ವಾಜಪೇಯಿ ನಿಧನ: ರೈಲ್ವೇ ಪರೀಕ್ಷೆ ದಿನಾಂಕ ಬದಲಾವಣೆ ಇಲ್ಲ
ನವದೆಹಲಿ, ಆಗಸ್ಟ್ 17: ಇಂದು ನಿಗದಿಯಾಗಿದ್ದ ರೈಲ್ವೇ ರಿಕ್ರ್ಯೂಟ್ ಬೋರ್ಡ್(ಆರ್ ಆರ್ ಬಿ) ಪರೀಕ್ಷೆಗಳ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರತೀಯ ರೈಲ್ವೆ ಖಚಿತಪಡಿಸಿದೆ.
ಅಸಿಸ್ಟಂಟ್ ಲೋಕೋ ಪೈಲಟ್ ಮತ್ತು ಟೆಕ್ನೀಶಿಯನ್ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷೆ ಪ್ರವಾಹ ಪೀಡಿತ ಕೇರಳವೊಂದನ್ನು ಬಿಟ್ಟು ಉಳಿದೆಲ್ಲ ಕಡೆ ನಿಗದಿಯಾದ ದಿನಾಂಕದಂದೇ(ಆಗಸ್ಟ್ 17) ನಡೆಯಲಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಹಲವು ರಾಜ್ಯಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನೂ ಮುಂದೂಡಬಹುದು ಎಂದು ನಿರೀಕ್ಷಿಸಲಾಗಿತ್ತು.

ಪರೀಕ್ಷೆಯನ್ನು ಮುಂದೂಡಲಾಗುತ್ತಿಲ್ಲ ಎಂದು ಈಗಾಗಲೇ ಎಲ್ಲಾ ಪರೀಕ್ಷಾರ್ಥಿಗಳಿಗೂ ಆರ್ ಆರ್ ಬಿ ಎಸ್ ಎಂ ಎಸ್ ಅನ್ನೂ ಕಳಿಸಿದೆ. ಒಟ್ಟು 4.36 ಲಕ್ಷ ಜನ ಈ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ವಾಜಪೇಯಿ ಅವರು ಆಗಸ್ಟ್ 16 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅಸುನೀಗಿದರು. ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ.












Click it and Unblock the Notifications