ವಿಡಿಯೋ: ಆಂಧ್ರದಲ್ಲಿ ವಾಹನ ಪಲ್ಟಿ, ಏಳು ಬಾಕ್ಸ್‌ನಲ್ಲಿ 7 ಕೋಟಿ ಪತ್ತೆ
ಅಮರಾವತಿ, ಮೇ 11: ಆಂಧ್ರ ಪ್ರದೇಶದಲ್ಲಿ ಲಾರಿಯೊಂದು ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದೆ. ಇದನ್ನು ನೋಡಿದ ಅಧಿಕಾರಿಗಳು, ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ವಾಹನದಲ್ಲಿದ್ದ ಬಾಕ್ಸ್‌ಗಳಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿದೆ. ಮೇ 14ರಂದು ಆಂಧ್ರ ಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಮತದಾನ ನಡೆಯಲಿದೆ.
ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಲಾರಿಯೊಂದು ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದ್ದು, ಅದರಲ್ಲಿದ್ದ 7 ಬಾಕ್ಸ್‌ಗಳಲ್ಲಿ 7 ಕೋಟಿ ರೂ. ಹಣ ಪತ್ತೆಯಾಗಿದೆ. ಅಧಿಕಾರಿಗಳು ಹಣವನ್ನು ಎಣಿಕೆ ಮಾಡಲು ಕೂಡಿಸಿ ಇಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅನಂತಪಲ್ಲಿ ಎಂಬಲ್ಲಿ ವಾಹನ ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ವಾಹನದಲ್ಲಿ 7 ಕಾಗದದ ಬಾಕ್ಸ್‌ಗಳು ಪತ್ತೆಯಾಗಿವೆ. ಬಾಕ್ಸ್‌ನಲ್ಲಿ ಹಣ ನೋಡಿದ ಜನರು ಈ ಅಪಘಾತದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತಕ್ಷಣ ಚುನಾವಣಾಧಿಕಾರಿಗಳಿಗೆ ಮಾಹಿತಿ ಕೊಟ್ಟರು.
ವಿಜಯವಾಡದಿಂದ ವಿಖಾಖಪಟ್ಟಣಂಗೆ ವಾಹನ ಸಂಚಾರ ನಡೆಸುತ್ತಿತ್ತು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಲಾರಿ ಗುದ್ದಿ ವಾಹನ ಪಲ್ಟಿಯಾದ ಪರಿಣಾಮ ವಾಹನದ ಚಾಲಕನಿಗೆ ಗಾಯಗಳಾಗಿವೆ. ಆತನನ್ನು ಗೋಪಾಲಪುರಂ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಡಿಯೋ ವೈರಲ್
#WATCH | Andhra Pradesh: Rs 7 Crores cash, kept in seven boxes, seized in East Godavari district.
— ANI (@ANI) May 11, 2024
A vehicle had overturned after being hit by a lorry at Anantapally in Nallajarla Mandal. Locals noticed that 7 cardboard boxes, containing cash, were being transferred in that… pic.twitter.com/KbQmb5M175
ಆಂಧ್ರ ಪ್ರದೇಶದ 175 ವಿಧಾನಸಭಾ ಕ್ಷೇತ್ರ, 25 ಲೋಕಸಭಾ ಕ್ಷೇತ್ರಕ್ಕೆ ಮೇ 13ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಪೊಲೀಸರು ವಾಹನದಲ್ಲಿ ಹಣ ಪತ್ತೆಯಾದ ಬಳಿಕ ಈ ಕುರಿತು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದರು. ಸದ್ಯ ಹಣ ಅಧಿಕಾರಿಗಳ ವಶದಲ್ಲಿದೆ.
ಚಾಲಕನ ಚಿಕಿತ್ಸೆ ಮುಗಿದ ಬಳಿಕ ಪೊಲೀಸರು ವಿಚಾರಣೆ ಆರಂಭಿಸಲಿದ್ದು, ಹಣವನ್ನು ಎಲ್ಲಿಂದ ಸಾಗಾಟ ಮಾಡಲಾಗುತ್ತಿತ್ತು? ಮತ್ತು ಯಾರಿಗೆ ಸೇರಿದ್ದು? ಎಂಬ ವಿವರ ಪಡೆಯಲಿದ್ದಾರೆ.
ಸರ್ಕಾರಕ್ಕೆ ನಿರ್ಬಂಧ: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಹೈಕೋರ್ಟ್ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಮೇ 13ರ ತನಕ ಸರ್ಕಾರದ ಯೋಜನೆಗಳ ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡುವುದಕ್ಕೆ ತಡೆ ನೀಡಿದೆ.
ಆಂಧ್ರ ಪ್ರದೇಶದ ವಿವಿಧ ಯೋಜನೆಗಳ ಫಲಾನುಭವಿ ವಿದ್ಯಾರ್ಥಿಗಳ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಚುನಾವಣೆಗೆ 72 ಗಂಟೆಗಳ ಮೊದಲು ಯಾವುದೇ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶಿಸಿದೆ.
ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಸರ್ಕಾರ ವಿವಿಧ ಯೋಜನೆ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿರುವ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆದಿದ್ದವು. ಇದನ್ನು ತಕ್ಷಣ ನಿಲ್ಲಿಸುವಂತೆ ನಿರ್ದೇಶನ ನೀಡುವಂತೆ ಕೋರಿದ್ದವು.
ಮಂಗಳವಾರ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಚಂದ್ರಬಾಬು ನಾಯ್ಡು ಮತ್ತು ಬಿಜೆಪಿ ಮೈತ್ರಿಕೂಟ ಫಲಾನುಭವಿಗಳ ಖಾತೆಗೆ ಹಣ ಹಾಕುವುದನ್ನು ತಡೆಯಲು ಪ್ರಯತ್ನ ನಡೆಸಲಾಗುತ್ತಿದೆ. ಕೇಂದ್ರ ಸ ಸರ್ಕಾರವನ್ನು ಇದಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದರು.
ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ದು ನೇತೃತ್ವದ ಟಿಡಿಪಿ, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಎದುರಿಸುತ್ತಿವೆ. ಮೂರು ಪಕ್ಷಗಳಿಗೂ ಜಗನ್ ಮೋಹನ್ ರೆಡ್ಡಿ ಎದುರಾಳಿ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications