Narendra Modi in Varanasi: ವಾರಣಾಸಿಯಲ್ಲಿಯೇ ಹಿನ್ನಡೆ ಅನುಭವಿಸಿದ ಪ್ರಧಾನಿ ನರೇಂದ್ರ ಮೋದಿ
ಲಕ್ನೋ, ಜೂನ್. 04: ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ನಿರಿಕ್ಷೆಯಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನಿರಾಸೆಯಾಗುತ್ತಿದೆ. ಏಕೆಂದರೆ ಪ್ರಧಾನಿ ಅಭ್ಯರ್ಥಿಯಾಗಿರುವ ನರೇಂದ್ರ ಮೋದಿ ಅವರೆ ಹಿನ್ನಡೆ ಅನುಭವಿಸುತ್ತಿದ್ದಾರೆ. ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಮುನ್ನಡೆ ಸಾಧಿಸಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿದ್ದ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಆರಂಭಿಕ ಹಂತದ ಮತ ಎಣಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಿನ್ನಡೆ ಅನುಭವಿಸಿದ್ದರು. ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಟಫ್ ಪೈಪೋಟಿ ನೀಡುತ್ತಿದ್ದಾರೆ.

ಅಜಯ್ ರೈಗಿಂತ ಕೊಂಡ ಮುನ್ನಡೆ ಪಡೆದ ಪ್ರಧಾನಿ ಮೋದಿ
ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ನ ಅಜಯ್ ರೈಗಿಂತ 436 ಮತಗಳ ಮುನ್ನಡೆ ಹೊಂದಿದ್ದಾರೆ ಎಂದು ಚುನಾವಣಾ ಆಯೋಗವು ಇತ್ತೀಚಿನ ಅಂಕಿಅಂಶಗಳಲ್ಲಿ ತಿಳಿಸಿದೆ.
2019 ರಲ್ಲಿ ವಾರಣಾಸಿಯಲ್ಲಿ ಗೆದ್ದವರು ಯಾರು?
ಪ್ರಧಾನಿ ನರೇಂದ್ರ ಮೋದಿ ಅವರು 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಹಿಂದೂ ನಂಬಿಕೆಯ ಆಧ್ಯಾತ್ಮಿಕ ರಾಜಧಾನಿ ವಾರಣಾಸಿಯಿಂದ ಗೆದ್ದಿದ್ದಾರೆ. ಪ್ರಧಾನ ಮಂತ್ರಿ ಯುಪಿಯಿಂದ ಸಂಸದರಾಗಿ ತಮ್ಮ ಮೂರನೇ ಅವಧಿಗೆ ಚುನಾವಣೆ ಎದುರಿಸುತ್ತಿದ್ದು, ಹ್ಯಾಟ್ರಿಕ್ ಗೆಲುವು ಪಡೆಯುವ ಆಸೆಯಲ್ಲಿದ್ದಾರೆ. ಇದಕ್ಕೂ ಮುನ್ನ, ಕಾಂಗ್ರೆಸ್‌ನ ಅಜಯ್ ರೈ 5,000, 6,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರು.












Click it and Unblock the Notifications