ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈನಡುಗಿಸುವ ವಿಡಿಯೋ; ಪ್ರವಾಹದಲ್ಲಿ ಕೊಚ್ಚಿ ಹೋದ ಕಾರುಗಳು

|
Google Oneindia Kannada News

ನವದೆಹಲಿ, ಜುಲೈ 12: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಿಮಾಚಲದ ಧರ್ಮಶಾಲಾದಲ್ಲಿ ಪ್ರವಾಹದಿಂದಾಗಿ ಭಾರೀ ಹಾನಿ ಸಂಭವಿಸಿದೆ. ಸೋಮವಾರ ಪ್ರವಾಹದಲ್ಲಿ ಹಲವು ಕಾರುಗಳು ಕೊಚ್ಚಿಕೊಂಡು ಹೋದ ದೃಶ್ಯ ಮೈನಡುಗಿಸುವಂತಿದೆ.

ಧರ್ಮಶಾಲಾದಲ್ಲಿ ಸೃಷ್ಟಿಯಾದ ದಿಢೀರ್ ಪ್ರವಾಹದಲ್ಲಿ ಕಾರುಗಳು ಕೊಚ್ಚಿಕೊಂಡು ಹೋಗುವ ದೃಶ್ಯವನ್ನು ವ್ಯಕ್ತಿಯೊಬ್ಬರು ಸೆರೆಹಿಡಿದಿದ್ದಾರೆ. ಈ 37 ಸೆಕೆಂಡಿನ ವಿಡಿಯೋದಲ್ಲಿ, ಹೋಟೆಲೊಂದರ ಸಮೀಪ ಪಾರ್ಕಿಂಗ್ ಮಾಡಿದ್ದ ವಾಹನಗಳು ಕೊಚ್ಚಿಹೋಗಿರುವ ದೃಶ್ಯ ಸೆರೆಯಾಗಿದೆ.

ಕೊಂಕಣ ಮತ್ತು ಗೋವಾ ಸೇರಿ ದೇಶದ ಹಲವೆಡೆ ಭಾರಿ ಮಳೆ ಕೊಂಕಣ ಮತ್ತು ಗೋವಾ ಸೇರಿ ದೇಶದ ಹಲವೆಡೆ ಭಾರಿ ಮಳೆ

"ಹಿಮಾಚಲದ ಧರ್ಮಶಾಲಾದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಕಾರುಗಳು ಕೊಚ್ಚಿ ಹೋಗುತ್ತಿವೆ. ಮನೆಗಳೂ ಕೊಚ್ಚಿ ಹೋಗುವ ಭೀತಿ ಎದುರಾಗಿದೆ" ಎಂದು ವಿಡಿಯೋ ಮಾಡಿರುವ ವ್ಯಕ್ತಿ ಹೇಳಿಕೊಂಡಿದ್ದಾರೆ.

Video: Several Cars Swept Away As Flash Flood In Himachals Dharamshala

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಈ ಹಿಂದೆ ಭಾರತೀಯ ಹವಾಮಾನ ಇಲಾಖೆ ನೀಡಿತ್ತು.

ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿರುವ ಹಿಮಾಚಲ ಪ್ರದೇಶಕ್ಕೆ ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ ತಂಡಗಳು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಿಗಾಗಿ ಪ್ರವಾಹ ಪೀಡಿತ ಪ್ರದೇಶಗಳನ್ನು ತಲುಪುತ್ತಿವೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ನೆರವು ಒದಗಿಸಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

English summary
Several cars were swept away, hotels damaged after flash floods caused by a cloudburst hit Bhagsu Nag village near Mcleodganj, Dharamshala in Himachal Pradesh on Monday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X