ಆಗಸ್ಟ್ 5ರಂದು ಉಪರಾಷ್ಟ್ರಪತಿ ಚುನಾವಣೆ, ಅಂದೇ ಫಲಿತಾಂಶ

ಭಾರತದ ಉಪರಾಷ್ಟ್ರಪತಿ ಚುನಾವಣೆ ಆಗಸ್ಟ್ 5ರಂದು. ದೇಶದ ವಿವಿಧ ರಾಜ್ಯಗಳ ಶಾಸಕರು, ಸಂಸದರು ಸೇರಿದಂತೆ 790 ಜನ ಪ್ರತಿನಧಿಗಳಿಂದ ಮತ ಚಲಾವಣೆ. ಆಗಸ್ಟ್ 5ರಂದೇ ಫಲಿತಾಂಶ ಪ್ರಕಟ.

ನವದೆಹಲಿ, ಜುಲೈ 4: ಇದೇ ತಿಂಗಳ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಉಪ ರಾಷ್ಟ್ರಪತಿ ಚುನಾವಣೆಯೂ ನಡೆಯಲಿದೆ. ಆಗಸ್ಟ್ 5ರಂದು ಈ ಮತ್ತೊಂದು ಮಹತ್ವದ ಹುದ್ದೆಗೆ ಚುನಾವಣೆಯು ನಡೆಯಲಿದ್ದು, ಅದೇ ದಿನ ಫಲಿತಾಂಶ ಹೊರಬೀಳಲಿದೆ.

ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಅಧಿಕಾರಾವಧಿ ಆಗಸ್ಟ್ ತಿಂಗಳ 10ರಂದು ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲಾಗುತ್ತಿದೆ. ವಿವಿಧ ರಾಜ್ಯಗಳ ಶಾಸಕರು ಹಾಗೂ ಸಂಸತ್ ಸದಸ್ಯರು ಸೇರಿದಂತೆ ಒಟ್ಟು 790 ಜನ ಪ್ರತಿನಿಧಿಗಳು ಈ ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ.

Vice President elections on August 5

ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯ ಫಲಿತಾಂಶವು ಜುಲೈ 20ರಂದು ಹೊರಬೀಳುತ್ತದೆ. ಆ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ವತಿಯಿಂದ ಬಿಹಾರದ ಮಾಜಿ ರಾಜ್ಯಪಾಲ ರಾಮ್ ನಾಥ್ ಕೋವಿಂದ್ ಕಣಕ್ಕಿಳಿದಿದ್ದರೆ, ಕಾಂಗ್ರೆಸ್ ನೇತೃತ್ವದ ಯುಪಿಎ ಕಡೆಯಿಂದ ಮೀರಾ ಕುಮಾರ್ ಅವರು ಕಣಕ್ಕಿಳಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+