Vande Bharat Sleeper Train: ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಯಾವಾಗ? ವಿಶೇಷತೆಗಳೇನು?
Vande Bharat Sleeper Train: ಭಾರತೀಯ ರೈಲ್ವೆಯಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ಕ್ರಾಂತಿ ಆಗುತ್ತಿದೆ. ಹಾಗೆಯೇ ಇದೀಗ ಭಾರತದ ಮೊಟ್ಟ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಟ್ರ್ಯಾಕ್‌ಗೆ ಇಳಿಯಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ. ಹಾಗಾದ್ರೆ ಯಾವಾಗ ಹಾಗೂ ಇದು ಯಾವೆಲ್ಲಾ ಮಾರ್ಗಗಳಲ್ಲಿ ಸಂಚಾರ ಮಾಡಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಮುಂದಿನ ತಿಂಗಳು ಸೆಪ್ಟೆಂಬರ್‌ನಲ್ಲಿ ಸಂಚಾರ ಆರಂಭಿಸಲಿದೆ. ಈ ಹೊಸ ಸೆಮಿ ಹೈ-ಸ್ಪೀಡ್ ರೈಲು ದೇಶದಲ್ಲಿ ರೈಲು ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸಲಿದೆ. ಐಸಿಎಫ್ ತಂತ್ರಜ್ಞಾನದೊಂದಿಗೆ ಬಿಇಎಂಎಲ್ ನಿರ್ಮಿಸಿರುವ ಈ ರೈಲು ಅತ್ಯಾಆಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ರಾತ್ರಿ ಪ್ರಯಾಣಗಳನ್ನು ಸುಗಮವಾಗಿಸಲಿದೆ.

ಭಾನುವಾರ ಗುಜರಾತ್‌ನ ಭಾವನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ವಂದೇ ಭಾರತ್ ಸ್ಲೀಪರ್ ರೈಲನ್ನು ಸೆಪ್ಟೆಂಬರ್‌ನಲ್ಲಿ ಪರಿಚಯಿಸಲಾಗುವುದು ಎಂದು ಘೋಷಿಸಿದರು. ಅಲ್ಲದೆ, ನಮೋ ಭಾರತ್, ಅಮೃತ್ ಭಾರತ್, ವಂದೇ ಭಾರತ್ ಮತ್ತು ಮುಂಬರುವ ವಂದೇ ಸ್ಲೀಪರ್‌ನಂತಹ ರೈಲುಗಳು ದೇಶದ ರೈಲು ಸಂಪರ್ಕವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ವಂದೇ ಭಾರತ್ ಸ್ಲೀಪರ್ ರೈಲು ಮಾರ್ಗ: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ಮಾರ್ಗವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಅಂತಿಮ ನಿರ್ಧಾರವನ್ನು ರೈಲ್ವೆ ಮಂಡಳಿ ಕೆಲವೇ ದಿನಗಳಲ್ಲಿ ತಿಳಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಂದೇ ಭಾರತ್ ಸ್ಲೀಪರ್ ಕೋಚ್ ವಿಶೇಷತೆ: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು 16 ಬೋಗಿಗಳನ್ನು ಒಳಗೊಂಡಿದ್ದು, ಇವುಗಳಲ್ಲಿ ಮೂರು ವರ್ಗಗಳಾಗಿ ವಿಂಗಡಣೆ ಮಾಡಲಾಗಿದೆ: ಎಸಿ 1ನೇ ದರ್ಜೆ, ಎಸಿ 2-ಟೈರ್ ಮತ್ತು ಎಸಿ 3-ಟೈರ್ ಎಂದು ವಿಂಗಡಣೆ ಮಾಡಲಾಗಿದೆ. ಈ ರೈಲು ಒಟ್ಟು 1,128 ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿದ್ದು, ಈ ರೈಲನ್ನು ಗಂಟೆಗೆ ಗರಿಷ್ಠ 180 ಕಿಲೋ ಮೀಟರ್ ವೇಗದಲ್ಲಿ ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ.
ವಂದೇ ಭಾರತ್ ಸ್ಲೀಪರ್ ರೈಲು ವಿಶ್ವ ದರ್ಜೆಯ ವೈಶಿಷ್ಟ್ಯಗಳನ್ನು ಹೊಂದಿದ್ದು, ಇದರಲ್ಲಿ ಯುಎಸ್‌ಬಿ ಚಾರ್ಜಿಂಗ್, ಸಾರ್ವಜನಿಕ ಘೋಷಣೆ ಮತ್ತು ದೃಶ್ಯ ಮಾಹಿತಿ ವ್ಯವಸ್ಥೆಗಳು, ಭದ್ರತಾ ಕ್ಯಾಮೆರಾಗಳು, ಮಾಡ್ಯುಲರ್ ಪ್ಯಾಂಟ್ರಿಗಳು, ವಿಕಲಚೇತನ ಪ್ರಯಾಣಿಕರಿಗಾಗಿ ವಿಶೇಷ ಆಸನಗಳು, ಉತ್ತಮ ಶೌಚಾಲಯಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಿದೆ.
ಇನ್ನು ಇದೇ ವೇಳೆ ಅವರು ಮೂರು ಹೊಸ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿದರು. ಭಾವನಗರ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಅವರು ಅಯೋಧ್ಯಾ ಎಕ್ಸ್‌ಪ್ರೆಸ್‌ಗೆ ವರ್ಚುವಲ್ ಆಗಿ ಚಾಲನೆ ನೀಡಿದರು. ಜೊತೆಗೆ ರೇವಾ-ಪುಣೆ ಎಕ್ಸ್‌ಪ್ರೆಸ್ ಮತ್ತು ಜಬಲ್ಪುರ-ರಾಯಪುರ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದರು.
ಮುಂಬೈ-ಅಹಮದಾಬಾದ್ ಬುಲೆಟ್ ರೈಲು: ಮುಂಬೈ-ಅಹಮದಾಬಾದ್ ನಡುವೆ ಮೊದಲ ಬುಲೆಟ್ ರೈಲು ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ. ಇದರಿಂದ ಈ ಎರಡು ನಗರಗಳ ನಡುವಿನ ಪ್ರಯಾಣದ ಕೇವಲ ಎರಡು ಗಂಟೆ ಏಳು ನಿಮಿಷಗಳಿಗೆ ಇಳಿಸಲಾಗುವುದು ಎಂದು ಅಶ್ವಿನಿ ವೈಷ್ಣವ್ ಅವರು ತಿಳಿಸಿದರು.












Click it and Unblock the Notifications