ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಯಾಣಿಕರ ಸಂಖ್ಯೆ ವಿರಳ: ಬೆಂಗಳೂರು-ಚೆನ್ನೈ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

|
Google Oneindia Kannada News

ಬೆಂಗಳೂರು, ನವೆಂಬರ್ 19:ಬೆಂಗಳೂರು ಹಾಗೂ ಚೆನ್ನೈ ಮಾರ್ಗದ ರೈಲಿನಲ್ಲಿ ಅತಿ ಪ್ರಯಾಣಿಕರ ಸಂಖ್ಯೆ ವಿರಳವಾಗಿದ್ದು ಹೀಗಾಗಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಕೊವಿಡ್-19 ಕಾರಣದಿಂದಾಗಿ ಪ್ರಯಾಣಿಕರು ಕಡಿಮೆಯಾಗಿದ್ದು, ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಯಶವಂತಪುರ-ವಾಸ್ಕೋ ನಡುವೆ ಪ್ರತಿದಿನದ ವಿಶೇಷ ರೈಲುಯಶವಂತಪುರ-ವಾಸ್ಕೋ ನಡುವೆ ಪ್ರತಿದಿನದ ವಿಶೇಷ ರೈಲು

ಅ.23 ರಿಂದ ಪ್ರಾರಂಭವಾದ ರೈಲು ನಂಬರ್ 02027/02028 ಮಂಗಳವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳೂ ಕಾರ್ಯನಿರ್ವಹಿಸುತ್ತಿದ್ದವು. ಆದರೆ ಈಗ ಜನ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಎಕೆ ವರ್ಮಾ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Very Few Passengers Bengaluru To Chennai Train Service stopped

ಸೂಪರ್ ಫಾಸ್ಟ್ ವಿಶೇಷ ರೈಲನ್ನು ನ.21 ರಿಂದ ಸ್ಥಗಿತಗೊಳಿಸಲಾಗುತ್ತಿದೆ. "ಕಳೆದ ಮೂರು-ನಾಲ್ಕು ದಿನಗಳಿಂದ ಕಡಿಮೆ ಜನರು ಸಂಚರಿಸುತ್ತಿದ್ದಾರೆ, ಈ ಕಾರಣದಿಂದಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಎಕೆ ವರ್ಮಾ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಯಶವಂತಪುರ ಮತ್ತು ಗೋವಾದ ವಾಸ್ಕೋ-ಡಾ-ಗಾಮ ನಡುವೆ ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಆರಂಭಿಸಲಾಗಿದೆ. ಕೊಂಕಣ ರೈಲ್ವೆ ಮತ್ತು ನೈಋತ್ಯ ರೈಲ್ವೆ ಸಮನ್ವಯದಲ್ಲಿ ಈ ರೈಲು ಓಡಲಿದೆ.

ಪ್ರತಿದಿನ ಕರ್ನಾಟಕದ ರಾಜಧಾನಿ ಮತ್ತು ಕರಾವಳಿ ಭಾಗವನ್ನು ಸಂಪರ್ಕಿಸಲಿದೆ. ಜನರು ರೈಲಿನ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

Recommended Video

ಭಾರತಕ್ಕೇ ಗಡಿಪಾರು ಮಾಡ್ತಾರಾ!! | Oneindia Kannada

ಯಶವಂತರಪುರ-ವಾಸ್ಕೋ-ಡಾ-ಗಾಮ-ಯಶವಂತಪುರ ನಡುವೆ ಪ್ರತಿದಿನ ರೈಲು ನಂಬರ್ 07339 ಮತ್ತು 07340 ಸಂಚಾರ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರೈಲಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

English summary
One of the most jam-packed rail sections between Bengaluru and Chennai has become unpopular of late, thanks to the Covid pandemic. A Super Fast (SF) special launched between the two cities stands cancelled from November 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X