ಲೋಕಸಭಾ ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟ ಕಾಡುಗಳ್ಳ ವೀರಪ್ಪನ್ ಪುತ್ರಿ: ಯಾವ ಪಕ್ಷ, ಯಾವ ಕ್ಷೇತ್ರ ತಿಳಿಯಿರಿ
ಚೆನ್ನೈ, ಮಾರ್ಚ್ 24: ಕಾಡುಗಳ್ಳ, ದಂತಚೋರ, ದರೋಡೆಕೋರ ಮುಂತಾದ ಹೆಸರಿನಿಂದ ಕುಖ್ಯಾತಿ ಪಡೆದಿದ್ದ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ರೆಡಿಯಾಗಿದ್ದಾರೆ.
ಹೌದು, ಕುಖ್ಯಾತ ಶ್ರೀಗಂಧದ ಕಳ್ಳಸಾಗಾಣಿಕೆದಾರ ವೀರಪ್ಪನ್ ಅವರ ಪುತ್ರಿ ವಿದ್ಯಾರಾಣಿ ಏಪ್ರಿಲ್ 19 ರ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷವಾದ ನಾಮ್ ತಮಿಳರ್ ಕಚ್ಚಿ (ಎನ್ ಟಿ ಕೆ) ಪಕ್ಷದ ಅಭ್ಯರ್ಥಿಯಾಗಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ವೃತ್ತಿಯಲ್ಲಿ ವಕೀಲರಾದ ವಿದ್ಯಾರಾಣಿ ಅವರು ಜುಲೈ 2020 ರಲ್ಲಿ ಬಿಜೆಪಿಗೆ ಸೇರಿದರು ಮತ್ತು ಅದರ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡರು ಆದರೆ ಇತ್ತೀಚೆಗೆ ಬಿಜೆಪಿ ಪಕ್ಷವನ್ನು ಎನ್‌ಟಿಕೆಗೆ ಸೇರಿದ್ದಾರೆ.
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಲ್ಲಾ 40 ಅಭ್ಯರ್ಥಿಗಳನ್ನು ಪರಿಚಯಿಸುವ ಮೂಲಕ ಚೆನ್ನೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ "ವಿದ್ಯಾ ರಾಣಿ ಕೃಷ್ಣಗಿರಿಯಿಂದ ಎನ್‌ಟಿಕೆ ಅಭ್ಯರ್ಥಿಯಾಗಲಿದ್ದಾರೆ" ಎಂದು ಘೋಷಿಸಿದರು.
ವೃತ್ತಿಯಲ್ಲಿ ವಕೀಲರಾದ ವಿದ್ಯಾ ರಾಣಿ ಅವರು ಕೃಷ್ಣಗಿರಿಯಲ್ಲಿ ಮಕ್ಕಳ ಶಾಲೆಯನ್ನು ನಡೆಸುತ್ತಿದ್ದಾರೆ ಮತ್ತು ಬೆಂಗಳೂರಿನಲ್ಲಿ ಐದು ವರ್ಷಗಳ ಕಾನೂನು ಕೋರ್ಸ್ ಅನ್ನು ಪಡೆದಿದ್ದು, ಬೆಂಗಳೂರಿನೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದಾರೆ.
ವಿದ್ಯಾರಾಣಿ ಮೂರನೇ ತರಗತಿಯಲ್ಲಿ ಓದುತ್ತಿದ್ದಾಗ ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಗೋಪಿನಾಥಂನಲ್ಲಿರುವ ಅಜ್ಜನ ಮನೆಯಲ್ಲಿ ತಂದೆಯನ್ನು ಭೇಟಿಯಾಗಿದ್ದರು. ತಂದೆಯನ್ನ ಭೇಟಿಯಾಗಿದ್ದು ಅದೇ ಮೊದಲು ಮತ್ತು ಕೊನೆ. ನಾನು 30 ನಿಮಿಷಗಳ ಕಾಲ ಮಾತನಾಡಿದ್ದೇವೆ. ಆ ಸಂಭಾಷಣೆಯು ನನ್ನ ಮನಸ್ಸಿನಲ್ಲಿ ಈಗಲೂ ಹಾಗೇ ಇದೆ. ನನಗೆ ವೈದ್ಯಯಾಗಿ ಜನರಿಗೆ ಸೇವೆ ಸಲ್ಲಿಸುವಂತೆ ಕೇಳಿಕೊಂಡರು. ಇಂದು ನಾನು ಏನಾಗಿದ್ದೇನೋ, ಅದಕ್ಕೆ ಆ ಸಂಭಾಷಣೆಯೇ ಕಾರಣ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.
ಅಕ್ಟೋಬರ್ 18, 2004 ರಂದು ತಮಿಳುನಾಡು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ವೀರಪ್ಪನ್, ಆನೆಗಳನ್ನು ಬೇಟೆಯಾಡುವುದು, ಶ್ರೀಗಂಧದ ಮರವನ್ನು ಕಳ್ಳಸಾಗಣೆ ಮಾಡುವುದು, ಕನ್ನಡ ಹಿರಿಯ ನಟ ರಾಜ್ ಕುಮಾರ್ ಮತ್ತು ಮಾಜಿ ಸಚಿವ ನಾಗಪ್ಪ ಅವರಂತಹ ಉನ್ನತ ವ್ಯಕ್ತಿಗಳನ್ನು ಅಪಹರಿಸುವ ಮೂಲಕ ಕುಖ್ಯಾತಿ ಗಳಿಸಿದ್ದರು.
ವಿದ್ಯಾ ರಾಣಿ ಅವರ ತಾಯಿ ಮುತ್ತುಲಕ್ಷ್ಮಿ, ಶಾಸಕ ಟಿ.ವೇಲ್‌ಮುರುಗನ್ ನೇತೃತ್ವದ 'ತಮಿಳಗ ವಝಿರಿಮೆ ಕಚ್ಚಿ' ಪಕ್ಷದಲ್ಲಿದ್ದಾರೆ. ತಮಿಳುನಾಡು ಹಾಗೂ ಪುದುಚೇರಿಯ ಲೋಕಸಭೆ ಸ್ಥಾನಗಳಿಗೆ ಏಪ್ರಿಲ್ 19ರಂದು ಮತದಾನ ನಡೆಯಲಿದೆ.












Click it and Unblock the Notifications