ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ
ಪಾಟ್ನಾ: ಭಾರತೀಯ ರೈಲ್ವೆಯ ಹೆಮ್ಮೆಯ 'ವಂದೇ ಭಾರತ್ ಎಕ್ಸ್ಪ್ರೆಸ್' ರೈಲುಗಳು ಅತ್ಯಾಧುನಿಕ ಸೌಲಭ್ಯ ಹಾಗೂ ವೇಗದ ಪ್ರಯಾಣಕ್ಕೆ ಹೆಸರಾಗಿವೆ. ಆದರೆ, ಇತ್ತೀಚೆಗೆ ಈ ಪ್ರೀಮಿಯಂ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಲಾದ ಊಟದಲ್ಲಿ ತೀವ್ರ ಕಳಪೆ ಗುಣಮಟ್ಟ ಕಂಡುಬಂದಿದ್ದು, ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆಯಾಗಿರುವ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಗಂಭೀರ ಲೋಪವನ್ನು ಎತ್ತಿಹಿಡಿದ ವೈರಲ್ ವಿಡಿಯೋ ಬೆನ್ನಲ್ಲೇ ಎಚ್ಚೆತ್ತ ರೈಲ್ವೆ ಸಚಿವಾಲಯವು, ಐಆರ್ಸಿಟಿಸಿ (IRCTC) ಹಾಗೂ ಆಹಾರ ಪೂರೈಕೆದಾರರ (Vendor) ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಒಟ್ಟಾರೆ 60 ಲಕ್ಷ ರೂಪಾಯಿಗಳ ದಂಡ ವಿಧಿಸುವುದರ ಜೊತೆಗೆ, ವೆಂಡರ್ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಘಟನೆಯ ಹಿನ್ನೆಲೆ ಏನು?
ಮಾರ್ಚ್ 15, 2026 ರಂದು ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 21896) ರೈಲಿನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ರಿತೇಶ್ ಕುಮಾರ್ ಸಿಂಗ್ ಎಂಬ ಪ್ರಯಾಣಿಕರಿಗೆ ರಾತ್ರಿ ಊಟವನ್ನು ನೀಡಲಾಗಿತ್ತು. ಊಟದ ಜೊತೆ ನೀಡಲಾಗಿದ್ದ ಅಮುಲ್ ಮೊಸರಿನ (Curd) ಕಪ್ ಅನ್ನು ತೆರೆದು ನೋಡಿದಾಗ, ಅದರಲ್ಲಿ ಜೀವಂತ ಹುಳುಗಳು ಹರಿದಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸಿದೆ. ತಕ್ಷಣವೇ ರಿತೇಶ್ ಕುಮಾರ್ ಅವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಇದರ ವಿಡಿಯೋ ಚಿತ್ರೀಕರಿಸಿದ್ದಾರೆ. ವಿಡಿಯೋದಲ್ಲಿ ಮೊಸರಿನ ಮೇಲೆ ಹುಳುಗಳು ಚಲಿಸುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ಅವರು ತಕ್ಷಣ ರೈಲಿನ ಮ್ಯಾನೇಜರ್ ಅನ್ನು ಕರೆದು ದೂರು ದಾಖಲಿಸಲು ಮುಂದಾಗಿದ್ದಾರೆ.

