ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ: ಕೇದಾರನಾಥದಲ್ಲಿ ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್

|
Google Oneindia Kannada News

ಡೆಹ್ರಾಡೂನ್ ಜೂನ್ 06: ಉತ್ತರಾಖಂಡ್ ರಾಜ್ಯದ ಸುಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥದ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಹೆಲಿಕಾಪ್ಟರ್ ಅಪಘಾತ ಆದ ಘಟನೆ ನಡೆದಿದೆ. ಅಪಘಾತದಲ್ಲಿ ಸಿಲುಕಿದವರನ್ನು ರಕ್ಷಿಸಲಾಗಿದೆ. ಖಾಸಗಿ ವಿಮಾನಯಾನ ಸಂಸ್ಥೆಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡಿದ್ದು, ಬಳಿಕ ವಿಮಾನದಲ್ಲಿದ್ದವರು ಹಾಗೂ ಹೊರಗಿದ್ದವರು ಸಿಲುಕಿಕೊಂಡಿದ್ದ ಘಟನೆಯ ವಿಡಿಯೋ ಇದೀಗ ಬಹಿರಂಗವಾಗಿದೆ.

ಸುದ್ದಿ ಸಂಸ್ಥೆ ANI ಪ್ರಕಾರ, ಹೆಲಿಕಾಪ್ಟರ್ ಲ್ಯಾಂಡಿಂಗ್‌ನ ಈ ವಿಡಿಯೊ ಮೇ 31 ರದ್ದು, ಇದರಲ್ಲಿ ಖಾಸಗಿ ವಿಮಾನಯಾನ ಹೆಲಿಕಾಪ್ಟರ್ ಕೇದಾರನಾಥ ಹೆಲಿಪ್ಯಾಡ್‌ನಲ್ಲಿ ಇಳಿಯುವಾಗ ಹಠಾತ್ ನಿಯಂತ್ರಣವನ್ನು ಕಳೆದುಕೊಂಡಿತು. ಆದರೆ ನಂತರ ಪೈಲಟ್ ಪರಿಸ್ಥಿತಿಯನ್ನು ಹತೋಟಿಗೆ ತಂದರು ಮತ್ತು ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು. ಅದೃಷ್ಟವಶಾತ್ ಈ ಸಮಯದಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.

ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಿರುವ ವಿಡಿಯೋದಲ್ಲಿ ಆಕಾಶದಲ್ಲಿ ಹಾರಾಡುತ್ತಿದ್ದ ಹೆಲಿಕಾಪ್ಟರ್ ಹೇಗೆ ನಿಧಾನವಾಗಿ ಕೆಳಗೆ ಬಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ಕಾಣಬಹುದು. ಲ್ಯಾಂಡಿಂಗ್ ಮಾಡುವಾಗ, ಪೈಲಟ್ ಹೆಲಿಕಾಪ್ಟರ್‌ನ ನಿಯಂತ್ರಣವನ್ನು ಕಳೆದುಕೊಂಡಿರುವುದು ಕಂಡುಬರುತ್ತದೆ. ವಿಡಿಯೋದಲ್ಲಿ ಗಾಳಿಯಿಂದ ನೆಲಕ್ಕೆ ಚಲಿಸುವಾಗ, ಹೆಲಿಕಾಪ್ಟರ್ ತೂಗಾಡುತ್ತಿರುವುದನ್ನು ಕಾಣಬಹುದು. ಆದಾಗ್ಯೂ ಕೆಲವು ಸೆಕೆಂಡುಗಳ ನಂತರ, ಪೈಲಟ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅದನ್ನು ಸುರಕ್ಷಿತವಾಗಿ ಇಳಿಸಿದರು.

Video: Helicopter lost control while landing at Kedarnath

ಈ ವಿಡಿಯೊ ಕಾಣಿಸಿಕೊಂಡ ನಂತರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಇದೇ ವೇಳೆ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಖಾಸಗಿ ಹೆಲಿಕಾಪ್ಟರ್ ಆಪರೇಟರ್‌ಗಳಿಗೆ ನೀಡಿರುವ ಜಂಟಿ ಎಸ್‌ಒಪಿಯಲ್ಲಿ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಕೇಳಲಾಗಿದೆ ಎಂದು ಡಿಜಿಸಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಜೊತೆಗೆ ಅವರ ಚಟುವಟಿಕೆಗಳ ಸುರಕ್ಷತೆಯ ದೃಷ್ಟಿಯಿಂದ ಸ್ಪಾಟ್ ಚೆಕ್ ಅನ್ನು ಸಹ ಯೋಜಿಸಲಾಗಿದೆ.

ಉತ್ತರಾಖಂಡದಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರ ದಂಡೇ ಇದೆ. ಬಾಬಾನ ದರ್ಶನಕ್ಕಾಗಿ ಕೇದಾರನಾಥ ಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುತ್ತಿದ್ದಾರೆ. ಎರಡು ವರ್ಷಗಳ ಬಳಿಕ ಕೊರೊನಾ ಭೀತಿಯಿಂದ ಮುಕ್ತಿ ಪಡೆದ ಭಕ್ತರಿಗೆ ಚಾರ್‌ಧಾಮ್ ಯಾತ್ರೆ ಆರಂಭವಾಗಿದೆ. ಹೀಗಾಗಿ ಕೇದಾರನಾಥಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ.

English summary
Private helicopter lost control during a landing at Kedarnath. This video is viral.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X