Mulayam Singh Yadav : ಮುಲಾಯಂ ಸಿಂಗ್ ಯಾದವ್ ಆರೋಗ್ಯದ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ
ಗುರ್‌ಗಾಂವ್, ಅ.03: ಗುರ್‌ಗಾಂವ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗರುವ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷವು ಟ್ವೀಟ್ ಮಾಡಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ನಾಯಕರು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಾಜಕಾರಣಿ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆಯಲು ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮುಲಾಯಂ ಪುತ್ರ ಅಖಿಲೇಶ್ ಯಾದವ್ ಅವರಗೆ ಪ್ರಧಾನಿ ಮೋದಿ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸಾಧ್ಯವಿರುವ ಯಾವುದೇ ನೆರವು ಬೇಕಿದ್ದರೂ, ಅವರು ಸಹಾಯ ಮಾಡಲು ಇದ್ದಾರೆ ಎಂದು ಮೋದಿ ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗು ವರದಿ ಮಾಡಿವೆ.

ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದ ಬಗ್ಗೆ ಕಾಲಕಾಲಕ್ಕೆ ಮಾಹಿತಿಯನ್ನು ನೀಡಲಾಗುವುದು ಎಂದು ಸಮಾಜವಾದಿ ಪಕ್ಷವು ನಂತರ ಟ್ವೀಟ್‌ನಲ್ಲಿ ತಿಳಿಸಿದೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ 82 ವರ್ಷದ ಮುಲಾಯಂ ಸಿಂಗ್ ಅವರು ಆಗಸ್ಟ್ 22 ರಿಂದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಂಕೊಲಾಜಿಸ್ಟ್‌ಗಳಾದ ಡಾ. ನಿತಿನ್ ಸೂದ್ ಮತ್ತು ಡಾ. ಸುಶೀಲ್ ಕಟಾರಿಯಾ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮುಲಾಯಂ ಅವರ ಆಕ್ಸಿಜನ್ ಲೆವೆಲ್ ಸ್ವಲ್ಪ ಕಡಿಮೆಯಾಗಿದೆ. ಆದರೆ, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂದು ಎಸ್‌ಪಿ ನಾಯಕ ರಾಕೇಶ್ ಯಾದವ್ ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, "ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಜಿ ಅವರ ಅನಾರೋಗ್ಯದ ಬಗ್ಗೆ ಮಾಹಿತಿ ಬಂದಿದೆ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ಭಗವಾನ್ ರಾಮನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications