Breaking: ಉಪ ರಾಷ್ಟ್ರಪತಿ ಚುನಾವಣೆಯ ಬಿಜೆಪಿ ಅಭ್ಯರ್ಥಿ ಆಗುತ್ತಾರಾ ಜಗದೀಪ್ ಧಂಖರ್?

ನವದೆಹಲಿ, ಜುಲೈ 16: ಭಾರತದಲ್ಲಿ ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಯುತ್ತಿರುವುದರ ಮಧ್ಯೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅನ್ನು ಭೇಟಿ ಮಾಡಿದ್ದಾರೆ.
ಈ ಇಬ್ಬರು ನಾಯಕರ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಗಿ ಇದೇ ಧಂಖರ್ ಅಖಾಡಕ್ಕೆ ಇಳಿಯುತ್ತಾರಾ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ.

ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆಗಾಗಿ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನೇತೃತ್ವದಲ್ಲಿ ಸಂಸದೀಯ ಮಂಡಳಿ ಸಭೆಯನ್ನು ನಡೆಸಲಾಗಿತ್ತು. ಈ ವೇಳೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷಗಳಿಗೂ ಅಭ್ಯರ್ಥಿ ಆಯ್ಕೆ ಬಗ್ಗೆ ಹೇಳಲಾಗಿತ್ತು.

Vice President election: West Bengal Governor Jagdeep Dhankhar called on PM Modi

ಉಪ ರಾಷ್ಟ್ರಪತಿ ಆಯ್ಕೆಯ ವಿಧಾನ:
2022ರಲ್ಲಿ ದೇಶದ 16ನೇ ಉಪ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಸಲಾಗುತ್ತದೆ. ಈ ವೇಳೆ ಸಂಸತ್ ಉಭಯ ಸದನಗಳ ಸದಸ್ಯರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ರಾಜ್ಯಸಭೆಯ 233 ಚುನಾಯಿತ ಸದಸ್ಯರು, ರಾಜ್ಯಸಭೆಯ 12 ನಾಮ ನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆಯ 543 ಸದಸ್ಯರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಒಟ್ಟು ಮೂರನೇ ಎರಡರಷ್ಟು ಮತಗಳನ್ನು ಪಡೆದುಕೊಳ್ಳುವ ಅಭ್ಯರ್ಥಿಯು ಮುಂದಿನ ಉಪ ರಾಷ್ಟ್ರಪತಿ ಆಗಿ ಆಯ್ಕೆ ಆಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+