ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 'ವಂದೇ ಭಾರತ್ ಮಿಷನ್' ನಿಯಮಗಳಲ್ಲಿ ಬದಲಾವಣೆ

|
Google Oneindia Kannada News

ನವದೆಹಲಿ, ಆಗಸ್ಟ್.26: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲು ಜಾರಿಗೊಳಿಸಿದ ವಂದೇ ಭಾರತ್ ಮಿಷನ್ ನಿಯಮಗಳನ್ನು ಕೇಂದ್ರ ಸರ್ಕಾರವು ಬದಲಾಯಿಸಿದೆ.

Recommended Video

ಕರ್ನಾಟಕದ ಸೂಪರ್ CM ಇವರೇ ಅಂತೆ..! | Oneindia Kannada

ಏರ್ ಟ್ರಾವೆಲ್ ಬಬಲ್ ವಿಮಾನಗಳ ಸಂಚಾರಿ ನಿಯಮಗಳ ಕುರಿತು ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದು ಜಾರಿಗೊಳಿಸಿದ ಹೊಸ ನಿಯಮಗಳ ಪ್ರಕಾರ, ಭಾರತಕ್ಕೆ ವಾಪಸ್ಸಾಗಲು ಬಯಸುವ ಪ್ರಯಾಣಿಕರೇ ಪ್ರಯಾಣದ ವೆಚ್ಚ ಭರಿಸಬೇಕು.

ವಂದೇ ಭಾರತ್ ಮಿಷನ್: 11 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್!ವಂದೇ ಭಾರತ್ ಮಿಷನ್: 11 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್!

ಪ್ರಯಾಣಿಕರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸಬೇಕು. ಸಚಿವಾಲಯವು ಅರ್ಹ ಪ್ರಯಾಣಿಕರ ಪಟ್ಟಿಯನ್ನು ಕಾಲಕಾಲಕ್ಕೆ ಸರ್ಕಾರದ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸುತ್ತದೆ.

Vande Bharat Mission Rules Changed In India

ಕೊವಿಡ್-19 ನೆಗೆಟಿವ್ ಸಿಬ್ಬಂದಿಗೆ ಅವಕಾಶ:

ಕೊರೊನಾವೈರಸ್ ಸೋಂಕು ತಪಾಸಣೆ ನಂತರದಲ್ಲಿ ನೆಗೆಟಿವ್ ವರದಿ ಪಡೆದ ಸಿಬ್ಬಂದಿಗೆ ಮಾತ್ರ ವಿಮಾನ ನಿರ್ವಹಣೆಗೆ ಅವಕಾಶ ನೀಡಲಾಗುತ್ತದೆ. ಅಂಥ ಸಿಬ್ಬಂದಿಯನ್ನು ಬಳಸಿಕೊಂಡು ವಂದೇ ಭಾರತ್ ಮಿಷನ್ ಕಾರ್ಯಾಚರಣೆ ನಡೆಸಲಾಗುತ್ತದೆ. ಇದರ ಜೊತೆಗೆ ಈ ಹಿಂದೆ ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕೆ ಅನುಸರಿಸಬೇಕಾದ ಕಟ್ಟುನಿಟ್ಟಿನ ಕ್ರಮಗಳು ಮತ್ತು ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಆಗಿರುವುದಿಲ್ಲ ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ.

ಇನ್ನು, ವಂದೇ ಭಾರತ್ ಮಿಷನ್ ಅಡಿಯಲ್ಲಿ ಇದುವರೆಗೂ ವಿದೇಶಗಳಲ್ಲಿ ಕೊರೊನಾವೈರಸ್ ಸೋಂಕಿನ ಭೀತಿಯ ನಡುವೆ ಸಿಲುಕಿಕೊಂಡಿದ್ದ 11,23,000 ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಮಾಹಿತಿ ನೀಡಿದೆ.

English summary
Vande Bharat Mission Rules Changed In India. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X