ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು?
ಭಾರತದ ಪ್ರತಿಷ್ಠಿತ ಹಾಗೂ ವೇಗದ ರೈಲುಗಳಲ್ಲಿ ಒಂದಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನೀಡಲಾಗುವ ಆಹಾರದ ಗುಣಮಟ್ಟದ ಬಗ್ಗೆ ಮತ್ತೊಮ್ಮೆ ಗಂಭೀರವಾದ ಪ್ರಶ್ನೆಗಳು ಉದ್ಭವಿಸಿವೆ. ರಾಂಚಿ ಮೂಲದ ಆಯುಷಿ ಸಿಂಗ್ ಎಂಬ ಮಹಿಳೆಯೊಬ್ಬರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನೀಡಲಾದ ಆಹಾರವನ್ನು ಸೇವಿಸಿದ ನಂತರ ತಮಗೆ ಮತ್ತು ತಮ್ಮ ಎರಡು ವರ್ಷದ ಚಿಕ್ಕ ಮಗನಿಗೆ ತೀವ್ರವಾದ ಆರೋಗ್ಯ ಸಮಸ್ಯೆಗಳು ಎದುರಾಗಿವೆ ಎಂದು ಆರೋಪಿಸಿದ್ದಾರೆ. ಮಾರ್ಚ್ 27 ರಂದು ವಾರಣಾಸಿ-ದೇವಘರ್ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 22500) ನ E1 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದಾಗ ಈ ಆಘಾತಕಾರಿ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಆಯುಷಿ ಸಿಂಗ್ ಅವರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ತಮ್ಮ ಈ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ರೈಲಿನಲ್ಲಿ ನೀಡಲಾದ ಮಧ್ಯಾಹ್ನದ ಊಟವನ್ನು ಸೇವಿಸಿದ ಸ್ವಲ್ಪ ಸಮಯದ ನಂತರ, ಅವರ ಮುಖ ಊದಿಕೊಳ್ಳಲು ಪ್ರಾರಂಭಿಸಿತು ಮತ್ತು ಚರ್ಮದ ಮೇಲೆ ತೀವ್ರವಾದ ಅಲರ್ಜಿ ಕಾಣಿಸಿಕೊಂಡಿತು. ಇಷ್ಟೇ ಅಲ್ಲದೆ, ಅದೇ ಆಹಾರವನ್ನು ತಿಂದ ಅವರ ಎರಡು ವರ್ಷದ ಮಗನಿಗೆ ತೀವ್ರವಾದ ಅತಿಸಾರ (Diarrhea) ಉಂಟಾಗಿ, ಆತನ ಆರೋಗ್ಯವೂ ಹದಗೆಟ್ಟಿದೆ. ರೈಲಿನಲ್ಲಿ ನೀಡಲಾದ ಕುಡಿಯುವ ನೀರಿನ ರುಚಿ ಕೂಡ ವಿಚಿತ್ರವಾಗಿತ್ತು, ಇದು ರೈಲಿನಲ್ಲಿನ ನೈರ್ಮಲ್ಯ ಹಾಗೂ ಒಟ್ಟಾರೆ ನಿರ್ವಹಣೆಯ ಬಗ್ಗೆ ತೀವ್ರ ಅನುಮಾನ ಮೂಡಿಸಿದೆ ಎಂದು ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಆರೋಪಗಳನ್ನು ಕೇವಲ ಬಾಯಿಮಾತಿಗೆ ಸೀಮಿತಗೊಳಿಸದೆ, ಸಾಬೀತುಪಡಿಸಲು ಆಯುಷಿ ಅವರು ಊದಿಕೊಂಡಿರುವ ತಮ್ಮ ಮುಖದ ಎರಡು ಚಿತ್ರಗಳನ್ನು ಮತ್ತು ಆಸ್ಪತ್ರೆಯ ವೈದ್ಯಕೀಯ ಪ್ರಿಸ್ಕ್ರಿಪ್ಷನ್ ಅನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. "ನಾನು ತಕ್ಷಣ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಈ ಅಲರ್ಜಿಯು ನನ್ನ ಜೀವಕ್ಕೇ ಕುತ್ತು ತರುವ ಅಪಾಯವಿತ್ತು" ಎಂದು ಅವರು ತಮಗಾದ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ರೈಲಿನಲ್ಲಿ ಅತ್ಯಂತ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗಿದೆ ಮತ್ತು ಈ ಬಗ್ಗೆ ದೂರು ನೀಡಿದಾಗ ರೈಲ್ವೆ ಸಿಬ್ಬಂದಿ ಅತ್ಯಂತ ಬೇಜವಾಬ್ದಾರಿಯಿಂದ ಹಾಗೂ ಅಸಡ್ಡೆಯಿಂದ ವರ್ತಿಸಿದ್ದಾರೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
@RailwaySeva @drmljn Kindly look into the matter urgently. I was travelling in Vande Bharat 22500 E1 coach on 27.3.26 and after consuming lunch, I developed a severe allergy which could have been life threatening. My Son (2 yrs) too developed diarrhoea. (Photo attached for ref) pic.twitter.com/KBdyppDq4m
