ್ನು ಕಳೆದುಕೊಂಡಿದ್ದಾರೆ. ಜಿಲ್ಲಾಡಳಿತ, ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಭಾರತೀಯ ಸೇನೆ ಹಾಗೂ ಸ್ಥಳೀಯ ಸ್ವಯಂಸೇವಕರ ಜಂಟಿ ತಂಡಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Jammu and Kashmir Rain Update 🚨
— Mayank (@mayankcdp) August 26, 2025
The exact moment the Tawi bridge collapsed was caught on camera.
Watch Video #jammufloods #JammuAndKashmir pic.twitter.com/eB9Ch8aJCy
ಭಾರೀ ಜಲಾವೃತ ಸಂಕಷ್ಟ: ಇನ್ನು ಜಮ್ಮು ಮತ್ತು ಕಾಶ್ಮೀರದ ಹಲವು ಪ್ರದೇಶಗಳು ಭಾರೀ ಮಳೆಯಿಂದಾಗಿ ಜಲಾವೃತವಾಗಿದ್ದು. ಇಲ್ಲಿನ ಅಂದಾಜು 20ರಿಂದ 30 ಪ್ರದೇಶಗಳು ಹಾನಿಗೊಳಗಾಗಿವೆ. ಹಲವು ತಗ್ಗು ಪ್ರದೇಶಗಳು ಭಾರೀ ಮಳೆಯಿಂದಾಗಿ ಜಲಾವೃತವಾಗಿವೆ.
A Prayer and Call to Action for North India 🙏
— Manmohit Singh (@ManmohitSandhu) August 26, 2025
Currently, several states in North India, including Himachal Pradesh, Punjab, Uttarakhand, and Jammu & Kashmir, are facing devastating floods due to heavy monsoon rains. Hearts and thoughts are with everyone who is affected by this… pic.twitter.com/60ONI1ENxI
ಈ ಭಾಗದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಮತ್ತು ತಾತ್ಕಾಲಿಕ ಆಶ್ರಯ ತಾಣಗಳಲ್ಲಿ ಆಶ್ರಯ ಕಲ್ಪಿಸುವ ಕೆಲಸ ನಡೆದಿದೆ. ಆಹಾರ, ಶುದ್ಧ ನೀರು ಮತ್ತು ವೈದ್ಯಕೀಯ ನೆರವು ನೀಡಲಾಗುತ್ತಿದೆ. ಕೇಂದ್ರಾಡಳಿತ ಪ್ರದೇಶದ ಹಲವು ಪ್ರಮುಖ ನಗರಗಳಲ್ಲಿ ಸಂಪರ್ಕ ಕಡಿತವಾಗಿದೆ. ಲಕ್ಷಾಂತರ ಜನರು ದೂರವಾಣಿ ಹಾಗೂ ಮೊಬೈಲ್ ಸಂಪರ್ಕ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಮ್ಮು ಮತ್ತು ಕಾಶ್ಮೀರದಾದ್ಯಂತ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications