ಜೂನ್ ವೇಳೆಗೆ ಎಲ್ಲಾ ರಾಜ್ಯಗಳಲ್ಲಿ ವಂದೇ ಭಾರತ್ ರೈಲು: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ, ಜೂನ್‌ 3: ಜೂನ್ ವೇಳೆಗೆ ಎಲ್ಲಾ ರಾಜ್ಯಗಳಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ನದೆದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈಲ್ವೆ ಸಚಿವರು, ಮುಂದಿನ ವರ್ಷದ ಮಧ್ಯಭಾಗದಲ್ಲಿ 200 ನಗರಗಳಿಗೆ ವಂದೇ ಭಾರತ್ ರೈಲಿನೊಂದಿಗೆ ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಿದ್ದೇವೆ. ಉತ್ಪಾದನಾ ಕಾರ್ಯವು ತ್ವರಿತ ಗತಿಯಲ್ಲಿ ನಡೆಯುತ್ತಿದೆ ಎಂದು ಹೇಳಿದರು.

Vande Bharat Express train

ಏತನ್ಮಧ್ಯೆ, ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಡಗಾಂವ್ ರೈಲು ನಿಲ್ದಾಣದಿಂದ ಗೋವಾದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದರು. ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದರು. ಆದರೆ ಓಡಿಶಾದಲ್ಲಿ ನಡೆದ ರೈಲು ಅಪಘಾತ ಘಟನೆಯಿಂದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ಮುಂಬೈ - ಗೋವಾ ಮಾರ್ಗದಲ್ಲಿ ಸಂಪರ್ಕವನ್ನು ಸಾಧಿಸುತ್ತದೆ. ಪ್ರದೇಶದ ಜನರಿಗೆ ವೇಗ ಮತ್ತು ಸೌಕರ್ಯದೊಂದಿಗೆ ಪ್ರಯಾಣಿಸಲು ಅವಕಾಶವನ್ನು ಒದಗಿಸುತ್ತದೆ. ಈ ರೈಲು ದೇಶದಲ್ಲಿ ಓಡುತ್ತಿರುವ 19ನೇ ವಂದೇ ಭಾರತ್ ರೈಲು ಆಗಲಿದೆ. ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಫೆಬ್ರವರಿ 15, 2019 ರಂದು ನವದೆಹಲಿ ಕಾನ್ಪುರ-ಅಲಹಾಬಾದ್-ವಾರಣಾಸಿ ಮಾರ್ಗದಲ್ಲಿ ಉದ್ಘಾಟನೆ ಮಾಡಲಾಗಿತ್ತು.

ವಂದೇ ಭಾರತ್ ಎಕ್ಸ್‌ಪ್ರೆಸ್ ಗರಿಷ್ಠ ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸುತ್ತದೆ. ಆಗಸ್ಟ್ 15, 2021 ರಂದು, ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ್ ಮಹೋತ್ಸವದ 75 ವಾರಗಳ ಅವಧಿಯಲ್ಲಿ, 75 ವಂದೇ ಭಾರತ್ ರೈಲುಗಳು ದೇಶದ ಮೂಲೆ ಮೂಲೆಗಳನ್ನು ಸಂಪರ್ಕಿಸುತ್ತವೆ ಎಂದು ಘೋಷಿಸಿದ್ದರು.

2022-23ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂದಿನ ಮೂರು ವರ್ಷಗಳಲ್ಲಿ ನಾನೂರು ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತಯಾರಿಸಲಾಗುವುದು ಎಂದು ಘೋಷಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಡಗಾಂವ್ ರೈಲು ನಿಲ್ದಾಣದಿಂದ ಗೋವಾದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಬೇಕಾಗಿತ್ತು. ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ಮುಂಬೈ - ಗೋವಾ ಮಾರ್ಗದಲ್ಲಿ ಸಂಪರ್ಕವನ್ನು ಸಾಧಿಸುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+