'ಹುಳುವಲ್ಲ, ಅದು ಕೇಸರಿ' ಎಂದ ಸಿಬ್ಬಂದಿ
ರಿತೇಶ್ ಕುಮಾರ್ ಅವರು ರೈಲಿನ ಸಿಬ್ಬಂದಿಯನ್ನು ಕರೆದು ಮೊಸರಿನಲ್ಲಿದ್ದ ಹುಳುಗಳನ್ನು ತೋರಿಸಿದಾಗ, ಸಿಬ್ಬಂದಿಯು ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. "ಅದು ಹುಳುವಲ್ಲ, ಅದು ಕೇವಲ ಕೇಸರಿ (Kesar)" ಎಂದು ಸಿಬ್ಬಂದಿ ಸಮರ್ಥಿಸಿಕೊಳ್ಳಲು ಯತ್ನಿಸಿದ್ದಾರೆ. ಸಿಬ್ಬಂದಿಯ ಈ ಅಸಂಬದ್ಧ ಉತ್ತರದಿಂದ ಪ್ರಯಾಣಿಕರು ಮತ್ತಷ್ಟು ಕೆರಳಿದ್ದಾರೆ. ಟಾರ್ಚ್ ಬಿಟ್ಟು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಊಟದ ಟ್ರೇ ಮೇಲೆಯೂ ಹುಳುಗಳು ಹರಿದಾಡುತ್ತಿರುವುದು ಪತ್ತೆಯಾಗಿದೆ. ಈ ವೇಳೆ ಸುತ್ತಮುತ್ತಲಿನ ಇತರ ಪ್ರಯಾಣಿಕರು ಸಹ ಜಮಾಯಿಸಿ, ರೈಲ್ವೆ ಇಲಾಖೆಯ ಕಳಪೆ ಸೇವೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಅಧಿಕಾರಿಗಳಿಂದ ದೂರು ಪುಸ್ತಕ (Complaint Book) ನೀಡುವಂತೆ ಪಟ್ಟು ಹಿಡಿದಿದ್ದಾರೆ. ಪಾಟ್ನಾ ಮೂಲದ ಕಂಟೆಂಟ್ ಕ್ರಿಯೇಟರ್ ಆಗಿರುವ ರಿತೇಶ್ ಕುಮಾರ್ ಅವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಇದು ವೈರಲ್ ಆಗಿದೆ.
Maggots found in curd served in Vande Bharat train. See how the attendant tries to cover it up saying it's kesar not worms😂
— SDutta (@KhelaHobePart2) March 25, 2026
Literally there is no way you can escape amrit kaal. pic.twitter.com/n0JrDZejV9
ರೈಲ್ವೆ ಇಲಾಖೆಯಿಂದ ಕಠಿಣ ಕ್ರಮ
ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ರೈಲ್ವೆ ಇಲಾಖೆ ಹಾಗೂ ಐಆರ್ಸಿಟಿಸಿ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದರು. ದುಬಾರಿ ಹಣ ಕೊಟ್ಟು ಟಿಕೆಟ್ ಖರೀದಿಸಿದರೂ ಇಂತಹ ಕಳಪೆ ಊಟ ನೀಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ರೈಲ್ವೆ ಸಚಿವಾಲಯ ತಕ್ಷಣವೇ ಕಾರ್ಯಪ್ರವೃತ್ತವಾಗಿದೆ.
The complaint regarding food quality raised by a passenger in train number 21896 (Patna - Tatanagar Vande Bharat Express) on 15 March 2026 has been taken seriously. Action taken — IRCTC has been penalised ₹10 lakh, the service provider has been penalised with ₹50 lakh, and…
— Ministry of Railways (@RailMinIndia) March 25, 2026
ಎಕ್ಸ್ ಖಾತೆಯಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯ, "ಮಾರ್ಚ್ 15, 2026 ರಂದು ಪಾಟ್ನಾ-ಟಾಟಾನಗರ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕರು ನೀಡಿದ ಆಹಾರದ ಗುಣಮಟ್ಟದ ದೂರನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಕರ್ತವ್ಯ ಲೋಪಕ್ಕಾಗಿ ಐಆರ್ಸಿಟಿಸಿಗೆ 10 ಲಕ್ಷ ರೂಪಾಯಿ ಹಾಗೂ ಆಹಾರ ಪೂರೈಕೆದಾರ ಏಜೆನ್ಸಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಅಲ್ಲದೆ, ಪೂರೈಕೆದಾರರ ಗುತ್ತಿಗೆಯನ್ನು (Contract) ತಕ್ಷಣವೇ ರದ್ದುಗೊಳಿಸಲು ಆದೇಶಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ" ಎಂದು ಸ್ಪಷ್ಟಪಡಿಸಿದೆ.
ಈ ಕಠಿಣ ಕ್ರಮದ ಮೂಲಕ ರೈಲ್ವೆ ಇಲಾಖೆಯು, ಪ್ರಯಾಣಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುವ ಯಾವುದೇ ಏಜೆನ್ಸಿಯನ್ನು ಸಹಿಸುವುದಿಲ್ಲ ಎಂಬ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದೆ.
-
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್














Click it and Unblock the Notifications