Vijay Joseph: ವಿಜಯ್ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಶಾಕ್: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಇಲ್ಲ!

Vijay Joseph: ತಮಿಳುನಾಡಿನಲ್ಲಿ ಉತ್ತಮ ಆಡಳಿತ ನೀಡುತ್ತಿರುವ ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಭಾರೀ ಹಿನ್ನಡೆ ಆಗಿದೆ. ತಮಿಳುನಾಡಿನ ವಿಧಾನಸಭೆ ಚುನಾವಣಾ ಪ್ರಚಾರದ ಸಮಯದಲ್ಲಿ ವಿಜಯ್ ಅವರ ರ‍್ಯಾಲಿಯಲ್ಲಿ ಮಕ್ಕಳು ಸೇರಿದಂತೆ 41 ಜನ ಮೃತಪಟ್ಟಿದ್ದರು.

ತಮಿಳುನಾಡಿನ ಕರೂರ್ ಪ್ರದೇಶದಲ್ಲಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ಈಚೆಗೆ ಈ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರು ಸರ್ಕಾರಿ ಉದ್ಯೋಗ / ಸರ್ಕಾರಿ ನೇಮಕಾತಿ (Government Job) ಪತ್ರ ವಿತರಿಸಿದ್ದರು. ಕಾಲ್ತುಳಿತದಲ್ಲಿ ಮೃತಪಟ್ಟ 41 ಜನರ ಕುಟುಂಬದವರ ಪೈಕಿ 32 ಕುಟುಂಬಗಳಿಗೆ ಕರುಣಾಳು ಸರ್ಕಾರಿ ಉದ್ಯೋಗ ನೇಮಕಾತಿ ಆದೇಶ ಪ್ರತಿಯನ್ನು ವಿಜಯ್ ಅವರು ವಿತರಿಸಿದ್ದರು.

Vijay Joseph

ಇದೀಗ ಕಳೆದ ವರ್ಷ ತಮಿಳುನಾಡಿನ ಕರೂರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡುವ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಅಲ್ಲದೆ ತಮಿಳುನಾಡು ಸರ್ಕಾರದ ಈ ನಿರ್ಧಾರವು ಸಂವಿಧಾನದ ಆರ್ಟಿಕಲ್ 14 (ಸಮಾನತೆಯ ಹಕ್ಕು) ಮತ್ತು ಆರ್ಟಿಕಲ್ 16 (ಸರ್ಕಾರಿ ಉದ್ಯೋಗದಲ್ಲಿ ಅವಕಾಶದ ಸಮಾನತೆ) ನಿಯಮಗಳನ್ನು ಉಲ್ಲಂಘನೆ ಮಾಡಿದಂತೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ ಈ ಮಾದರಿಯಲ್ಲಿ ಸರ್ಕಾರಿ ಉದ್ಯೋಗಗಳನ್ನು ನೀಡಿದರೆ, ಇದೇ ರೀತಿಯ ಉದ್ಯೋಗವನ್ನು ಕೋರಿ ಇತರರಿಗೂ ದೊಡ್ಡ ಪ್ರಮಾಣದಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಸೃಷ್ಟಿಯಾಗಲಿದೆ ಎಂದು ಹೈಕೋರ್ಟ್ ಉಲ್ಲೇಖಿಸಿದೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷ (DMK) ಅಧಿಕಾರದಲ್ಲಿದ್ದಾಗ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ವಿಜಯ್ ಅವರು ನಡೆಸಿದ್ದ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ಈ ಕಾಲ್ತುಳಿತದಲ್ಲಿ ಮಕ್ಕಳು ಸೇರಿದಂತೆ ನಲವತ್ತೊಂದು ಜನರು ಮೃತಪಟ್ಟಿದ್ದರು. ವಿಜಯ್ ಅವರು ಈ ಕಾರ್ಯಕ್ರಮಕ್ಕೆ ತಡವಾಗಿ ಬಂದದ್ದೇ ಈ ದುರಂತ ಸಂಭವಿಸಲು ಕಾರಣ ಎಂದು ತಮಿಳುನಾಡು ಪೊಲೀಸರು ಹೇಳಿದ್ದರು.

Vijay: ಕಾಲ್ತುಳಿತಕ್ಕೆ ಕಾರಣವೇನು ?

ವಿಜಯ್ ಅವರು ತಡವಾಗಿ ಬಂದಿದ್ದರಿಂದ ಅನುಮತಿ ನೀಡಲಾಗಿದ್ದ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನಸಂದಣಿಗೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದರು. ಅಲ್ಲದೆ ಈ ರ್ಯಾಲಿಯಲ್ಲಿ ಅಸಮರ್ಪಕ ಕುಡಿಯುವ ನೀರು, ಆಹಾರ ಮತ್ತು ಶೌಚಾಲಯ ಸೌಲಭ್ಯಗಳು ಸೇರಿದಂತೆ ಹಲವಾರು ಲೋಪಗಳನ್ನು ಉಲ್ಲೇಖಿಸಿದ್ದರು. ಈ ಆರೋಪಗಳನ್ನು ಟಿವಿಕೆ ತಿರಸ್ಕರಿಸಿತ್ತು. ಪೊಲೀಸರ ವೈಫಲ್ಯ ಮತ್ತು ಡಿಎಂಕೆ ಮಾಜಿ ಸಚಿವ ಸೆಂಥಿಲ್ ಬಾಲಾಜಿ ಅವರ ಪಿತೂರಿಯಿಂದಲೇ ಕಾಲ್ತುಳಿತ ಸಂಭಿವಿಸಿತ್ತು ಎಂದೂ ದೂರಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಅಕ್ಟೋಬರ್ 2025 ರಲ್ಲಿ ಸುಪ್ರೀಂ ಕೋರ್ಟ್ ರಾಜ್ಯ ಮಟ್ಟದ ವಿಶೇಷ ತನಿಖಾ ತಂಡದಿಂದ (SIT) ಕೇಂದ್ರ ತನಿಖಾ ದಳಕ್ಕೆ (CBI) ತನಿಖೆಗೆ ವರ್ಗಾಯಿಸಿತ್ತು. ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವನ್ನು ಒತ್ತಿಹೇಳಿತು. ತನಿಖೆಯು ಜನಸಂದಣಿ ನಿರ್ವಹಣಾ ವ್ಯವಸ್ಥೆಗಳು, ವಿಜಯ್ ಆಗಮನದ ಸಮಯ ಮತ್ತು ಪಕ್ಷದ ಸಂಘಟಕರು ಮತ್ತು ಸ್ಥಳೀಯ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆ ಸೇರಿದಂತೆ ಹಲವು ವಿಷಯಗಳನ್ನು ಉಲ್ಲೇಖಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+