ತಮಿಳುನಾಡಿನ 27 ಸರ್ಕಾರಿ ಕಚೇರಿಯ ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ: 1.12 ಕೋಟಿ ವಶ
ಚೆನ್ನೈ, ಅಕ್ಟೋಬರ್ 15: ತಮಿಳುನಾಡು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ಇಲಾಖೆ ಶುಕ್ರವಾರ ರಾಜ್ಯಾದ್ಯಂತ 27 ಸರ್ಕಾರಿ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು, ತಿರುವರೂರ್ ಹೆದ್ದಾರಿ ಇಲಾಖೆಯ ಅತಿಥಿ ಗೃಹದಲ್ಲಿ 75 ಲಕ್ಷ ಸೇರಿದಂತೆ ಲೆಕ್ಕಕ್ಕೆ ಸಿಗದ 1.12 ಕೋಟಿ ರೂ. ವಶಪಡಿಸಿಕೊಂಡಿದೆ.
ಹೆದ್ದಾರಿ ಸಹಾಯಕ ನಿರ್ದೇಶಕರ ಕಚೇರಿ, ಪಂಚಾಯತ್, ಗ್ರಾಮೀಣಾಭಿವೃದ್ಧಿ ಇಲಾಖೆ, ವಿರುಧುನಗರ ಜಿಲ್ಲಾ ಕೈಗಾರಿಕಾ ಕೇಂದ್ರ ತಿರುನಲ್ವೇಲಿ ಸೇರಿದಂತೆ ಇತರರ ಕಚೇರಿಗಳಲ್ಲಿ ದಾಳಿ ನಡೆಸಲಾಯಿತು. ಡಿವಿಎಸಿ ಶುಕ್ರವಾರ ಪತ್ರಿಕಾ ಪ್ರಕಟಣೆಯ ಪ್ರಕಾರ, ನಾಮಕ್ಕಲ್‌ನ ಹೆದ್ದಾರಿ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 8.87 ಲಕ್ಷ ರೂ. ವಿರುದನಗರ ಎಡಿ, ಗ್ರಾಮೀಣಾಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಮತ್ತೊಮ್ಮೆ ದಾಳಿ ನಡೆಸಿ 6.67 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೃಷಿ ಸಹಾಯಕ ನಿರ್ದೇಶಕರ ಕಚೇರಿ ವಿಲ್ಲುಪುರಂನಲ್ಲಿ ಶೋಧ ನಡೆಸಿ 4.26 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ತಮಿಳುನಾಡಿನಲ್ಲಿ ಎಐಎಡಿಎಂಕೆ ಮಾಜಿ ಸಚಿವರಾದ ಎಸ್‌ಪಿ ವೇಲುಮಣಿ ಮತ್ತು ಸಿ ವಿಜಯಭಾಕರ್ ಅವರಿಗೆ ಸಂಬಂಧಿಸಿದ ಆಸ್ತಿಗಳಲ್ಲಿ ಶೋಧ ನಡೆಸಿತ್ತು.

ಎಸ್ಪಿ ವೇಲುಮಣಿ ಮತ್ತು ಸಿ ವಿಜಯಭಾಕರ್ ಅವರಿಗೆ ಸಂಬಂಧಿಸಿದ ಆಸ್ತಿಗಳಲ್ಲಿ ಡಿವಿಎಸಿ ಇಂದು ಮುಂಜಾನೆಯಿಂದ ಶೋಧ ನಡೆಸಿ, ಸಚಿವರ ವಿರುದ್ಧ ಡಿವಿಎಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದು, ಎಫ್‌ಐಆರ್ ಪ್ರಕಾರ ದಾಳಿ ನಡೆಸಲಾಗುತ್ತಿದೆ ಎಂದು ಹೇಳಲಾಗಿತ್ತು. ಅಧಿಕೃತ ಹೇಳಿಕೆಯ ಪ್ರಕಾರ, ಡಿವಿಎಸಿ ಗ್ರಾಮೀಣಾಭಿವೃದ್ಧಿ ಮಾಜಿ ಸಚಿವ ಮತ್ತು ಪ್ರಸ್ತುತ ತಮಿಳುನಾಡು ವಿಧಾನಸಭೆ ಸದಸ್ಯ ಎಸ್‌ಪಿ ವೇಲು ಮಣಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಸಚಿವರು ತಮ್ಮ ರಹಸ್ಯ ಕಂಪನಿಗಳಿಗೆ ಅನ್ಯಾಯವಾಗಿ ಟೆಂಡರ್‌ಗಳನ್ನು ನೀಡುವಲ್ಲಿ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. 2015 ಮತ್ತು 2018 ರ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಅಸ್ತಿತ್ವದಲ್ಲಿರುವ ಬೀದಿ ದೀಪಗಳನ್ನು ಲೆಡ್ ಲೈಟ್‌ಗಳೊಂದಿಗೆ ಬದಲಾಯಿಸುವಲ್ಲಿ ಸರ್ಕಾರದ ಬೊಕ್ಕಸಕ್ಕೆ ಸರಿಸುಮಾರು 500 ಕೋಟಿ ರೂಪಾಯಿ ನಷ್ಟವನ್ನು ಉಂಟುಮಾಡಿದೆ ಎಂಬ ಆರೋಪ ಮಾಡಲಾಗಿತ್ತು.












Click it and Unblock the Notifications