• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವನತಿ ಶ್ರೀನಿವಾಸನ್ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ

|

ನವದೆಹಲಿ, ಅಕ್ಟೋಬರ್ 28: ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ವನತಿ ಶ್ರೀನಿವಾಸನ್ ಅವರನ್ನು ನೇಮಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬುಧವಾರ ಈ ಆದೇಶ ಹೊರಡಿಸಿದ್ದಾರೆ.

ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವನತಿ ಶ್ರೀನಿವಾಸನ್ ಅವರು ತಮಿಳು ನಾಡಿನ ಬಿಜೆಪಿ ನಾಯಕಿಯಾಗಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ (ಸಂಘಟನೆ) ಅಮಿತವಾ ಚಕ್ರವರ್ತಿ ಅವರನ್ನು ಸಹ ನೇಮಕ ಮಾಡಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳಗಳಲ್ಲಿ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಈ ನೇಮಕಾತಿಗಳನ್ನು ಮಾಡಲಾಗಿದೆ.

ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕವಾದ ವನತಿ ಶ್ರೀನಿವಾಸನ್ ಅವರನ್ನು ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಕೆ. ಅಣ್ಣಾಮಲೈ ಅಭಿನಂದಿಸಿದ್ದಾರೆ. 'ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾದ ವನತಿ ಶ್ರೀನಿವಾಸನ್ ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಇದು ನಮಗೆಲ್ಲ ಉತ್ಸಾಹ ತಂದಿದೆ. ಈ ಹೊಸ ಪಾತ್ರವನ್ನು ಸಹ 'ಅಕ್ಕ' ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂಬ ಖಾತರಿ ನನಗಿದೆ' ಎಂದು ಅವರು ಹೇಳಿದ್ದಾರೆ.

English summary
Vanathi Srinivasan has been appointed as National President of BJP Mahila Morcha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X