Jagdeep Dhankhar: ಉಪರಾಷ್ಟ್ರಪತಿ ಆಸ್ಪತ್ರೆಗೆ ದಾಖಲು
Jagdeep Dhankhar: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಕೂಡಲೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು (ಮಾರ್ಚ್ 09) ಬೆಳಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ಅವರನ್ನು ಮುಂಜಾನೆ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಏಮ್ಸ್ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿದುಬಂದಿದೆ.

ಜಗದೀಪ್ ಧನ್ಕರ್ (73)ಅವರು ಆಸ್ಪತ್ರೆ ದಾಖಲಾಗುತ್ತಿದ್ದಂತೆ ರಾಜಕೀಯ ನಾಯಕರು, ಗಣ್ಯರು ಅವರು ಬೇಗ ಚೇತರಿಸಿಕೊಂಡು ಬರಲಿ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಹಾಗೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಧನ್ಕರ್‌ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಆರೋಗ್ಯ ವಿಚಾರಿಸಿದ್ದೇನೆ. ಜಗದೀಪ್ ಧನ್ಕರ್ ಉತ್ತಮ ಆರೋಗ್ಯಕ್ಕಾಗಿ ಹಾಗೂ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಜಗದೀಪ್ ಧನ್ಕರ್ ಮುಂದೆ ಕಾನೂನು, ಸಂಸತ್ತಿನ ಒಳಗೆ ನಡೆದುಕೊಳ್ಳಬೇಕಾದ ರೀತಿ, ಶಿಸ್ತಿನ ವಿಚಾರದಲ್ಲಿ ವಾದ ಮಾಡಲು ಸಾಧ್ಯವಿಲ್ಲ. ಕಾರಣ ಮೂಲತಃ ಅಡ್ವೋಕೇಟ್ ಆಗಿರುವ ಧನ್ಕರ್ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಜನತಾ ದಳದಿಂದ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ಧನ್ಕರ್ ಅವರು ನಂತರ ಕಾಂಗ್ರೆಸ್ ಪಕ್ಷ ಸೇರಿದರು. 2003ರಲ್ಲಿ ಜಗದೀಪ್ ಧನ್ಕರ್ ಬಿಜೆಪಿ ಪಕ್ಷ ಸೇರಿಕೊಂಡರು. 2008ರಲ್ಲಿ ಜಗದೀಪ್ ಧನ್ಕರ್, ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಚಾರ ಸಮಿತಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ 2016ರಲ್ಲಿ ಬಿಜೆಪಿ ಕಾನೂನು ಹಾಗೂ ವ್ಯವಹಾರ ಸಮಿತಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.
2019ರಿಂದ 2022ರ ವರೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲಾರಾಗಿ ಸೇವೆ ಸಲ್ಲಿಸಿದ್ದಾರೆ. ಈ ವೇಳೆ ಜಗದೀಪ್ ಧನ್ಕರ್ ಅವರ ಕಾರ್ಯವೈಖರಿ ದೇಶವೇ ಮೆಚ್ಚಿಕೊಂಡಿತ್ತು. ಇನ್ನು 2022ರಲ್ಲಿ ಭಾರತದ ಉಪರಾಷ್ಟ್ರಪತಿಗಳಾಗಿ ಅವರಿಗೆ ಬಿಜೆಪಿ ಜವಬ್ದಾರಿ ವಹಿಸಿತು.












Click it and Unblock the Notifications