— The_Mediocre_Fille (@AyushiS54377868) March 30, 2026
ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿದೆ. "ಮಾರ್ಚ್ 27 ರಂದು 22500 BSB-DGHR ವಂದೇ ಭಾರತ್ ಎಕ್ಸ್‌ಪ್ರೆಸ್‌ನ E1 ಬೋಗಿಯಲ್ಲಿ ನೀಡಲಾದ ಮಧ್ಯಾಹ್ನದ ಊಟವನ್ನು ಪರಿಶೀಲಿಸಲಾಗಿದೆ ಮತ್ತು ಅದು ಸಂಪೂರ್ಣವಾಗಿ ಗುಣಮಟ್ಟದಾಗಿತ್ತು ಎಂದು ತಿಳಿದುಬಂದಿದೆ. ಆ ದಿನ ಆಹಾರದ ಗುಣಮಟ್ಟ, ನೈರ್ಮಲ್ಯ ಅಥವಾ ಸುರಕ್ಷತೆಯ ಬಗ್ಗೆ ಬೇರೆ ಯಾವುದೇ ಪ್ರಯಾಣಿಕರಿಂದ ನಮಗೆ ದೂರುಗಳು ಬಂದಿಲ್ಲ" ಎಂದು ಐಆರ್‌ಸಿಟಿಸಿ ಸ್ಪಷ್ಟನೆ ನೀಡುವ ಮೂಲಕ ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದೆ.
Lunch on Train No. 22500 BSB-DGHR Vande Bharat Express (Coach E1) on 27.03.2026 was checked & found satisfactory. No other complaints received reg. Quality/Hygiene or safety of food on the day.
— IRCTC (@IRCTCofficial) March 30, 2026
ಆದರೆ, ಐಆರ್‌ಸಿಟಿಸಿಯ ಈ ಹಾರಿಕೆಯ ಪ್ರತಿಕ್ರಿಯೆಗೆ ಆಯುಷಿ ಸಿಂಗ್ ಮತ್ತಷ್ಟು ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಬೇರೆ ಯಾರಿಗೂ ಅನಾರೋಗ್ಯ ಕಾಡದೆ ಇರುವುದು ಒಳ್ಳೆಯ ವಿಚಾರವೇ. ಆದರೆ ನನಗೂ ಹಾಗೂ ನನ್ನ ಪುಟ್ಟ ಮಗನಿಗೆ ಅನಾರೋಗ್ಯ ಉಂಟಾಗಿದೆ ಎಂಬುದು ಸತ್ಯ. ನಮ್ಮ ರೈಲು ಮುಂಜಾನೆ ಇದ್ದಿದ್ದರಿಂದ, ನಾವು ಮನೆಯಲ್ಲಿ ಉಪಹಾರ ಸೇವಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ನಾವು ತಿಂದದ್ದು ವಂದೇ ಭಾರತ್ ರೈಲಿನಲ್ಲಿ ನೀಡಿದ ಊಟ ಮಾತ್ರ. ಬೇರೆ ಯಾರಿಗೂ ತೊಂದರೆಯಾಗಿಲ್ಲ ಎಂಬ ಕಾರಣ ನೀಡಿ, ನಾವು ಅನುಭವಿಸಿದ ಕಷ್ಟವನ್ನು ನಿರ್ಲಕ್ಷಿಸುವುದು ಎಷ್ಟರ ಮಟ್ಟಿಗೆ ಸರಿ?" ಎಂದು ಅವರು ಐಆರ್‌ಸಿಟಿಸಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರೀಮಿಯಂ ರೈಲು ಎಂದು ಕರೆಸಿಕೊಳ್ಳುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರಿಗೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುವ ಭರವಸೆ ನೀಡಲಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ಪದೇ ಪದೇ ವರದಿಯಾಗುತ್ತಿರುವುದು ರೈಲ್ವೆ ಇಲಾಖೆಯ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಯಾಣಿಕರಲ್ಲಿ ಆತಂಕ ಮೂಡಿಸುತ್ತಿವೆ. ಗುಣಮಟ್ಟದ ಆಹಾರ ನೀಡುವುದು ಕೇವಲ ಭರವಸೆಯಾಗದೆ, ಕಾರ್ಯಾಚರಣೆಯಲ್ಲೂ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕಿದೆ. ಈ ಸಮಸ್ಯೆಯನ್ನು ರೈಲ್ವೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ













Click it and Unblock the Notifications