Viral Vvideo: ವಿಮಾನದಲ್ಲಿ ಪ್ಯಾನಿಕ್ ಅಟ್ಯಾಕ್ ಆದ ವ್ಯಕ್ತಿಗೆ ಕಪಾಳಮೋಕ್ಷ: ವಿಡಿಯೋ ವೈರಲ್!, ಆಕ್ರೋಶ
Viral Vvideo: ವಿಮಾನ ಹಾರಾಟ ಪ್ರಾರಂಭವಾಗುವುದಕ್ಕೆ ಕೆಲವೇ ಕ್ಷಣಗಳ ಮುಂಚೆ ಇಂಡಿಗೋ ವಿಮಾನದಲ್ಲಿ ನಡೆದಿರುವ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಮುಂಬೈ - ಕೋಲ್ಕತ್ತಾ ಪ್ರಯಾಣಕ್ಕೆ ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಸಿಬ್ಬಂದಿ ಸಹಾಯ ಪಡೆಯುತ್ತಿದ್ದಾಗ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ. ಅದರಲ್ಲೂ ಹೃದಯ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಗೆ ಕಪಾಳಮೋಕ್ಷ ಮಾಡಲಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರಯಾಣಿಕನೊಬ್ಬ ವಿಮಾನದಲ್ಲಿ ತುರ್ತು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ವಾಯುಯಾನ ನಿಯಮಗಳ ಅಡಿಯಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳ ಲಾಗುತ್ತಿದೆ. ಇಷ್ಟಕ್ಕೂ ಈ ವೈರಲ್ ವಿಡಿಯೋದಲ್ಲಿ ಇರುವುದೇನು ಎನ್ನುವ ವಿವರ ಇಲ್ಲಿದೆ.

ಮುಂಬೈನಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನ 6E138 ರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬರು ವಿಮಾನದಲ್ಲೇ ಸಹ ಪ್ರಯಾಣಿಕನಿಗೆ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಜನಾಕ್ರೋಶ ವ್ಯಕ್ತವಾಗಿದೆ.
ವಿಮಾನ ಹಾರಾಟದ ಸಮಯದಲ್ಲಿ ವ್ಯಕ್ತಿಯೊಬ್ಬರು ಕ್ಯಾಬಿನ್ ಸಿಬ್ಬಂದಿಯಿಂದ ಸಹಾಯ ಪಡೆಯುತ್ತಿದ್ದರು. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರು ಸಹಾಯ ಕೋರಿದ್ದರು. ಆದರೆ ಅದೇ ಸಂದರ್ಭದಲ್ಲಿ ವಿಮಾನದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು, ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾನೆ. ಆನ್‌ಲೈನ್‌ನಲ್ಲಿ ಈ ವಿಡಿಯೋ ಕ್ಲಿಪ್‌ವೈರಲ್ ಆಗುತ್ತಿದ್ದು ಅದರಲ್ಲಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿ ಅಳುತ್ತಿರುವುದು ರೆಕಾರ್ಡ್ ಆಗಿದೆ. ಆದರೆ ಸಹ ಪ್ರಯಾಣಿಕ ನೀವು ಅವರನ್ನು ಯಾಕೆ ಹೊಡೆದರಿ, ಯಾರಿಗೂ ಮತ್ತೊಬ್ಬರನ್ನು ಹೊಡೆಯುವುದಕ್ಕೆ ಯಾವುದೇ ಹಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಮಾತನಾಡಬಹುದಿತ್ತು ಹೌದು ಎಲ್ಲರಿಗೂ ಸಮಸ್ಯೆ ಆಗಿದೆ. ಆಗೆಂದು ಯಾರಿಗೂ ಮತ್ತೊಬ್ಬರ ಕಪಾಳಮೋಕ್ಷ ಮಾಡುವ ಅಧಿಕಾರ ಇಲ್ಲ ಎಂದು ಹೇಳಿರುವುದು ವಿಡಿಯೋದಲ್ಲಿ ಇದೆ.
ಆರೋಪಿ ಬಂಧನ: ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕೋಲ್ಕತ್ತಾದಲ್ಲಿ ವಿಮಾನ ಲ್ಯಾಂಡ್ ಆದ ನಂತರ, ಆರೋಪಿಯನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಹೆಚ್ಚಿನ ತನಿಖೆಗಾಗಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವಿಮಾನಯಾನ ಸಂಸ್ಥೆಯು ವ್ಯಕ್ತಿಯನ್ನು "ಅಶಿಸ್ತಿನ ವ್ಯಕ್ತಿ" ಎಂದು ಘೋಷಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯುಯಾನ ಭದ್ರತಾ ಸಂಸ್ಥೆಗಳಿಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಹೇಳಲಾಗಿದೆ.
A young man suffers a panic attack, his co passenger slaps him. Indigo airlines says “All appropriate regulatory agencies have been duly informed, in line with protocol.”
— Rana Ayyub (@RanaAyyub) August 1, 2025
This is a criminal case and the man needs to be on a No Fly List @DGCAIndia pic.twitter.com/dY1gQC6ze0
ಇಂಡಿಗೋ ಹೇಳಿದ್ದೇನು ?
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಇಂಡಿಗೋ ಆಕ್ಷೇಪ ವ್ಯಕ್ತಪಡಿಸಿದೆ. ನಮ್ಮ ವಿಮಾನವೊಂದರಲ್ಲಿ ದೈಹಿಕ ಹಲ್ಲೆ ನಡೆದಿರುವು ಬಗ್ಗೆ ಮಾಹಿತಿ ಬಂದಿದೆ. ಈ ರೀತಿಯ ಅಶಿಸ್ತಿನ ನಡವಳಿಕೆ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ನಮ್ಮ ಪ್ರಯಾಣಿಕರು ಹಾಗೂ ಸಿಬ್ಬಂದಿಯ ಸುರಕ್ಷತೆ ಮತ್ತು ಘನತೆಗೆ ಧಕ್ಕೆ ತರುವ ಯಾವುದೇ ಕ್ರಮಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಸಂಸ್ಥೆ ಹೇಳಿದೆ.
ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ: ಇನ್ನು ಈ ಘಟನೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಯಾರಿಗೂ ಇನ್ನೊಬ್ಬರನ್ನು ಹಲ್ಲೆ ಮಾಡುವ ಅಧಿಕಾರ ಇಲ್ಲ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.












Click it and Unblock the Notifications