Vice President Election: ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ
Vice President Election: ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿದೆ. ಹಾಗಾದ್ರೆ ಯಾವಾಗ, ಹೇಗೆ ನಡೆಯಲಿದೆ ಹಾಗೂ ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇತ್ತೀಚೆಗಷ್ಟೇ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ತೆರವಾಗಿರುವ ಈ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆ ಆರಂಭಿಸಿದ್ದು, ಈ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕ ಆಗಿದೆ ಎಂದು ತಿಳಿಸಿದೆ.
Election Commission of India announces schedule for the election of Vice President of India
— ANI (@ANI) August 1, 2025
Last date for nominations-August 21, 2025
Date of poll (if necessary)- September 9, 2025 pic.twitter.com/Ct6u3A9KpR
ಇನ್ನೂ ಈ ಚುನಾವಣೆಯಲ್ಲಿ ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಹಾಗೂ ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾವಣೆ ಮಾಡಬಹುದು. ಒಟ್ಟು 788 ಜನ ಮತ ಚಲಾವಣೆ ಮಾಡಬಹುದು.
ಚುನಾವಣೆ, ನಾಮಪತ್ರ ಸಲ್ಲಿಕೆ ದಿನಾಂಗಳು
* ಚುನಾವಣೆ ದಿನಾಂಕ: ಸೆಪ್ಟೆಂಬರ್ 9, 2025
* ನಾಮಪತ್ರ ಸಲ್ಲಿಕೆಗೆ ಕೊನೇ ದಿನ: ಆಗಸ್ಟ್ 21, 2025
ಧನಕರ್ ರಾಜಕೀಯ ಜೀವನ: 74 ವರ್ಷದ ಧನಕರ್ ಅವರು ಅನಾರೋಗ್ಯ ಕಾರಣ ನೀಡಿ ಜುಲೈ 21ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದರು. ಈ ವೇಳೆ ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಎಂದು ತಿಳಿಸಿದ್ದರು.
ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರಾವಧಿ 2027ರ ಆಗಸ್ಟ್ 10ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.
ಜನತಾ ದಳದ ಅಭ್ಯರ್ಥಿಯಾಗಿ 1991ರಲ್ಲಿ ರಾಜಕೀಯ ಜೀವನ ಆರಂಭಸಿದ ಧನಕರ್, ಬಳಿಕ ಕಾಂಗ್ರೆಸ್ ಸೇರ್ಪಡೆಗೊಂಡರು. ನಂತರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಕೆಲಸ ನಿರ್ವಹಿಸುತ್ತಿರುವಾಗಲೇ ಬಿಜೆಪಿ ನಾಯಕತ್ವದ ಗಮನ ಸೆಳೆದ ಅವರು 2019ರಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ನೇಮಕ ಆದರು.
ಇನ್ನು 2022ರಲ್ಲಿ ಉಪರಾಷ್ಟ್ರಪತಿಯಾಗಿ ಆಯ್ಕೆ ಆದರು. ಸರಿ ಸುಮಾರು 2 ವರ್ಷಗಳ ಕಾಲ ಉಪರಾಷ್ಟ್ರಪತಿ ಅವಧಿ ಬಾಕಿ ಇದ್ದರೂ ಧನಕರ್ ಆರೋಗ್ಯದ ಕಾರಣ ರಾಜೀನಾಮೆ ನೀಡಿದ್ದಾರೆ. ಇದೀಗ ಅವರ ತೆರವಾದ ಸ್ಥಾನಕ್ಕೆ ಚುನಾಚಣೆ ನಡೆಸಲಾಗುತ್ತಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications